LATEST NEWS
ತಲವಾರು ಹಿಡಿದು ಸಾರ್ವಜನಿಕರನ್ನು ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..!
ಸಾರ್ವಜನಿಕವಾಗಿ ತಲವಾರು ಹಿಡಿದು ಓಡಾಡುತ್ತಿದ್ದ ವ್ಯಕ್ತಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ರವಿವಾರ ರಾತ್ರಿ ಕಲಬುರಗಿ ಸೂಪರ್ ಮಾರ್ಕೆಟ್ ಸಮೀಪ ನಡೆದಿದೆ.
ಕಲಬುರಗಿ: ಸಾರ್ವಜನಿಕವಾಗಿ ತಲವಾರು ಹಿಡಿದು ಓಡಾಡುತ್ತಿದ್ದ ವ್ಯಕ್ತಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ರವಿವಾರ ರಾತ್ರಿ ಕಲಬುರಗಿ ಸೂಪರ್ ಮಾರ್ಕೆಟ್ ಸಮೀಪ ನಡೆದಿದೆ.
ಗುಂಡು ತಗುಲಿ ಗಾಯಗೊಂಡ ಆರೋಪಿ ಅಬ್ದುಲ್ ಜಾಫರ್ ಸಾಬ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿ ಅಬ್ದುಲ್ ಜಾಫರ್ ಮುಂಬೈನಿಂದ ಇತ್ತೀಚೆಗೆ ಕಲಬುರಗಿಗೆ ಆಗಮಿಸಿದ್ದ ಎನ್ನಲಾಗಿದೆ.
ಚೌಕ್ ಪೊಲೀಸ್ ಠಾಣೆಯ ಪಿಎಸ್‌ಐ ವಾಹಿದ್ ಕೋತ್ಪಾಲ್ ಮುನ್ನೆಚ್ಚರಿಕೆ ಕ್ರಮವಾಗಿ ವ್ಯಕ್ತಿಗೆ ಶರಣಾಗುವಂತೆ ಹಾಗೂ ಸಾರ್ವಜನಿಕವಾಗಿ ಮಾರಕಾಸ್ತ್ರ ಹಿಡಿದು ಭಯದ ವಾತಾವರಣ ಉಂಟು ಮಾಡದಂತೆ ತಿಳಿ ಹೇಳಿದ ಮೇಲೆಯೂ ಆತ ಕೇಳದೇ ಇದ್ದಾಗ ಅನಿವಾರ್ಯವಾಗಿ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸ್ಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Shootout at #Kalaburagi #Karnataka. A man named Jaffer who was threatening people brandishing knife was shot at his feet and injured by police to over power him. Despite repeated appeals, he didn't listen. He was rushed to nearby hospital. Cops are investigating y he did that. pic.twitter.com/FQitDpXzlI
— Imran Khan (@KeypadGuerilla) February 6, 2023
FILM
ಮೊದಲ ಬಾರಿ ಮದುವೆ ರಹಸ್ಯ ಬಿಚ್ಚಿಟ್ಟ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್
ಬೆಂಗಳೂರು : ಬಿಗ್‌ಬಾಸ್ ಕನ್ನಡ ಸೀಸನ್ 10ರಲ್ಲಿ ಹಲವು ಸ್ಪರ್ಧಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಇದರಲ್ಲಿ ಹುಲಿ ಉಗುರು ಧರಿಸಿದ ಕಾರಣಕ್ಕೆ ಪೊಲೀಸರಿಂದ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ ಅವರ ಬಂಧನವಾಗಿತ್ತು. ಈಗ ಮದುವೆ ವಿಚಾರ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ.
ಬಿಗ್ ಬಾಸ್ ಮನೆಯಲ್ಲಿಯೇ ತಮ್ಮ ಮದುವೆ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ವರ್ತೂರು ಸಂತೋಷ್ ಅವರಿಗೆ ಮದುವೆ ಆಗಿದೆ. ಒಬ್ಬಳು ಹೆಣ್ಣು ಮಗು ಕೂಡ ಇದೆ. ಆದರೆ ಅವರು ಮದುವೆ ಆಗಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕೆಲದಿನಗಳ ಹಿಂದೆ ಸೋಷಿಯಲ್‌ಮೀಡಿಯಾದಲ್ಲಿ ಗುಲ್ಲೆದ್ದಿತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಸ್ವತಃ ವರ್ತೂರ್ ಅವರೇ ತಮ್ಮ ಮದುವೆ, ಪತ್ನಿ ಜೊತೆಗಿನ ಭಿನ್ನಾಭಿಪ್ರಾಯಗಳ ಕುರಿತು ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.
