Wednesday, May 18, 2022

ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡದಂತೆ ಗಂಡನ ವಿರುದ್ಧ ಹೆಂಡತಿಯ ವಿಲಕ್ಷಣ ಆಕ್ಷೇಪಣಾ ಪತ್ರ..!

ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡದಂತೆ ಗಂಡನ ವಿರುದ್ಧ ಹೆಂಡತಿಯ ವಿಲಕ್ಷಣ ಆಕ್ಷೇಪಣಾ ಪತ್ರ..!

ಬಂಟ್ವಾಳ : ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬೇಡಿ ಎಂದು ಹೆಂಡತಿಯೊಬ್ಬಳು ಗಂಡನ ವಿರುದ್ದ ಆಕ್ಷೇಪಣೆ ಪತ್ರ ಸಲ್ಲಿಸಿದ ವಿಲಕ್ಷಣ ಘಟನೆ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.

ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಅನಂತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನವೀನ್ ಎಂಬವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು.


ಅ ಬಳಿಕ ಇಂದು ನಾಮಪತ್ರದ ಪರಿಶೀಲನೆ ವೇಳೆ ಇವರ ಪತ್ನಿ ಬೆಳ್ತಂಗಡಿ ನಿವಾಸಿ ಅಕ್ಷತಾ ಅವರು ಅನಂತಾಡಿ ಗ್ರಾಮ ಪಂಚಾಯತ್ ಗೆ ಆಗಮಿಸಿ ನನ್ನ ಗಂಡನಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಚುನಾವಣಾಧಿಕಾರಿಯವರಿಗೆ ಆಕ್ಷೇಪಣೆ ಪತ್ರ ನೀಡಿದ್ದಾರೆ.

ನವೀನ್ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಸಹಿತ ಮೂರು ಪ್ರಕರಣಗಳು ದಾಖಲು ಇದೆ. ಹಾಗಾಗಿ ಅವರಿಗೆ ಚುನಾವಣೆ ಗೆ ಸ್ಪರ್ಧಿಸಲು ಅವಕಾಶ ನೀಡಬಾರದು,ಜೊತೆಗೆ ನವೀನ್ ಅವರ ಮೇಲೆ ಕ್ರಿಮಿನಲ್ ಪ್ರಕರಣ ಇದ್ದರೂ ಕೂಡ ನಾಮಪತ್ರದಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ ಗಳು ಇಲ್ಲ ಎಂದು ನಮೂದಿಸಿದ್ದಾರೆ ಎಂದು ಇದು ನ್ಯಾಯಸಮ್ಮತವೇ ಎಂದು ಅವರು ಪ್ರಶ್ನಿಸಿ ಆಕ್ಷೇಪಣೆ ಪತ್ರ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳದಲ್ಲಿ ಬೈಕ್ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸ್ ಠಾಣೆಯ ‌ಇನ್ಸ್‌ಪೆಕ್ಟರ್ ವಿವೇಕಾನಂದ ಅವರ ನೇತೃತ್ವದ ತಂಡ ಬಂಧಿಸಿದೆ.ಅಕ್ಬರ್, ಸಿದ್ದೀಕ್, ಸಮೀರ್ ಬಂಧಿತ ಆರೋಪಿಗಳು. ಇತ್ತೀಚೆಗೆ ಬಂಟ್ವಾಳ ನಗರ...

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...

ಕಾಂಗ್ರೆಸ್‌ ಪಕ್ಷಕ್ಕೆ ‘ಕೈ’ ಕೊಟ್ಟ ಹಾರ್ದಿಕ್‌ ಪಟೇಲ್‌: ಟ್ವಿಟ್ಟರ್‌ನಲ್ಲಿ ಘೋಷಣೆ

ಅಹಮದಾಬಾದ್‌: ಕಾಂಗ್ರೆಸ್‌ ಯುವ ಮುಖಂಡ ಹಾಗೂ ಗುಜರಾತ್‌ನ ಪಾಟಿದಾರ್‌ ಸಮುದಾಯದ ನಾಯಕ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿಮಾತುಕತೆ ನಡೆಸಿದ...