ಮಂಗಳೂರು/ಹಾಸನ : ಕಾಂತಾರ ಚಿತ್ರತಂಡದ ಮೇಲೆ ದೊಡ್ಡ ಆರೋಪವೊಂದು ಕೇಳಿ ಬಂದಿದೆ. ಚಿತ್ರೀಕರಣದ ನೆಪದಲ್ಲಿ ಅರಣ್ಯಕ್ಕೆ ಹಾನಿಯುಂಟು ಮಾಡಿದೆ ಎಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಪ ಕೇಳಿ ಬಂದಿದೆ.
‘ಕಾಂತಾರ’ ಸಿನಿಮಾ ಹಿಟ್ ಆದ ಬಳಿಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದು ಚಿತ್ರದ ಪ್ರಿಕ್ವೇಲ್. ಈ ಸಿನಿಮಾದ ಶೂಟಿಂಗ್ ಕುಂದಾಪುರದ ಸುತ್ತಮುತ್ತ ಸಾಗುತ್ತಿದೆ. ಇದರಲ್ಲಿಯೂ ಮಣ್ಣಿನ ಕಥೆ ಹೇಳಲು ರಿಷಬ್ ಶೆಟ್ಟಿ ರೆಡಿ ಆಗಿದ್ದಾರೆ. ಹೀಗಿರುವಾಗಲೇ ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪ ತಂಡದ ಮೇಲೆ ಬಂದಿದೆ. ಸಿನಿಮಾ ತಂಡದ ವಿರುದ್ದ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.
ಕಾಂತಾರ ಚಿತ್ರದ ಪ್ರಿಕ್ವೇಲ್ ಶೂಟಿಂಗ್ ಹಾಗೂ ಅದರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕುಂದಾಪುರದಲ್ಲೇ ನಡೆಯುತ್ತಿದೆ. ಈ ಕಾರಣಕ್ಕೆ ರಿಷಬ್ ಅವರು ತಮ್ಮ ಹುಟ್ಟೂರಿಗೆ ಶಿಫ್ಟ್ ಆಗಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಶೂಟಿಂಗ್ ನಡೆಸಲಾಗುತ್ತಿದೆ. ಜನವರಿ 2ರಿಂದ ಈ ಭಾಗದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರತಂಡ, ಶೂಟಿಂಗ್‌ಗಾಗಿ ಗೋಮಾಳ ಜಾಗಕ್ಕೆ ಪರವಾನಗಿ ಪಡೆದಿದೆ. ಆದರೆ, ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದು, ಚಿತ್ರತಂಡದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಚಿತ್ರೀಕರಣಕ್ಕೆ ಯಾವೆಲ್ಲಾ ಪರವಾನಿಗೆ ನೀಡಿದ್ದಾರೆ ಎಂಬುವುದರ ಬಗ್ಗೆ ಅರಣ್ಯ ಹಾಗೂ ಕಂದಾಯ ಇಲಾಖೆ ಬಹಿರಂಗಪಡಿಸಬೇಕು. ಅರಣ್ಯದೊಳಗೆ ಬೆಂಕಿ ಹಾಕುತ್ತಿರುವುದರಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ವನ್ಯಜೀವಿಗಳಿರುವ ಪ್ರದೇಶದಲ್ಲಿ ಚಿತ್ರೀಕರಣ ನಡೆಸಬಾರದು. ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಿ ಪರಿಸರ ಉಳಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಮುಂದಾಗಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು/ಬೆಂಗಳೂರು : ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11 ರ ಸ್ಪರ್ಧಿ ರಜತ್ ಕಿಶನ್ ಅವರು ಬಿಗ್ ಬಾಸ್ ಫಿನಾಲೆ ವಾರಕ್ಕೆ ಕಾಲಿಟ್ಟಿದ್ದಾರೆ. ಅತ್ತ ಅವರು ಅದೃಷ್ಟ ಪರೀಕ್ಷೆಗಿಳಿದ್ದಿದ್ದರೆ, ಇತ್ತ ಅವರ ಪತ್ನಿ ಅಕ್ಷಿತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಅದಕ್ಕೆ ಕಾರಣ ಟ್ರೋಲ್ ಪೇಜ್‌ಗಳು.
