Connect with us

    DAKSHINA KANNADA

    ಕೊಣಾಜೆ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ಅಪವಿತ್ರ ಪ್ರಕರಣ; ಇಬ್ಬರ ಬಂಧನ ;  

    Published

    on

     

    ಕೊಣಾಜೆ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ಅಪವಿತ್ರ ಪ್ರಕರಣ; ಇಬ್ಬರ ಬಂಧನ..!  

    The profane case of Konaja Sri Gopalakrishna Bhajana Mandir; Arrest of two ..!

    ಮಂಗಳೂರು: ಕೊಣಾಜೆಯ ಗೋಪಾಲಕೃಷ್ಣ ಭಜನಾ ಮಂದಿರದ ಒಳಗೆ ಮಲ, ಮೂತ್ರ ವಿಸರ್ಜಿಸಿ ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲಪಾಡಿ ಕೊಮರಂಗಳ ನಿವಾಸಿ ಮಹಮ್ಮದ್ ಸೊಹೈಲ್‌(19) ಮತ್ತು ತಲಪಾಡಿಯ ಪಿಲಿಕೂರು ನಿವಾಸಿ ನಿಜಾಮುದ್ದೀನ್‌(21) ಎಂಬವರನ್ನು ಬಂಧಿಸಲಾಗಿದೆ.ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್‌ ಶಶಿಕುಮಾರ್ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿವಿಧ ಕಡೆಗಳಲ್ಲಿ ಸಿಸಿಟಿವಿಯಲ್ಲಿ ಸೆರೆಯಾದ ವಿಡಿಯೋ ದೃಶ್ಯಾವಳಿಗಳನ್ನು ಸಂಗ್ರಹಿಸಿ ಆರೋಪಿಗಳ ಜಾಡು ಹಿಡಿದು ಹೋದ ಪೊಲೀಸರಿಗೆ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.

    ಕಾಣಿಕೆ ಹುಂಡಿಯಿಂದ ಹಣ ಕಳವು ಮಾಡಲು ಹೋಗಿದ್ದ ವೇಳೆ ಅಲ್ಲಿ ಹಣವಾಗಲೀ, ಬೆಳೆಬಾಳುವ ಸೊತ್ತುಗಳಾಗಲೀ ಸಿಗದೇ ಇದ್ದಾಗ ಡಬ್ಬಿ ಒಡೆದು ಇದನ್ನು ಬೇರೆ ಯಾರೋ ಮಾಡಿದ್ದಾರೆ ಎಂಬಂತೆ ತನಿಖೆ ಹಾದಿ ತಪ್ಪಿಸಲು ಯತ್ನಿಸಿದ್ದಾರೆ.

    ಬಳಿಕ ಮಲ, ಮೂತ್ರ ವಿಸರ್ಜಿಸಿ ಹುಚ್ಚರ ಕೃತ್ಯ ಎಂಬಂತೆ ಸನ್ನಿವೇಶವನ್ನು ಸೃಷ್ಟಿಸಿದ್ದಾರೆ ಎಂದು ವಿವರಿಸಿದರು. ತಂಡದಲ್ಲಿ ಇನ್ನೂ ಆರು ಮಂದಿ ಆರೋಪಿಗಳಿದ್ದು, ಕೊಣಾಜೆ, ಉಳ್ಳಾಲ, ಕಂಕನಾಡಿ ಗ್ರಾಮಾಂತರ, ಪುಂಜಾಲ ಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿ ಸೇರಿದಂತೆ ಒಟ್ಟು 9 ಕಡೆಗಳಲ್ಲಿ ಕಳವು ಕೃತ್ಯ ಎಸಗಿದ್ದಾರೆ.

    ಇವುಗಳಲ್ಲಿ ಐದು ದೇವಸ್ಥಾನದ ಹುಂಡಿ ಕಳವು ಮಾಡಿದ್ದಾರೆ. ಕೊಣಾಜೆ ಮಂದಿರದಲ್ಲಿ ಕೃತ್ಯ ಎಸಗುವ ಸ್ವಲ್ಪ ದಿನಗಳ ಮುಂಚೆ ಸಮೀಪದ ದೈವಸ್ಥಾನದ ಕಾಣಿಕೆ ಹುಂಡಿ ಹಳವು ಮಾಡಿದ್ದರು.

    ಬಳಿಕ ಗೋಪಾಲಕೃಷ್ಣ ದೇವಸ್ಥಾನದ ಬಳಿ ಈ ಹುಂಡಿಯನ್ನು ಎಸೆದು, ಅದೇ ದಿನ ಗೋಪಾಲಕೃಷ್ಣ ಮಂದಿರಕ್ಕೂ ನುಗ್ಗಲು ಯೋಚಿಸಿದ್ದರು. ತಲಪಾಡಿ ಪಿಲಿಕೂರು ಎಂಬಲ್ಲಿ ಸಿಕ್ಕಿದ ಸಿಸಿಟಿವಿ ವಿಡಿಯೋ ಆಧರಿಸಿ ಇವರನ್ನು ಸಂಶಯದ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇವರ ಕೃತ್ಯ ಬಯಲಾಗಿದೆ ಎಂದರು.

    DAKSHINA KANNADA

    ಕಟಪಾಡಿಯಲ್ಲಿ ವಾಹನಗಳ ಸರಣಿ ಅಪಘಾತ; ವಾಹನಗಳು ಜಖಂ

    Published

    on

    ಕಟಪಾಡಿ: ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಅ.17 ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ.


    ತಾಂತ್ರಿಕ ತೊಂದರೆಯಿಂದ ಟ್ಯಾಂಕ್‌ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್‌ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.


    ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    Continue Reading

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ವಿಧಾನ ಪರಿಷತ್‌ ಉಪ ಚುನಾವಣೆ: ದ.ಕ. ಜಿಲ್ಲಾದ್ಯಂತ ಮದ್ಯ ನಿಷೇಧ

    Published

    on

    ಮಂಗಳೂರು: ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

    Continue Reading

    LATEST NEWS

    Trending