Connect with us

    DAKSHINA KANNADA

    ಕ್ಯಾನ್ಸರ್ ವಿರುದ್ಧ ಹೋರಾಟ… ವೇಲ್ಸ್‌ ರಾಜಕುಮಾರಿಗೆ ಜಗತ್ತಿನೆಲ್ಲಡೆಯಿಂದ ಬೆಂಬಲ…!

    Published

    on

    ವೇಲ್ಸ್‌ ರಾಜಕುಮಾರಿ ಕೇಟ್ ಮಿಡಲ್ಟನ್ ಅವರು ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದು, ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಅವರಿಗೆ ವಿಶ್ವಾದ್ಯಂತ ಬೆಂಬಲ ವ್ಯಕ್ತವಾಗಿದೆ. ಜಗತ್ತಿನ ಹಲವು ಪ್ರಮುಖ ನಾಯಕರುಗಳು ವೇಲ್ಸ್‌ ರಾಜಕುಮಾರಿಯ ಶೀಘೃ ಚೇತರಿಕೆಗೆ ಶುಭ ಹಾರೈಸಿದ್ದಾರೆ.

    ket mid

    ರಾಜಕುಮಾರಿ ಕ್ಯಾಥರೀನ್‌ಗೆ ವಿಶ್ವಾದ್ಯಂತ ಬೆಂಬಲ..

    ಬ್ರಿಟನ್‌ನ ವೇಲ್ಸ್‌ ರಾಜಕುಮಾರಿ ಕೇಟ್‌ ಮಿಡಲ್‌ಟನ್‌ ಅವರಿಗೆ ಕ್ಯಾನ್ಸರ್‌ ಕಾಯಿಲೆ ದೃಡ ಪಟ್ಟ ಬಳಿಕ ಜಗತ್ತಿನಾದ್ಯಂತ ಬೆಂಬಲದ ಸಂದೇಶಗಳು ಹರಿದು ಬಂದಿವೆ. ಪ್ರಿನ್ಸೆಸ್ ಕೇಟ್ ಅವರ ಮಾವ, ಕಿಂಗ್ ಚಾರ್ಲ್ಸ್ III, ಪ್ರಸ್ತುತ ಸ್ವತಃ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ, ಕೇಟ್ ಅವರನ್ನು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿದ್ದಾರೆ.

    prince charls

    ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿರುವ ಪ್ರಿನ್ಸ್ ಹ್ಯಾರಿ ಮತ್ತು ಮೇಘನ್ ತಮ್ಮ ಅತ್ತಿಗೆಗೆ ಬೆಂಬಲದ ಸಂದೇಶವನ್ನು ಹೇಳಿಕೆಯ ಮುಖಾಂತರ ಹಂಚಿಕೊಂಡಿದ್ದಾರೆ: “ಕೇಟ್ ಅವರ ಶೀಘೃ ಗುಣಮುಖಕ್ಕಾಗಿ ಹಾರೈಸುತ್ತಿದ್ದು, ಅವರ ಕುಟುಂಬದೊಂದಿಗೆ ನಾವು ಇರಲಿದ್ದೇವೆ. ಕೇಟ್ ಮತ್ತು ಅವರ ಕುಟುಂಬ ಇದನ್ನ ತುಂಬಾ ಖಾಸಗಿಯಾಗಿ ನಿಭಾಯಿಸಲಿದೆ” ಎಂದು ಹೇಳಿದ್ದಾರೆ.