ಆ ಒಂದು ಫೋಟೋದಿಂದ ಅಕ್ಷಿತಾ ಪೊಲೀಸರ ಮೊರೆ ಹೋಗುವಂತಾಗಿದೆ. ದೊಡ್ಮನೆಯೊಳಗಿರುವ ರಜತ್ ಗೆಲುವಿನ ಸನಿಹದಲ್ಲಿದ್ದಾರೆ. ಆದ್ರೆ, ಹೊರಗಡೆ ಅವರ ಹಳೆ ಫೋಟೋವೊಂದು ವೈರಲ್ ಆಗಿದೆ. ರಜತ್ ಹಾಗೂ ಅವರ ಮಾಜಿ ಗೆಳತಿಯ ಜೊತೆಗಿನ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕಿಡಿಗೇಡಿಯೊಬ್ಬ ಈ ಫೋಟೋವನ್ನು ವೈರಲ್ ಮಾಡಿದ್ದಾನೆ. ಇದೀಗ ಆ ಫೋಟೋವನ್ನು ಟ್ರೋಲ್ ಪೇಜ್‌ಗಳು ಬಳಸಿಕೊಳ್ಳುತ್ತಿವೆ. ಆ ಫೋಟೋ ಡಿಲೀಟ್ ಮಾಡುವಂತೆ ರಜತ್ ಪತ್ನಿ ಅಕ್ಷಿತಾ ಮನವಿ ಮಾಡಿದ್ದಾರೆ. ಆದರೆ, ಟ್ರೋಲ್ ಪೇಜ್‌ಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಫೋಟೋ ಡಿಲೀಟ್ ಮಾಡಲು ಅಕ್ಷಿತಾ ಅಪರಿಚಿತ ವ್ಯಕ್ತಿ ನೀಡಿದ ಯುಪಿಐ ಐಡಿಗೆ 6,500 ರೂಪಾಯಿ ಹಣವನ್ನು ಹಾಕಿದ್ದಾರೆ. ಬಳಿಕ ಬೇರೆ ಬೇರೆ ಟ್ರೋಲ್ ಪೇಜ್‌ಗಳಲ್ಲಿ ಫೋಟೋ ಅಪ್ಲೋಡ್ ಆಗಿದೆ. ಫೋಟೋ ಡಿಲೀಟ್ ಮಾಡಲು ಹೇಳಿದಾಗ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಟ್ರೋಲ್ ಪೇಜ್‌ಗಳ ಕಾಟಕ್ಕೆ ಬೇಸತ್ತ ಅಕ್ಷಿತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಶ್ಚಿಮ ವಿಭಾಗದ ಸೈಬರ್ ಠಾಣೆಯಲ್ಲಿ ಹತ್ತಕ್ಕೂ ಹೆಚ್ಚು ಟ್ರೋಲ್ ಪೇಜ್ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತ ಕೇಸ್ ದಾಖಲಾಗುತ್ತಿದ್ದಂತೆ ಅತ್ತ ಟ್ರೋಲ್ ಪೇಜ್‌ಗಳು ಫೋಟೋ ಡಿಲೀಟ್ ಮಾಡಿವೆ. ಅಲ್ಲದೇ, ಖಾತೆಗಳನ್ನೂ ಡಿಲೀಟ್ ಮಾಡಿದ್ದಾರೆ. ಸದ್ಯ, ಟ್ರೋಲ್ ಮಾಡಿ ಹಣ ಸುಲಿಗೆ ಮಾಡುತ್ತಿರುವ ಖದೀಮರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಮಂಗಳೂರು/ಬೆಂಗಳೂರು : ಬಿಗ್ ಬಾಸ್ ಕನ್ನಡ ಫಿನಾಲೆಗೆ ದಿನಗಣನೆ ಶುರುವಾಗಿದೆ. ಮುಂದಿನ ವಾರ ಅದ್ದೂರಿ ಫಿನಾಲೆ ನಡೆಯಲಿದೆ. ಕಿಚ್ಚ ಸುದೀಪ್ ಅವರು 11 ಸೀಸನ್‌ಗಳ ಕಾಲ ಬಿಗ್ ಬಾಸ್ ಕನ್ನಡವನ್ನು ನಿರೂಪಿಸಿದ ನಂತರ ಕಾರ್ಯಕ್ರಮದಿಂದ ನಿರ್ಗಮಿಸುತ್ತಿದ್ದೇನೆ ಎಂದು ಘೋಷಿಸಿದ್ದಾರೆ.
ಬಿಗ್ ಬಾಸ್ ಕನ್ನಡ-11 ಆರಂಭವಾದ ಕೆಲ ವಾರಗಳ ಬಳಿಕ ಸುದೀಪ್ ಅವರು ಇದು ಬಿಗ್ ಬಾಸ್ ನಿರೂಪಕನಾಗಿ ನನ್ನ ಕೊನೆಯ ಸೀಸನ್ ಎಂದು ಟ್ವೀಟ್ ಮಾಡಿದ್ದರು. ವೀಕ್ಷಕರು ಕನ್ನಡ ಬಿಗ್ ಬಾಸ್ ನೋಡುವುದಕ್ಕೆ ಒಂದು ಪ್ರಮುಖ ಕಾರಣವೇ ಕಿಚ್ಚವೆಂದರೆ ತಪ್ಪಾಗದು. ಆದರೆ ಅವರು ನಿರೂಪಣೆಗೆ ಗುಡ್ ಬೈ ಹೇಳುತ್ತಿರುವುದು ದೊಡ್ಡ ಶಾಕಿಂಗ್ ಸಂಗತಿ ಆಗಿದೆ.
