Connect with us

DAKSHINA KANNADA

ಕಡಬದಲ್ಲಿ ಮೂರನೇ ದಿನವೂ ಮುಂದುವರೆದ ಕಿಲ್ಲರ್ ಆನೆಗಳ ಸೆರೆಗೆ ಕಾರ್ಯಾಚರಣೆ..!

Published

on

ಕಿಲ್ಲರ್ ಕಾಡಾನೆ ದಾಳಿಗೆ ಸಿಲುಕಿ ಇಬ್ಬರು ಮೃತಪಟ್ಟ ಘಟನೆ ನಡೆದ ದಕ್ಷಿಣ ಕನ್ನಡದ ಕಡಬದ ಪ್ರದೇಶದಲ್ಲಿ ಅಪರೇಷನ್ ಎಲಿಫೆಂಟ್  ಕಾರ್ಯಾಚರಣೆ ಮೂರನೇ ದಿನವೂ ಮುಂದುವರೆದಿದೆ.

ಕಡಬ : ಕಿಲ್ಲರ್ ಕಾಡಾನೆ ದಾಳಿಗೆ ಸಿಲುಕಿ ಇಬ್ಬರು ಮೃತಪಟ್ಟ ಘಟನೆ ನಡೆದ ದಕ್ಷಿಣ ಕನ್ನಡದ ಕಡಬದ ಪ್ರದೇಶದಲ್ಲಿ ಅಪರೇಷನ್ ಎಲಿಫೆಂಟ್  ಕಾರ್ಯಾಚರಣೆ ಮೂರನೇ ದಿನವೂ ಮುಂದುವರೆದಿದೆ.

ದುಬಾರೆ ಆನೆ ಕ್ಯಾಂಪ್ ನಿಂದ ನುರಿತ ಐದು ಆನೆಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಸಾಕಾನೆಗಳ ಜೊತೆಗೆ ದ್ರೋಣ್ ಮೂಲಕವೂ ಹಂತಕ ಆನೆಗಳ ಹುಡುಕಾಟಕ್ಕೆ ಅರಣ್ಯ ಇಲಾಖೆ ಕ್ರಮ ತೆಗೆದುಕೊಂಡಿದೆ.

ಸುಮಾರು 60 ಅರಣ್ಯ ಸಿಬ್ಬಂದಿಗಳಿರುವ ತಂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಕಳೆದ ಎರಡು ದಿನಗಳಿಂದ ನಿರಂತರ ಕಾಡಾನೆಗಳಿಗಾಗಿ ಹುಡುಕಾಟ ನಡೆಸುತ್ತಿದೆ.

ಕಾಡಾನೆ ಹುಡುಕುತ್ತಿರುವ ತಂಡಕ್ಕೆ ಕೊಣಾಜೆ ಅರಣ್ಯ ವ್ಯಾಪ್ತಿಯ ಪುತ್ತಿಗೆ ಎಂಬಲ್ಲಿ ಕಾಡಾನೆಗಳು ಇರುವ ಮಾಹಿತಿ ದೊರೆತಿದ್ದು, ತಂಡ ಇದೀಗ ಆ ಭಾಗದಲ್ಲಿ ತನ್ನ ಕಾರ್ಯಾಚರಣೆಯನ್ನು ಕೇಂದ್ರೀಕರಿಸಿದೆ.

ಸಾರ್ವಜನಿಕರ ಮನವಿ ಮೇರೆಗೆ ಈ ಪುಂಡಾಟಿಕೆಯ ಕಿಲ್ಲರ್ ಕಾಡಾನೆಗಳನ್ನು ಬೇರೆಡೆ ಸಾಗಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ.

ಸಾಕಾನೆಗಳ ಮೂಲಕ ಈ ಆನೆಗಳನ್ನು ಹಿಡಿದು ಬೇರೆ ಕಡೆಗೆ ಸ್ಥಳಾಂತರಿಸಲಿದೆ.