ಬಿಗ್‌ಬಾಸ್ ಮನೆ ಸೇರಿದಾಗಿನಿಂದ ಈ ವರೆಗೂ ತನಗೆ ಮದುವೆ ಆಗಿದೆ ಎಂಬ ಒಂದೇ ಒಂದು ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ ವರ್ತೂರು ಸಂತೋಷ್. ಈಗ ಗುಟ್ಟು ರಟ್ಟಾಗಿದೆ.
‘ವರ್ತೂರ ಸಂತೋಷ್ ಒಳಗಡೇ ಏನೈತೆ ಅನ್ನೋದನ್ನು ಹೇಳ್ತಿದ್ದೇನೆ. ನೋಡು ದೊಡ್ಡಪ್ಪ ನೀನು ಹೀಗು ತಾಳಿಕಟ್ಟು ಅಂದ್ರೆ ಕಟ್ಟಿಬಿಡ್ತಿನಿ. ನಾನು ಅವರಿಗೆ ಮಾತು ಕೊಟ್ಟು ಒಪ್ಪಿಕೊಂಡು ಬಿಟ್ಟೆ. ಮದುವೆಯೂ ಆಯ್ತು, ದಿನ ಕಳೆದಂತೆ, ಅಮ್ಮನನ್ನು ಇಗ್ನೋರ್ ಮಾಡೋಕೆ ಶುರು ಮಾಡಿದ್ರು. ನಾನು ಸಂಪಾದನೆ ಮಾಡಿದ ಜನರನ್ನು ತೊರೆದು ಇವರ ಹಿಂದೆ ಹೋಗಬೇಕು ಎಂದರೆ ಅದು ಸಾಧ್ಯವಾಗದ ಮಾತು. ಆಗ ಹೆಂಡತಿ ಮನೆ ಹತ್ತಿರ ಹೋಗ್ತಿನಿ. ನನ್ನ ಮಾತಿನ ಪ್ರಕಾರ ಬಂದ್ರೆ, ನೀನು ರಾಣಿನೇ ಎಂದು ಕರೆದೆ. ಮೊದಲು ನೀನು ಗೇಟಿಂದ ಆಚೆ ಹೋಗು ಎನ್ನುತ್ತಾರೆ. ಆವತ್ತು ನಾನು ಮಾತು ಕೊಟ್ಟು ಬಂದಿದ್ದೀನಿ ಇವತ್ತು ಆ ಮಾತಿನ ಮೇಲೆ ನಿಂತಿದ್ದೀನಿ’ ಎಂದಿದ್ದಾರೆ ವರ್ತೂರು.
ಮುಂದೇನಾಗುತ್ತೆ ಅನ್ನುವುದನ್ನ ಇವತ್ತಿನ ಎಪಿಸೋಡ್ ನಲ್ಲಿ ನೋಡ್ಬೇಕಷ್ಟೆ..
Ancient Mangaluru
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.
ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು. ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
DAKSHINA KANNADA
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.
ಪ್ರೀತಮ್ ಅವರು ಬೈಕ್ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್ ಪಂಪ್ ಕಡೆಯಿಂದ ಸರ್ವಿಸ್ ರೋಡ್‌ನಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್ ಕೆಟರಿಂಗ್ ಉದ್ಯಮ ನಡೆಸುತ್ತಿದ್ದರು. ಪ್ರೀತಮ್ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
- bengaluru6 days ago
ಸಿಂಪಲ್ ಆಗಿ ಮದುವೆಯಾದ ಒಳ್ಳೆ ಹುಡುಗ ಪ್ರಥಮ್
- bangalore6 days ago
ವಿನಯ್ ತರ ದುಷ್ಮಾನ್ ಆದ್ರೂ ಓಕೆ, ಆದ್ರೆ ಸಂಗೀತಾ ತರ ಪ್ರೆಂಡ್ಸ್ ಬೇಡ..!
- bangalore3 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- bangalore5 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್