Connect with us

    LATEST NEWS

    ಭಾರತವಿಲ್ಲದೆ ಜಗತ್ತೇ ಶೂನ್ಯ ; ಮಾಜಿ ಜರ್ಮನ್ ರಾಯಭಾರಿ ಲಿಂಡ್ನರ್

    Published

    on

    ಮಂಗಳೂರು/ನವದೆಹಲಿ: ಹಲವು ರಾಷ್ಟ್ರಗಳು ಭಾರತದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಡೆಯುತ್ತಿವೆ. ಅಮೆರಿಕದಂತಹ ಪ್ರಬಲ ರಾಷ್ಟ್ರವು ಭಾರತವನ್ನು ಹೊಗಳುತ್ತದೆ. ಭಾರತಕ್ಕೆ ಸಹಾಯ ಮಾಡಲು ರಷ್ಯಾ ಯಾವಾಗಲೂ ಸಿದ್ಧವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಭಾರತವಿಲ್ಲದ ಅಂತಾರಾಷ್ಟ್ರೀಯ ಸಂಬಂಧಗಳು ಅಪೂರ್ಣವೆಂದು ಅನೇಕ ದೇಶಗಳು ಭಾವಿಸುವುದನ್ನು ಅಲ್ಲಗಳೆಯುವಂತಿಲ್ಲ ಎಂದು 2019ರಿಂದ 2022ರವರೆಗೂ ಭಾರತಕ್ಕೆ ಜರ್ಮನ್ ರಾಯಭಾರಿಯಾಗಿದ್ದ ವಾಲ್ಟರ್ ಲಿಂಡ್ನರ್ ಹೇಳಿದ್ದಾರೆ. ವಿಶ್ವದ ಹೆಚ್ಚಿನ ದೇಶಗಳೊಂದಿಗೆ ಸೌಹಾರ್ದಯುತ ಮತ್ತು ವಿಶ್ವಾಸಯುತ ಸಂಬಂಧ ಇರುವ ದೇಶಗಳ ಸಂಖ್ಯೆ ಹೆಚ್ಚಿಲ್ಲ. ಅಂತಹ ವಿರಳ ದೇಶಗಳಲ್ಲಿ ಭಾರತವೂ ಒಂದು ಎಂದು ಮಾಜಿ ಜರ್ಮನ್ ರಾಯಭಾರಿ ವಾಲ್ಟರ್ ಜೆ ಲಿಂಡ್ನರ್ (Walter J. Lindner) ಹೇಳಿದ್ದಾರೆ.

    ‘ವಾಟ್ ದ ವೆಸ್ಟ್ ಶುಡ್ ಲರ್ನ್ ಫ್ರಂ ಇಂಡಿಯಾ’ (ಪಶ್ಚಿಮ ದೇಶಗಳು ಭಾರತದಿಂದ ಕಲಿಯುವುದೇನು?’) ಎನ್ನುವ ಪುಸ್ತಕದಲ್ಲಿ ವಾಲ್ಟರ್ ಲಿಂಡ್ನರ್ ಅವರು “ಹೊಸ ವಿಶ್ವ ವ್ಯವಸ್ಥೆಯಲ್ಲಿ ಭಾರತದ ಪಾತ್ರವೇನಿರಬಹುದು ಎನ್ನುವ ಅಂಶಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಈ ಪುಸ್ತಕದ ಬಗ್ಗೆ ಹಾಗೂ ಭಾರತದ ಬಗ್ಗೆ ಅವರು ಎಕನಾಮಿಕ್ ಟೈಮ್ಸ್​ನ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಒಂದು ದೇಶದ ಬಗ್ಗೆ ಪುಸ್ತಕಗಳು ಬರೆಯಲಾಗುತ್ತಿದೆ ಎಂದರೆ ಆ ದೇಶದ ಆರ್ಥಿಕತೆ ಬೆಳೆಯುತ್ತಿದೆ ಎಂದು ಭಾವಿಸಬಹುದು. ಚೀನಾದ ಆರ್ಥಿಕತೆ ಬೆಳೆಯುತ್ತಿದ್ದಾಗ ಹೀಗೆ ಪುಸ್ತಕಗಳು ಪ್ರಕಟವಾಗಿದ್ದವು. ಈಗ ಭಾರತದ ಬಗ್ಗೆ ಪುಸ್ತಕಗಳು ಪ್ರಕಟವಾಗುತ್ತಿವೆ. ಇದು ಭಾರತದ ಆರ್ಥಿಕ ಬೆಳವಣಿಗೆ ಸಾಧಿಸಲಾಗುತ್ತಿರುವುದರ ದ್ಯೋತಕವಾಗಿದೆ” ಎಂದಿದ್ದಾರೆ.