ಕಾಡಾನೆಗಳನ್ನು ಹಿಡಿದ ಬಳಿಕ ಈ ಭಾಗದಲ್ಲಿ ಅರಣ್ಯ ಭಾಗದಲ್ಲಿ ಆನೆ ಕಂದಕ, ಸೋಲಾರ್ ಬೇಲಿ ಸೇರಿದಂತೆ ಆನೆಗಳನ್ನು ನಾಡಿಗೆ ಬರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳನ್ನು ಈ ಭಾಗದಲ್ಲಿ ನಡೆಸಲು ಅರಣ್ಯ ಇಲಾಖೆ ತೀರ್ಮಾನಿಸಿದೆ.

ದಕ್ಷಿಣಕನ್ನಡ ಜಿಲ್ಲೆಯ ಅರಣ್ಯ ಭಾಗದಲ್ಲಿರುವ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ.

ಕೃಷಿಭೂಮಿ ಹಾನಿಯ ಜೊತೆಗೆ ಪ್ರಾಣ ಹಾನಿಗೂ ಈ ಕಾಡಾನೆಗಳು ಕಾರಣವಾಗುತ್ತಿದೆ. ಫೆ. 20 ರಂದು ಕಾಡಾನೆಗಳ ದಾಳಿಗೆ ಸಿಲುಕಿ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಮುಂಜಾನೆಯೇ ಇಬ್ಬರನ್ನು ಕಾಡಾನೆ ಬಲಿ ಪಡೆದುಕೊಂಡಿತ್ತು.

ಹಾಲು ಡಿಪ್ಪೋದಲ್ಲಿ ಕೆಲಸ ಮಾಡುತ್ತಿದ್ದ ರಂಜಿಲಾ ರೈ ಎನ್ನುವ ಯುವತಿ ಮನೆಯಿಂದ ಡಿಪ್ಪೋ ಕಡೆಗೆ ಹೋಗುತ್ತಿದ್ದ ಸಮಯದಲ್ಲಿ ಕಾಡಾನೆಯೊಂದ ಆಕೆಯನ್ನು ಅಟ್ಟಿಸಿಕೊಂಡು ಬಂದು ದಾಳಿ ಮಾಡಿ ಕೊಂದಿದೆ.

ಇದೇ ಸಮಯದಲ್ಲಿ ಯುವತಿಯನ್ನು ರಕ್ಷಿಸಲು ಬಂದ ಸ್ಥಳೀಯ ನಿವಾಸಿ ರಮೇಶ ರೈ ಯವರನ್ನು ಕಾಡಾನೆ ದಾಳಿ ಮಾಡಿ ಕೊಂದಿದೆ.

ಕಾಡಾನೆಗಳ ಹಾವಳಿಯಿಂದ ಬೇಸತ್ತಿರುವ ಸ್ಥಳೀಯರು ಈ ಆನೆಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಪರೇಷನ್ ಕಾಡಾನೆ ಆರಂಭಿಸಿದೆ.

ದುಬಾರೆಯ ಆನೆ ಕ್ಯಾಂಪ್ ನಿಂದ ಕಾಡಾನೆಗಳನ್ನು ಹಿಡಿಯಲು ಐದು ಆನೆಗಳನ್ನು ಕೊಣಾಜೆ ಅರಣ್ಯ ವಲಯದ ಸುತ್ತ ನಿಯೋಜಿಸಿದ್ದು ಮೂರನೇ ದಿವೂ ಕಾರ್ಯಾಚರಣೆ ಮುಂದುವರೆದಿದೆ ಆದ್ರೆ ಇದುವರೆಗೂ ಆನೆಗಳ ಇರುವಿಕೆ ಗುರುತ್ತಿಸಲು ಸಾಧ್ಯವಾಗಿಲ್ಲ.

ಇತ್ತ ಕಾಡಾನೆ ಇಬ್ಬರನ್ನು ಬಲಿ ಪಡೆದ ಬಳಿಕ ಮೀನಾಡಿ ಪರಿಸರದ ಜನ ಭಯದಿಂದ ಬದುಕುವಂತಹ ಸ್ಥಿತಿ ನಿರ್ಮಾಣಗೊಂಡಿದೆ.

ನರಹಂತಕ ಆನೆಗಳನ್ನು ಹಿಡಿದು ಬೇರೆಡೆ ಸಾಗಿಸಿದ ಬಳಿಕವೇ ಈ ಭಾಗದ ಜನ ನಿಟ್ಟುಸಿರು ಬಿಡುವ ಸ್ಥಿತಿಯಲ್ಲಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending