Connect with us

    LATEST NEWS

    ಮನೆಯಲ್ಲಿದ್ದ ರೆಫ್ರಿಜರೇಟರ್‌ ಸ್ಫೋಟ..!

    Published

    on

    ಪುತ್ತೂರು: ರೆಫ್ರಿಜರೇಟರ್ ಸ್ಪೋಟಗೊಂಡು ಮನೆಯಲ್ಲಿದ್ದ ಇತರ ವಿದ್ಯುತ್ ಉಪಕರಣಗಳು ಬೆಂಕಿಗಾಹುತಿಯಾದ ಘಟನೆ ಚಿಕ್ಕಮುಡ್ನೂರು ಗ್ರಾಮದ  ಜಿಡೆಕಲ್ಲಿನಲ್ಲಿ ಜೂ.18ರಂದು ಬೆಳಿಗ್ಗೆ  ನಡೆದಿದೆ.

    ಜಿಡೆಕಲ್ಲು ಸರಕಾರಿ ಕಾಲೇಜು ಸಮೀಪ ಮೋನಪ್ಪ ಪುರುಷ ಎಂಬವರ ಮನೆಯಲ್ಲಿ ಫ್ರಿಡ್ಜ್‌ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದಿದ್ದ ಕಾರಣ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದಾಗಿ ಫ್ರಿಡ್ಜ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಯಲ್ಲಿದ್ದ ವಿದ್ಯುತ್ ಪರಿಕರಗಳು ಸೇರಿದಂತೆ ಇತರ ಸೊತ್ತುಗಳು ಹಾನಿಗೊಂಡಿದೆ. ಮನೆಗೆ ಅಪಾರ ಪ್ರಮಾಣದ ಹಾನಿಯುಂಟಾಗಿದೆ.

    Read More..; ಕಾಸರಗೋಡು : ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಅವಳಿ ಮಕ್ಕಳಿಬ್ಬರು ಸಾ*ವು

    ಘಟನೆ ಸಂಭವಿಸಿದ ಕೂಡಲೇ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ನೀರು ಹಾಗಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಳಿಕ ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

    LATEST NEWS

    ಕಾಸರಗೋಡು: ಗ್ರೈಂಡರ್ ಗೆ ಶಾಲ್‌ ಸಿಲುಕಿ ಮಹಿಳೆ ಸಾ*ವು

    Published

    on

    ಕಾಸರಗೋಡು: ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃ*ತಪಟ್ಟ ದಾರುಣ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.

    ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( ೫೨) ಮೃ*ತಪಟ್ಟವರು. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    LATEST NEWS

    ಶಿರೂರು ಗುಡ್ಡ ಕುಸಿ*ತ ಪ್ರಕರಣ : ನೀರುಪಾಲಾಗಿದ್ದ ವೃದ್ಧೆಯ ಶ*ವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು!

    Published

    on

    ಅಂಕೋಲಾ : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃ*ತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು.
    ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾ*ನಿಗೊಳಗಾಗಿದೆ.

    ಬೇಸರದ ಸಂಗತಿ ಎಂದರೆ, ಮೃ*ತದೇಹವನ್ನು ಕುಟುಂಬಿಕರಿಗೆ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳೀಯ ಆಡಳಿತ, ಶಾಸಕರು ಹೀಗೆ ಯಾರೆಂದರೆ ಯಾರೂ ಇರಲಿಲ್ಲ. ಗ್ರಾಮದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಹಿಳೆಯರು ಕಾಳಜಿ ಕೇಂದ್ರದಲ್ಲಿದ್ದಾರೆ.

    ಹೆಗಲಾದ ಪತ್ರಕರ್ತರು :
    ಹೊರುವವರಿಲ್ಲದೆ ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶ*ವ ಆಂಬುಲೆನ್ಸ್ ನಲ್ಲಿ ಉಳಿದಿದ್ದು, ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃ*ತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂ*ಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

    ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯು.ಆರ್.ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶ*ವಸಂಸ್ಕಾರದಲ್ಲಿ ಸಹಕರಿಸಿದರು.

    ಇದನ್ನೂ ಓದಿ : 4 ವರ್ಷದ ಬಾಲಕಿ ಕಿಡ್ನಾ*ಪ್, ಅತ್ಯಾ*ಚಾರ ಮಾಡಿ ಕೊ*ಲೆ.. ಮೃ*ತದೇಹ ಏನು ಮಾಡಿದ್ದ ಗೊತ್ತಾ?
    ಟ್ಯಾಂಕರ್ ಸ್ಫೋಟವೇ ಘಟನೆಗೆ ಕಾರಣ!
    ಶಿರೂರು ಗುಡ್ಡ ಕು*ಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರಿ ಸದ್ದಿನೊಂದಿಗೆ ಸ್ಫೋ*ಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾ*ಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ.

    ನೀರು‌ ಚಿಮ್ಮುತ್ತಿದ್ದಂತೆ ಬಾಂ*ಬ್‌ನಂತೆ ಸ್ಫೋ*ಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನಗಾಗಿ ಶೋಧ ಮುಂದುವರಿದಿದೆ.

    Continue Reading

    DAKSHINA KANNADA

    ಸರ್ಕಾರಿ ಬಸ್ ಮತ್ತು ಟ್ಯಾಂಕರ್ ಮಧ್ಯೆ ಅಪ*ಘಾತ; ಹಲವರಿಗೆ ಗಾ*ಯ

    Published

    on

    ಚಿಕ್ಕಮಗಳೂರು: KSRTC ಹಾಗೂ ಟ್ಯಾಂಕರ್ ಮಧ್ಯೆ ಭಯಾನಕ ಡಿ*ಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾ*ಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಮೂಡಿಗೆರೆ ತಾಲೂಕಿನ ಕಡೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರವಳಲು ಬಳಿ ಈ ಅಪ*ಘಾತ ಸಂಭವಿಸಿದೆ. ಅಪ*ಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾ*ಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾ*ನಿ ಸಂಭವಿಸಿಲ್ಲ.

    KSRTC, ಟ್ಯಾಂಕರ್ ಅಪ*ಘಾತದಿಂದ ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    Continue Reading

    LATEST NEWS

    Trending