ಸುದೀಪ್ ಅವರ ಬಳಿ ‘ಮ್ಯಾಕ್ಸ್’ ಸಿನಿಮಾದ ಪ್ರಚಾರದ ವೇಳೆ ಹಲವು ಬಾರಿ ಬಿಗ್ ಬಾಸ್ ನಿರೂಪಣೆಗೆ ಗುಡ್ ಬೈ ಹೇಳಿದರ ಬಗ್ಗೆಯೇ ಕೇಳಲಾಗಿತ್ತು. ಎಲ್ಲದಕ್ಕೂ ಹೊಸಬರು ಬರಲಿ ಎಂದು ಹೇಳಿ, ತಾವು ನಿರೂಪಣೆಗೆ ಮತ್ತೆ ಬರುವುದಿಲ್ಲವೆನ್ನುವ ರೀತಿಯಲ್ಲೇ ಕಿಚ್ಚ ಉತ್ತರಿಸಿದ್ದರು.
ಇದೀಗ ಬಿಗ್ ಬಾಸ್ ಕೊನೆಯ ವೀಕೆಂಡ್ ಶೋ ಮುಗಿದ ಬಳಿಕ ಸುದೀಪ್ ಅವರು ಮತ್ತೊಮ್ಮೆ ಬಿಗ್ ಬಾಸ್ ಗೆ ಗುಡ್ ಬೈ ಹೇಳುವ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಕಿಚ್ಚನ ಟ್ವೀಟ್
ಬಿಗ್ ಬಾಸ್‌ನ ಕಳೆದ 11 ಸೀಸನ್‌ಗಳಿಂದ ನಾನು ತುಂಬಾ ಎಂಜಾಯ್ ಮಾಡಿದ್ದೇನೆ. ಮುಂದೆ ಬರುವ ಫಿನಾಲೆಯಲ್ಲಿ ನಾನು ಬಿಗ್ ಬಾಸ್ ನಿರೂಪಕನಾಗಿ ಕೊನೆಯ ಬಾರಿ ಕಾಣಿಸಿಕೊಳ್ಳುತ್ತಿದ್ದೇನೆ. ನಾನು ನಿಮ್ಮೆಲ್ಲರನ್ನು ರಂಜಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ. ಇದೊಂದು ಅವಿಸ್ಮರಣೀಯ ಪಯಣ. ಅದನ್ನು ನನ್ನ ಕೈಲಾದಷ್ಟು ನಿಭಾಯಿಸಿದ್ದಕ್ಕೆ ನನಗೆ ಖುಷಿ ಇದೆ. ಈ ಅವಕಾಶಕ್ಕಾಗಿ ಕಲರ್ಸ್ ಕನ್ನಡಕ್ಕೆ ಧನ್ಯವಾದ ಎಂದಿದ್ದಾರೆ.
ಮಂಗಳೂರು/ಥಾಣೆ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾ*ಳಿಯ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ . ಮಹಾರಾಷ್ಟ್ರದ ಥಾಣೆಯಲ್ಲಿ ಆರೋಪಿ ಮೊಹಮ್ಮದ್ ಇಲಿಯಾಸ್ ಅಲಿಯಾಸ್ ವಿಜಯ್ ದಾಸ್ ಯಾನೆ ಬಿಜೋಯ್ ದಾಸ್‌ನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ಬಾಂಗ್ಲಾದೇಶದವನಾಗಿದ್ದು, ಭಾರತಕ್ಕೆ ಬಂದ ಮೇಲೆ ತನ್ನ ಹೆಸರನ್ನು ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್‌ನಿಂದ ಜಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದ ಎನ್ನಲಾಗಿದೆ. ಅಲ್ಲದೇ, ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಇಲಿಯಾಸ್‌ಗಳನ್ನು ಆತ ಬಳಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಕೃ*ತ್ಯ ಎಸಗಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಸ್ಥಳೀಯ ರೆಸ್ಟೋರೆಂಟ್‌ನಲ್ಲಿ ವೇಟರ್ ಆಗಿ ಆತ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಕಳೆದ ಗುರುವಾರ(ಜ.16) ಬೆಳಗಿನ ಜಾವ 2 ಗಂಟೆಗೆ ನಟ ಸೈಫ್ ಅಲಿ ಖಾನ್ ನಿವಾಸಕ್ಕೆ ನುಗ್ಗಿದ್ದ ಆರೋಪಿ ನಟನ ಮೇಲೆ ಹ*ಲ್ಲೆ ನಡೆಸಿದ್ದ. ಈ ಹ*ಲ್ಲೆಯಿಂದ ಸೈಫ್ ಅವರ ಕುತ್ತಿಗೆ ಹಾಗೂ ಬೆನ್ನಿನ ಭಾಗದಲ್ಲಿ ಗಾಯಗಳಾಗಿತ್ತು. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ತಿಳಿದು ಬಂದಿದೆ.
Pingback: ಅತ್ತ ಬಿಗ್ ಬಾಸ್ ಫಿನಾಲೆ ತಲುಪಿದ ರಜತ್…ಇತ್ತ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ! - NAMMAKUDLA NEWS - ನಮ್ಮಕುಡ್ಲ ನ್ಯೂಸ