ಹಳೆ ಫೋಟೊ ವೈರಲ್ ಮಾಡಿ ಅದ್ಧೂರಿ ರಾಮೋತ್ಸವ ನಡೆದಿದೆ ಎಂದ ಕಿಡಿಗೇಡಿಗಳು
ಹಳೆ ಫೋಟೊ ವೈರಲ್ ಮಾಡಿ ಅದ್ಧೂರಿ ರಾಮೋತ್ಸವ ನಡೆದಿದೆ ಎಂದ ಕಿಡಿಗೇಡಿಗಳು
ಉಡುಪಿ: ಕೊರೊನಾ ವೈರಸ್ ಹಿನ್ನಲೆ ಕಾರ್ಯಕ್ರಮಗಳೆಲ್ಲಾ ರದ್ದಾಗಿದೆ. ಆದ್ರೆ ಲಾಕ್ ಡೌನ್ ಹಿನ್ನಲೆ ಮನೆಯಲ್ಲೇ ಕುಳಿತು ಸೋಷಿಯಲ್ ಮೀಡಿಯಾದಲ್ಲಿ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಯನ್ನ ಹಬ್ಬಿಸುತ್ತಿದ್ದಾರೆ.
ಹೌದು ಉಡುಪಿಯ ಕುತ್ಯಾರಿನಲ್ಲಿ ರಾಮೋತ್ಸವ ನಡೆದಿದೆ ಎಂದು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ತಿಂಗಳ ಹಿಂದೆ ನಡೆದ ಪೂರ್ವಭಾವಿ ಸಭೆಯ ಫೋಟೋ ಬಳಸಿ ಸುಳ್ಳುಸುದ್ದಿ ಹರಡುತ್ತಿದ್ದಾರೆ.
ಕುತ್ಯಾರಿನ ಭಕ್ತರೊಬ್ಬರ ಮನೆಯಲ್ಲಿ ರಾಮೋತ್ಸವ ನಡೆಸಲು ಪಲಿಮಾರು ಶ್ರೀಗಳು ನಿರ್ಧರಿಸಿದ್ದರು. ಅಲ್ಲದೇ ಈ ರಾಮೋತ್ಸವದ ಪೂರ್ವಭಾವಿ ಮೀಟಿಂಗ್ ತಿಂಗಳ ಹಿಂದೆ ನಡೆದಿತ್ತು.
ಆದ್ರೆ ಕೊರೊನಾ ವೈರಸ್ ದಾಳಿ ಹಿನ್ನೆಲೆ ಅದ್ದೂರಿ ರಾಮೋತ್ಸವವನ್ನು ಶ್ರೀಗಳು ಕೈಬಿಟ್ಟಿದ್ದರು. ಬಳಿಕ ಕೇವಲ ಶಿಷ್ಯನ ಜೊತೆ ಎಪ್ರಿಲ್ 2ರಂದು ಸರಳವಾಗಿ ರಾಮನ ಪೂಜೆ ಆಚರಿಸಿದ್ದರು.
ಆದರೆ ಇದೀಗ ಹಳೆಯ ಫೋಟೋವನ್ನು ಸೇರಿಸಿ ಯಾರೋ ದುಷ್ಕರ್ಮಿಗಳು ಜನರಿಗೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ.
ಈ ಸುಳ್ಳು ಸುದ್ದಿಯನ್ನು ಸೃಷ್ಟಿಸಿ ವ್ಯಾಪಕವಾಗಿ ಹರಡುತ್ತಿರುವವರು ನಿರ್ದಿಷ್ಟ ಸಮುದಾಯವೊಂದಕ್ಕೆ ಸೇರಿದ ವ್ಯಕ್ತಿಗಳಾಗಿದ್ದಾರಂತೆ.
ಹಾಗಾಗಿ ಎಪ್ರಿಲ್ 2ರಂದು ಅಂತಹ ಯಾವುದೇ ಕಾರ್ಯಕ್ರಮಗಳು ನಡೆದಿಲ್ಲ ಎಂದು ರಾಮೋತ್ಸವದ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುತ್ಯಾರ್ ಸ್ಪಷ್ಟೀಕರಣ ನೀಡಿದ್ದಾರೆ.
LATEST NEWS
ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ
ಬೆಂಗಳೂರು: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ ಹೊರಡಿಸಿತ್ತು. ಇದೀಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.
ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 34,000 ಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ, 205 ದೇಗುಲಗಳ ವಾರ್ಷಿಕ ಆದಾಯ 25 ಲಕ್ಷ ರೂ.ಗಿಂತ ಹೆಚ್ಚಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿವೆ. 193 ದೇಗುಲಗಳನ್ನು 5 ಲಕ್ಷದಿಂದ ರೂ. 25 ಆದಾಯದೊಂದಿಗೆ ವರ್ಗ-ಬಿ ಎಂದು ಗುರುತಿಸಲಾಗಿದೆ. ಉಳಿದವುಗಳನ್ನು 5 ಲಕ್ಷ ರೂ. ಆದಾಯದೊಂದಿಗೆ ವರ್ಗ-ಸಿ ಎಂದು ವರ್ಗೀಕರಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ದೇವಾಲಯಗಳು ಭಕ್ತರಿಗೆ ಪ್ರಸಾದವನ್ನು ನೀಡುತ್ತವೆ.
bengaluru
ಜೈಲಿನಲ್ಲೇ ಮೊಬೈಲ್ ಬಳಕೆ !
ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ
LATEST NEWS
ಬಾಲಕನ ಮರ್ಮಾಂಗದೊಂದಿಗೆ ಸಹಪಾಠಿಗಳ ಆಟ; ಆಸ್ಪತ್ರೆಗೆ ದಾಖಲಾದ ಬಾಲಕ
ಸುಳ್ಯ: ಹಾಸ್ಟೇಲ್ನಲ್ಲಿ ಉಳಿದು ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವೆಳೆದು ಗೆಳೆಯರು ಆಟವಾಡಿದ ಪರಿಣಾಮವಾಗಿ ಮರ್ಮಾಂಗಕ್ಕೆ ಹಾನಿಯಾಗಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.
ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷದ ಬಾಲಕ ಕೆಲ ಸಮಯದಿಂದ ಕೊಡಗು ಸಂಪಾಜೆಯ ಹಾಸ್ಟೇಲ್ನಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದ. ಸೆ.14 ರಂದು ಇಬ್ಬರು ಸಹಪಾಠಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು. ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವು ಬಂತೆಂದು ಮನೆಗೆ ಮರಳಿದ್ದಾನೆ.
ತಾಯಿಯೊಡನೆ ವಿಷಯ ಹೇಳಿಕೊಂಡಾಗ ತಕ್ಷಣವೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬಾಲಕ ಚೇತರಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