ಮಂಗಳೂರು/ಧಾರವಾಡ: ರೀಲ್ಸ್ ಹುಚ್ಚಾಟಕ್ಕೆ ಬಿದ್ದು ಗದಗ ಜಿಲ್ಲೆಯ ಗಜೇಂದ್ರಗಡದ ಮಹಿಳೆಯೊಬ್ಬಳು ಜೀ*ವ ಕಳೆದುಕೊಂಡಿರುವ ದುರ್ಘಟನೆ ಧಾರವಾಡದಲ್ಲಿ ನಡೆದಿದೆ.
ಶ್ರೀನಗರದ ನಿವಾಸಿ ಶ್ವೇತಾ ಗುದಗಾಪುರ (24) ಮೊಬೈಲ್‌ನಲ್ಲಿ ರೀಲ್ಸ್ ಮಾಡುತ್ತಿದ್ದು, ಪತಿಯಿಂದ ದೂರವಾಗಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೋರ್ವನ ಸಂಪರ್ಕ ಸಾಧಿಸಿ ತನ್ನ ಜೀವವನ್ನು ಅಂ*ತ್ಯಗೊಳಿಸಿದ್ದಾಳೆ.
ರೀಲ್ಸ್ ಕಥೆ ಏನು ?
ಬೆಳಗಾವಿ ಜಿಲ್ಲೆಯ ರಾಮದುರ್ಗದ ವಿಶ್ವನಾಥ ಎಂಬುವರೊಂದಿಗೆ 5 ವರ್ಷಗಳ ಹಿಂದೆ ಶ್ವೇತಾಳನ್ನು ಮದುವೆ ಮಾಡಿ ಕೊಡಲಾಗಿತ್ತು. ವಿಶ್ವನಾಥ ಡಿಟಿಎಚ್ ಇನ್ ಸ್ಟಾಲೇಶನ್ ಕೆಲಸ ಮಾಡಿಕೊಂಡಿದ್ದನು. ಇಬ್ಬರೂ ಪರಸ್ಪರ ಪ್ರೀತಿಯಿಂದಲೇ ಇದ್ದರು. ಆದರೆ, ಶ್ವೇತಾಳಿಗೆ ರೀಲ್ಸ್ ಮಾಡುವ ಹವ್ಯಾಸ ಚಟವಾಗಿ ಬದಲಾಗಿತ್ತು. ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದ ವಿಜಯ ನಾಯ್ಕರ ಪದೇ ಪದೇ ಕಾಮೆಂಟ್ ಮಾಡಿದ್ದರಿಂದ ಪರಸ್ಪರ ಇಬ್ಬರಿಗೂ ಪರಿಚಯವಾಯಿತು. ಪರಿಚಯ ಬಳಿಕ ಪ್ರೇಮಕ್ಕೆ ತಿರುಗಿತು. ಕೊನೆಗೆ ಆತನೊಂದಿಗೆ ಸಂಪರ್ಕ ಸಾಧಿಸಿ, ಕಳೆದ ಒಂದೂವರೆ ವರ್ಷದ ಹಿಂದೆ ಶ್ವೇತಾ ಪತಿಯನ್ನು ತೊರೆದು ಧಾರವಾಡಕ್ಕೆ ಬಂದು ನೆಲೆಯಾಗಿದ್ದಳು. ವಿಜಯ ನಾಯಕ ಶ್ರೀನಗರದಲ್ಲಿ ಆಕೆಗೆ ಬಾಡಿಗೆ ಮನೆ ಸಹ ಮಾಡಿಕೊಟ್ಟಿದ್ದನು. ಇದೇ ವೇಳೆ ಆಕೆಯನ್ನು ಮದುವೆಯಾಗುವುದಾಗಿ ಹೇಳಿದ ವಿಜಯ, ಆಕೆಯಿಂದ ಪತಿಗೆ ವಿಚ್ಛೇದನಕ್ಕೆ ನೋಟಿಸ್ ಸಹ ಕೊಡಿಸುವ ಪ್ರಯತ್ನ ಮಾಡಿದ್ದನು. ಆದರೆ, ನ್ಯಾಯಾಲಯದಲ್ಲಿ ನಿರೀಕ್ಷೆಯಂತೆ ಇಬ್ಬರಿಗೂ ವಿಚ್ಚೇದನ ಸಿಗಲಿಲ್ಲ. ಪತಿ-ಪತ್ನಿ ಕೂಡಿ ಜೀವನ ಮಾಡಲು ಸೂಚಿಸಿತ್ತು.
ಇದ್ದಕ್ಕಿದ್ದಂತೆ ಶ್ವೇತಾ ಕಾಣೆ :
ನ್ಯಾಯಾಲಯದ ಆದೇಶದಂತೆ ಕೆಲ ದಿನ ಪತಿ ಮನೆಯಲ್ಲಿದ್ದ ಶ್ವೇತಾ ಏಕಾಏಕಿ ಮನೆಯಿಂದ ಕಾಣೆಯಾದಾಗ ಎಲ್ಲೆಡೆ ಹುಡುಕಿದರೂ ಪತ್ತೆ ಆಗಿರಲಿಲ್ಲ. ಕೊನೆಗೆ ಧಾರವಾಡದಲ್ಲಿದ್ದಾಳೆ ಎಂಬ ಮಾಹಿತಿ ಅನ್ವಯ ಪೋಷಕರು ಹಾಗೂ ಪತಿ ಬಂದು ಕರೆದೊಯ್ಯಲು ಯತ್ನಿಸಿದರೆ ಆಕೆ ಒಪ್ಪಿಕೊಳ್ಳಲಿಲ್ಲ. ತಾನು ವಿಜಯನನ್ನು ಬಿಟ್ಟು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಬಿಟ್ಟಿದ್ದಳು. ಇದರಿಂದಾಗಿ ನೊಂದ ಪೋಷಕರು ತಮ್ಮೂರಿಗೆ ಮರಳಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ಗುರುವಾರ ರಾತ್ರಿ ಶ್ವೇತಾ ತಾನು ಬಾಡಿಗೆ ಮನೆಯಲ್ಲಿಯೇ ನೇ*ಣಿಗೆ ಶ*ರಣಾಗಿದ್ದಾಳೆ. ಈ ಕುರಿತು ಶ್ವೇತಾಳ ತಾಯಿ ಶಶಿಕಲಾ ಸಾವಂತ ಪ್ರತಿಕ್ರಿಯೆನೀಡಿ, ‘ಮಗಳು ಆ*ತ್ಮಹತ್ಯೆ ಮಾಡಿಕೊಳ್ಳಲು ಆರೋಪಿ ವಿಜಯ ನಾಯಕ್ ಕಾರಣ’ ಎಂದು ಆರೋಪಿಸಿದ್ದಾರೆ. ಇದೀಗ ಧಾರವಾಡ ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃ*ತ ದೇ*ಹವನ್ನು ಮ*ರಣೋತ್ತರಪರೀಕ್ಷೆಗೆ ಕಳುಹಿಸಿದ್ದಾರೆ. ಇತ್ತ ವಿಜಯ ನಾಯಕ್ ಮೇಲೆ ಉಪನಗರ ಠಾಣೆಗೆ ಪೋಷಕರು ದೂರು ನೀಡಲು ನಿರ್ಧರಿಸಿದ್ದಾರೆ.