Monday, May 23, 2022

ಮಗ-ಸೊಸೆ ಜಗಳ ಬಿಡಿಸಲು ಹೋದ ಅಪ್ಪನನ್ನು ಕೊಂದ ಮಗ

ಬೆಳಗಾವಿ:ಮಗ-ಸೊಸೆ ಜಗಳ ಬಿಡಿಸಲು ಬಂದ ತಂದೆಯನ್ನೇ ಮಗ ಕೊಂದ ಘಟನೆ ಖಾನಾಪುರ ತಾಲೂಕಿನ ಬೇಡರಹಟ್ಟಿಯಲ್ಲಿ ನಡೆದಿದೆ.

ಕಲ್ಲಪ್ಪ ಪೂಜಾರಿ(51) ಮೃತ ವ್ಯಕ್ತಿ


ಯಲ್ಲಪ್ಪ ಕೋಡೆನ್ನವರ್ ಕುಡಿದು ಬಂದು ಹೆಂಡತಿ ಜೊತೆ ಜಗಳವಾಡುತ್ತಿದ್ದ. ಇದನ್ನು ನೋಡಲಾಗದೆ ಜಗಳ ಬಿಡಿಸಲು ಕಲ್ಲಪ್ಪ ಪೂಜಾರಿ ಮುಂದಾಗಿದ್ದಾರೆ. ಈ ವೇಳೆ ಕೋಪಗೊಂಡ ಮಗ ಕುಡುಗೋಲಿನಿಂದ ತಂದೆಗೆ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ.

ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  ಮೃತ ಕಲ್ಲಪ್ಪ ಪೂಜಾರಿ ಎರಡು ಮದುವೆಯಾಗಿದ್ದು 2ನೇ ಹೆಂಡತಿಯ ಪುತ್ರ ಯಲ್ಲಪ್ಪನಿಂದ ತಂದೆ ಕಲ್ಲಪ್ಪ ಕೊಲೆ ನಡೆದಿದೆ.

LEAVE A REPLY

Please enter your comment!
Please enter your name here

Hot Topics

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...