Connect with us

    LATEST NEWS

    ಮೂರ್ಛೆ ಬಿದ್ದ ಕಾಗೆಗೆ ಮರುಜೀವ ನೀಡಿದ ರಕ್ಷಣಾ ದಳ ಸಿಬಂದಿ..! ಭೇಷ್..ಎಂದ ನೆಟ್ಟಿಗರು

    Published

    on

    ಕೊಯಮತ್ತೂರು/ಮಂಗಳೂರು: ವಿದ್ಯುತ್ ಪ್ರವಹಿಸಿ ಮೂರ್ಛೆ ಬಿದ್ದ ಕಾಗೆಯನ್ನು ಅಧಿಕಾರಿಯೊಬ್ಬರು ಜೀವ ನೀಡಿದ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ. ವೈರಲ್‌ ಆಗಿರುವ ವೀಡಿಯೋದಲ್ಲಿ ರಕ್ಷಣಾ ದಳ ಹಾಗೂ ಅಗ್ನಿಶಾಮಕ ದಳದ ಸಿಬಂದಿ ಮೂರ್ಚೆ ಬಿದ್ದ ಕಾಗೆಗೆ ಸಿಆರ್‌ಪಿ ಮಾಡುವ ಮೂಲಕ ಜೀವ ಉಳಿಸಿದ್ದಾರೆ.

    ವಿದ್ಯುತ್ ಪ್ರವಹಿಸಿ ಕಾಗೆಯೊಂದು ಮೂರ್ಛೆ ಹೋಗಿ ನೆಲಕ್ಕೆ ಬಿದ್ದಿತ್ತು. ಇದನ್ನು ಗಮನಿಸಿದ ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬಂದಿಯೊಬ್ಬರು ಕೂಡಲೇ ಕಾಗೆಯನ್ನು ಕೈಯಲ್ಲಿ ಎತ್ತಿಕೊಂಡು ಸಿಆರ್‌ಪಿ ನೀಡಿದ್ದಾರೆ. 10 ಸೆಕೆಂಡ್‌ಗಳ ಸಮಯ ಇರುವ ಈ ವೀಡಿಯೋದಲ್ಲಿ ಆ ದೃಶ್ಯಗಳ್ನು ಕಾಣಬಹುದಾಗಿದೆ.  ತನ್ನ ಬಾಯಿಯ ಮೂಲಕ ಕಾಗೆಗೆ ಉಸಿರು ನೀಡಿದ್ದಾರೆ. ಕೆಲವೇ ಸಮಯದಲ್ಲಿ ಕಾಗೆ ಮತ್ತೆ ಜೀವ ಪಡೆದುಕೊಂಡಿದೆ. ಕಾಗೆಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳದ ಅಧಿಕಾರಿಯ ಔದಾರ್ಯಕ್ಕೆ ಜನರಿಂದ ಪ್ರಶಂಸೆಯ ಸುರಿಮಳೆಯೇ ಸುರಿಯುತ್ತಿದೆ. ಇದ ನಿಜವಾದ ಸೆವೆ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ.

    LATEST NEWS

    ನಿಫಾ ಆತಂಕ; 41 ಜನರಿಗೆ ಹೋಂ ಐಸೊಲೇಷನ್

    Published

    on

    ಬೆಂಗಳೂರು: ರಾಜ್ಯದಲ್ಲಿ ನಿಫಾ ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಮತ್ತೆ ಹೋಮ್ ಕ್ಯಾರಂಟೈನ್ ಶುರುವಾಗಲಿದೆ.

    ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರು ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ ಐಸೊಲೇಷನ್ ಮಾಡಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾವಹಿಸಿದ್ದಾರೆ.

    ಇನ್ನು 41 ಸಂಪರ್ಕಿತರ ಪೈಕಿ ಒಬ್ಬರಿಗೆ ನಿಫಾ ಗುಣಲಕ್ಷಣ ಕಂಡು ಬಂದಿದ್ದು, ಗುಣಲಕ್ಷಣಗಳಿರುವ ವ್ಯಕ್ತಿಯ ರಕ್ತವನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾ ಇಟ್ಟಿದ್ದಾರೆ.

    Continue Reading

    LATEST NEWS

    ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ

    Published

    on

    ಬೆಂಗಳೂರು: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ ಹೊರಡಿಸಿತ್ತು. ಇದೀಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.

    ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 34,000 ಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ, 205 ದೇಗುಲಗಳ ವಾರ್ಷಿಕ ಆದಾಯ 25 ಲಕ್ಷ ರೂ.ಗಿಂತ ಹೆಚ್ಚಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿವೆ. 193 ದೇಗುಲಗಳನ್ನು 5 ಲಕ್ಷದಿಂದ ರೂ. 25 ಆದಾಯದೊಂದಿಗೆ ವರ್ಗ-ಬಿ ಎಂದು ಗುರುತಿಸಲಾಗಿದೆ. ಉಳಿದವುಗಳನ್ನು 5 ಲಕ್ಷ ರೂ. ಆದಾಯದೊಂದಿಗೆ ವರ್ಗ-ಸಿ ಎಂದು ವರ್ಗೀಕರಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ದೇವಾಲಯಗಳು ಭಕ್ತರಿಗೆ ಪ್ರಸಾದವನ್ನು ನೀಡುತ್ತವೆ.

    Continue Reading

    bengaluru

    ಜೈಲಿನಲ್ಲೇ ಮೊಬೈಲ್‌ ಬಳಕೆ !

    Published

    on

    ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


    ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
    ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
    ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
    ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ

    Continue Reading

    LATEST NEWS

    Trending