    ಇನ್ನು ಈ ಬಗ್ಗೆ ಬಕಿಂಗ್ಹ್ಯಾಮ್ ಅರಮನೆ ಪ್ರಕಟಣೆ ಹೊರಡಿಸಿದ್ದು, “ಕಿಂಗ್ ಚಾರ್ಲ್ಸ್‌ ಮತ್ತು ಕ್ಯಾಮಿಲ್ಲಾ ಅವರು ತಮ್ಮ ಪ್ರೀತಿಯ ಸೊಸೆಯೊಂದಿಗೆ ನಿಂತಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಅವರ ಜೊತೆ ಸಮಯ ಕಳೆದಿದ್ದಾರೆ. ಇಡೀ ಕುಟುಂಬ ಕೇಟ್ ಅವರಿಗೆ ಪ್ರೀಯನ್ನು ಹಾಗೂ ಕ್ಯಾನ್ಸ್ ವಿರುದ್ಧ ಹೋರಾಡಲು ಬೆಂಬಲ ನೀಡಿದೆ” ಎಂದು ಹೇಳಿದೆ.  ಇನ್ನು ಬಿಟನ್ ಪ್ರಧಾನಿ ರಿಶಿ ಸುನಕ್ ಅವರೂ ಕೂಡಾ ತನ್ನ X ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. “ಆರೋಗ್ಯದ ವಿಚಾರಕ್ಕೆ ಬಂದಾಗ ಕೇಟ್‌ ಅವರಿಗೆ ಚಿಕಿತ್ಸಾ ಸಮಯದಲ್ಲಿ ಅವರಿಗೆ ತುಂಬಾ ಖಾಸಗಿತನ ಬೇಕಿದೆ. ಅವರು ಹೆಚ್ಚು ಸಮಯವನ್ನು ತಮ್ಮ ಕುಟುಂಬದೊಂದಿಗೆ ಕಳೆಯಬೇಕಿದೆ. ಇಡೀ ದೇಶ ಅವರ ಶೀಘೃ ಚೇತರಿಕೆ ಕಂಡು ಹಿಂದಿನಿಂದ ಲವಲವಿಕೆಯಲ್ಲಿ ಇರುವುದನ್ನ ಕಾಣ ಬಯಸುತ್ತದೆ” ಎಂದಿದ್ದಾರೆ.

    ಬ್ರಿಟನ್ ಸಂಸತ್‌ನ ವಿರೋಧ ಪಕ್ಷ ಲೇಬರ್ ಪಾರ್ಟಿಯ ನಾಯಕರೂ ಕೂಡಾ ರಾಜಕುಮಾರಿಯ ಶೀಘೃ ಚೇತರಿಕೆಗೆ ಶುಭ ಹಾರೈಸಿದೆ. ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅವರೂ ಕೂಡಾ ತಮ್ಮ X ಖಾತೆಯಲ್ಲಿ ಪತ್ನಿ ಜಿಲ್‌ ಅವರೊಂದಿಗೆ ಶುಭ ಹಾರೈಸಿದ್ದಾರೆ. ” ರಾಜಕುಮಾರಿ ಕೇಟ್‌, ಪ್ರಪಂಚದ ಕೊಟ್ಯಾಂತರ ಜನ ನಿಮ್ಮ ಸಂಪೂರ್ಣ ಚೇತರಿಕೆಗಾಗಿ ಶುಭ ಹಾರೈಸುತ್ತಾರೆ” ಎಂದು ಬರೆದಿದ್ದಾರೆ.

    ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ X ನಲ್ಲಿ “ನೀವು ಈಗ ಕಷ್ಟದ ಸಮಯದಲ್ಲಿ ಸಾಗುತ್ತಿದ್ದೀರಿ, ಬ್ರಿಗಿಟ್ಟೆ ಮತ್ತು ನಾನು ನಿಮಗೆ ಸಂಪೂರ್ಣ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ.” ನಿಮ್ಮ ಶಕ್ತಿ ಮತ್ತು ನಿಮ್ಮಲ್ಲಿನ ಸ್ವಯಂ ನಿಗ್ರಹ ಶಕ್ತಿ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ.” ಎಂದು ಬರೆದುಕೊಂಡಿದ್ದಾರೆ.

    ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಕೂಡಾ ಶುಭ ಹಾರೈಸಿ ಧೈರ್ಯ ತುಂಬಿದ್ದು, “ಚಿಕಿತ್ಸೆಗೆ ಒಳಪಡುತ್ತಿರುವ ಕೇಟ್ ಅವರಿಗೆ ಕೆನಡಿಯನ್ನರ ಪರವಾಗಿ ನಮ್ಮ ಬೆಂಬಲ ಹಾಗೂ ಶೀಘೃ ಚೇತರಿಕೆಗೆ ಹಾರೈಸುತ್ತೇನೆ” ಎಂದು ಸಂದೇಶ ನೀಡಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending