Connect with us

    DAKSHINA KANNADA

    ಮಾಟಮಂತ್ರದ ಹೆಸರು ಹೇಳಿ ವೃದ್ಧೆಗೆ ಮೂತ್ರ ಕುಡಿಸಿದ ಗ್ರಾಮಸ್ಥರು

    Published

    on

    ಮಂಗಳುರು/ಅಮರಾವತಿ: ಮಾಟಮಂತ್ರ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ್ದು ಮಾತ್ರವಲ್ಲದೆ ಬಳಿಕ ಕಬ್ಬಿಣದ ರಾಡ್‌ನಿಂದ ಹೊಡೆದ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

    ಡಿಸೆಂಬರ್ 30ರಂದು ಈ ಘಟನೆ ನಡೆದಿದ್ದರೂ ಈ ತಿಂಗಳ ಆರಂಭದಲ್ಲಿ ಪೊಲೀಸ್ ದೂರು ದಾಖಲಾಗಿದ್ದು, ಶುಕ್ರವಾರ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಚಿಕಲ್ದಾರಾ ತಾಲೂಕಿನ ರೆತ್ಯಾಖೇಡ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.

    ಡಿಸೆಂಬರ್ 30ರಂದು ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆಕೆಯ ನೆರೆಹೊರೆಯವರು ಆಕೆಯನ್ನು ಹಿಡಿದು ಆಕೆ ಮಾಟಮಂತ್ರ ಮಾಡುತ್ತಿದ್ದಾಳೆಂದು ಆರೋಪಿಸಿ ಕಟ್ಟಿಹಾಕಿದ್ದಾರೆ. ಬಳಿಕ, ಗ್ರಾಮಸ್ಥರು ಸಂತ್ರಸ್ತೆಯನ್ನು ಮರದ ಕೋಲಿನಿಂದ ಹೊಡೆದು, ಕಪಾಳಮೋಕ್ಷ ಮಾಡಿ ಥಳಿಸಿದ್ದಾರೆ. ಆಕೆಯ ಕೈ ಮತ್ತು ಕಾಲುಗಳ ಮೇಲೆ ಬಿಸಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಲಾಗಿದೆ. ಆ ಮಹಿಳೆಗೆ ಮೂತ್ರ ಕುಡಿಯಲು ಮತ್ತು ನಾಯಿಯ ಮಲ ಸೇವಿಸಲು ಒತ್ತಾಯಿಸಲಾಯಿತು. ನಂತರ ಆಕೆಯ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಯಿತು. ಕೆಲಸಕ್ಕೆ ಹೋಗಿದ್ದ ಆ ಮಹಿಳೆಯ ಮಗ ಮತ್ತು ಸೊಸೆ ಮನೆಗೆ ಬಂದಾಗ ಈ ವಿಷಯ ತಿಳಿದು ಅವರು ಜನವರಿ 5ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

    DAKSHINA KANNADA

    ಮಂಗಳೂರು ಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ವರ್ಗಾವಣೆ

    Published

    on

    ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್‌ ಸಿ.ಎಲ್‌. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ತತ್‌ಕ್ಷಣ ಜಾರಿಗೆ ಬರುವಂತೆ ಸಿಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಅವರನ್ನು ಹಿಂಪಡೆಯಲಾಗಿದೆ.

    ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನ ಅಧಿಕಾರಿ ರವಿಚಂದ್ರ ನಾಯಕ್‌ ಅವರನ್ನು ನೂತನ ಆಯುಕ್ತರಾಗಿ ಸರಕಾರ ನೇಮಕ ಮಾಡಿದೆ.

    ಇದನ್ನೂ ಓದಿ : ಬಸ್ ಕದ್ದ ಪ್ರಕರಣಕ್ಕೆ ಟ್ವಿಸ್ಟ್; ಕಥೆ ಹಾಗಲ್ಲ ಹೀಗೆ ಎಂದ ವಿದೇಶದಲ್ಲಿರುವ ಮಾಲಕ

    ರವಿಚಂದ್ರ ನಾಯಕ್‌ ಅವರು ಈ ಮೊದಲು ಮಂಗಳೂರಿನಲ್ಲಿ ತಹಶೀಲ್ದಾರ್‌ ಹಾಗೂ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

    Continue Reading

    DAKSHINA KANNADA

    ನಾಳೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಬಿಹಾರಕ್ಕೆ

    Published

    on

    ಮಂಗಳೂರು : ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಜ. 20 ಮತ್ತು 21ರಂದು ಬಿಹಾರಕ್ಕೆ ತೆರಳಿದ್ದಾರೆ.

