Thursday, April 22, 2021

ಮಹಾಲಿಂಗೇಶ್ವರ ದೇವಳದ ಜೀರ್ಣೋದ್ಧಾರಕ್ಕೆ ನಡಯುತ್ತಿದೆ ಅಷ್ಟಮಂಗಳ ಪ್ರಶ್ನೆ ..!

ಉಡುಪಿ: ಕುಂದಾಪುರ ತಾಲೂಕು ಬಿಲ್ಲಾಡಿಯ ಕದ್ರಂಜೆಯಲ್ಲಿ 40-50 ವರ್ಷಗಳ ಹಿಂದೆ ಬಿದ್ದು ಹೋಗಿದ್ದ ಪ್ರಾಚೀನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಈಗಾಗಲೇ ಪ್ರಶ್ನಾ ಚಿಂತನೆಗಳು ನಡೆದಿವೆ. ದೇವಸ್ಥಾನದ ನವೀಕರಣಾರ್ಥ ಪ್ರಕ್ರಿಯೆಗಳು ಆರಂಭವಾಗಿರುವ ಹೊತ್ತಲ್ಲೇ ನೆಲಸಮವಾಗಿದ್ದ ಗರ್ಭಗುಡಿಯಲ್ಲಿ ಶೋಧ ನಡೆಸಿದಾಗ ಪ್ರಾಚೀನ ಶಿವಲಿಂಗವೊಂದು ಪತ್ತೆಯಾಗಿದೆ. ಇದರಿಂದ ಮಂದಿರ ಪುನರುತ್ಥಾನ ಕಾರ್ಯಕ್ಕೆ ನವೋತ್ಸಾಹದ ಸ್ಪರ್ಶವಾಗಿದೆ. ಕಳೆದ ನಾಲ್ಕೂವರೆ ದಶಕಗಳಿಂದ ಪಾಳು ಬಿದ್ದ ಕದ್ರಂಜೆ ಶ್ರೀಮಹಾಲಿಂಗೇಶ್ವರ ದೇವಾಲಯವನ್ನು ಯುವಕರೆಲ್ಲ ಸೇರಿ ಜೀರ್ಣೋದ್ಧಾರ ಮಾಡುವುದಕ್ಕೆ ಮುಂದಾಗಿದ್ದಾರೆ. ಈ ದೇವಳದ ಪ್ರಾಂಗಣ ಹಿಂದೊಮ್ಮೆ ಶಾಲೆಯಾಗಿತ್ತು. ನೂರಾರು ವಿದ್ಯಾರ್ಥಿಗಳಿಗೆ ಇಲ್ಲಿ ವಿದ್ಯೆ ದಾನಮಾಡಲಾಗಿತ್ತು. ಕ್ರಮೇಣ ಈ ದೇವಸ್ಥಾನದಲ್ಲಿ ಪೂಜೆ, ಧಾರ್ಮಿಕ ಕಾರ್ಯಗಳು ನಿಂತು ಪಾಳು ಬಿದ್ದಿದೆ.ಯುವಕರು ಒಟ್ಟಾಗಿ ಸಹೃದಯಿಗಳ ಸಹಕಾರದೊಂದಿಗೆ ದೇವಾಲಯ ನಿರ್ಮಾಣಕ್ಕೆ ಮುಂದಾಗಿದ್ದಾರೆ.ಮಣ್ಣಿನ ಅಡಿಯಲ್ಲಿ ಹೂತು ಹೋಗಿದ್ದ ಶಿವ ಲಿಂಗವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಹೊರಗೆ ತೆಗೆದಿದ್ದು ಪೂಜೆ ಸಲ್ಲಿಸಿದ್ದಾರೆ.. ಇನ್ನು ಒಂದು ವಾರಗಳ ಕಾಲ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...