    ಪಾಟ್ನಾದಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಪೀಠಾಸೀನಾ ಅಧಿಕಾರಿಗಳ ಸಮ್ಮೇಳನದಲ್ಲಿ ಭಾಗವಹಿಸಲಿರುವ ಅವರು “ಸಂವಿಧಾನದ 75ನೇ ವಾರ್ಷಿಕೋತ್ಸವ: ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಸಂಸತ್ತು ಮತ್ತು ಶಾಸಕಾಂಗ ಸಂಸ್ಥೆಗಳ ಕೊಡುಗೆ” ಎಂಬ ವಿಷಯದಲ್ಲಿ ತಮ್ಮ ಅನಿಸಿಕೆಗಳನ್ನು ಮಂಡಿಸಲಿದ್ದಾರೆ.

    ಇದನ್ನೂ ಓದಿ: ತುಳುಚಲನಚಿತ್ರ ನಿರ್ಮಾಪಕರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

    ಈ ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

     

    Continue Reading

    DAKSHINA KANNADA

    ಧರ್ಮಸ್ಥಳ : ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    Published

    on

    ಧರ್ಮಸ್ಥಳ :  53 ನೇ ವರ್ಷದ ಉಚಿತ ಸಾಮೂಹಿಕ ವಿವಾಹವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.3 ರ ಶನಿವಾರ ಸಂಜೆ 6.48ರ ಗೋಧೂಳಿ ಲಗ್ನದಲ್ಲಿ ನಡೆಯಲಿದೆ.

    ‘ಮದುವೆ’ ಎನ್ನುವುದು ಅದೆಷ್ಟೋ ಜನರ ಸುಂದರ ಕನಸು. ಆದರೆ ಆರ್ಥಿಕ ಪರಿಸ್ಥಿತಿಯು ಆ ಖುಷಿಗೆ ಸಾಥ್ ನೀಡದೆ ಇರಬಹುದು. ಕೆಲವೊಮ್ಮೆ ಜೋಡಿಯ ಪವಿತ್ರ ಪ್ರೇಮಕ್ಕೆ ಕುಟುಂಬವೂ ಅಡ್ಡಿಯಾಗಬಹುದು. ಅಂತಹ ಯುವ ಜೋಡಿಗೆ ಸಿಹಿ ಸುದ್ದಿಯೊಂದು ಬಂದಿದ್ದು, ಶ್ರೀ ಕ್ಷೇತ್ರ ದರ್ಮಸ್ಥಳದಲ್ಲುಇ ನಡೆಯುವ ಸಾಮೂಹಿಕ ವಿವಾಹದ ಸದುಪಯೊಗವನ್ನು ಪಡೆದುಕೊಳ್ಳಬಹುದು.

    ಎರಡನೇ ವಿವಾಹಕ್ಕೆ ನಿರ್ಬಂಧ ಹೇರಿದ್ದು, ಮೊದಲ ಮದುವೆಗೆ ಮಾತ್ರ ಆದ್ಯತೆ ನೀಡಲಾಗುವುದು. ಮಧುಮಗನಿಗೆ ಧೋತಿ, ಶಾಲು ನೀಡಲಾಗುವುದು. ಮಧುಮಗಳಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ಹೂವಿನ ಹಾರ ಕೊಡಲಾಗುವುದು.

    ಇದನ್ನೂ ಓದಿ : ಕಣ್ಣೀರು ಹಾಕುತ್ತಾ ಮಹಾಕುಂಭಮೇಳದಿಂದ ಹೊರ ನಡೆದ ಸುಂದರಿ ಸಾಧ್ವಿ

    ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯ ಮೂಲಕವೇ ಮದುವೆಯ ಎಲ್ಲಾ ವೆಚ್ಚವನ್ನು  ಮಾಡಲಾಗುವುದು. ಆಸಕ್ತರು 2025 ಫೆ.25 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 08256-266644 ಸಂಖ್ಯೆಯನ್ನು ಸಂಪರ್ಕಿಸಬಹುದು.

    Continue Reading

    LATEST NEWS

    Trending