    ಭಾರತದ ಸಾಫ್ಟ್ ಪವರ್ :

    “ಪ್ಲಾಸ್ಟಿಕ್ ವಿರುದ್ಧ ಹೋರಾಡಲೋ, ಅಥವಾ ಮೆಗಾ ಸಿಟಿಗಳನ್ನು ರೂಪಿಸಲೋ ಯಾರಾದರೂ ಏನಾದರೂ ಮಾಡಬೇಕೆಂದರೆ ಮೊದಲು ಭಾರತದಲ್ಲಿ ಅದಕ್ಕೆ ಪರಿಹಾರ ಹುಡುಕಬೇಕು” ಎಂದು ವಾಲ್ಟರ್ ಜೆ ಲಿಂಡ್ನರ್ ತಿಳಿಸಿದ್ದಾರೆ. ಸಾಫ್ಟ್ ಪವರ್ ಎಂಬುದು ಭಾರತದ ಡಿಎನ್‌ಎನಲ್ಲೇ ಇದೆ. ಹೀಗಾಗಿ, ಈ ಮೃದುಶಕ್ತಿಯು ಭಾರತಕ್ಕೆ ಯಾವಾಗಲೂ ಇದ್ದೇ ಇರುತ್ತದೆ. ಇತಿಹಾಸ, ಆದ್ಯಾತ್ಮಿಕತೆ, ಸಂಸ್ಕೃತಿ, ಧರ್ಮ, ಸಂಗೀತ ಇತ್ಯಾದಿ ಕ್ಷೇತ್ರಗಳಲ್ಲಿ ವಿಶ್ವಾದ್ಯಂತ ಭಾರತದ ಛಾಪು ಇದೆ. ಈಗ ಭಾರತದಲ್ಲಿ ವಿಶ್ವದಲ್ಲೇ ಅತಿದೊಡ್ಡ ಜನಸಂಖ್ಯೆ ಇದೆ. ಈಗ ಭಾರತ ಸಾಫ್ಟ್ ಪವರ್​ಗಿಂತಲೂ ದೊಡ್ಡ ಪ್ರಭಾವ ಹೊಂದಿದೆ. ಭಾರತದ ಅಭಿಪ್ರಾಯ ಮತ್ತು ಪಾಲ್ಗೊಳ್ಳುವಿಕೆ ಇಲ್ಲದೇ ಜಗತ್ತು ಮುಂದಡಿ ಇಡಲು ಆಗುವುದಿಲ್ಲ ಎನ್ನುವ ಸ್ಥಿತಿ ಇದೆ. ಕಳೆದ ಎರಡು-ಮೂರು ವರ್ಷಗಳಿಂದ ಆಗುತ್ತಿರುವ ಜಾಗತಿಕ ರಾಜಕೀಯ ವಿಚಲನಗಳು, ಯುದ್ಧ, ಬಿಕ್ಕಟ್ಟು ಇತ್ಯಾದಿ ಪರಿಸ್ಥಿತಿಯಲ್ಲೂ ಭಾರತವು ಸೂಪರ್​ಪವರ್ ಗುಂಪುಗಳ ನಡುವೆ ಸಮತೋಲನ ಸಾಧಿಸಲು ಯಶಸ್ವಿಯಾಗಿದೆ. ಪೂರ್ವ ಮತ್ತು ಪಶ್ಚಿಮ, ಹಾಗೂ ಉತ್ತರ ಮತ್ತು ದಕ್ಷಿಣ ನಡುವೆ ಸೇತುವಾಗಿದೆ ಎಂದು ವಾಲ್ಟರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    LATEST NEWS

    ಏಕಾಏಕಿ ಗ್ಯಾ*ಸ್ ಸಿ*ಲಿಂಡರ್ ಸ್ಫೋ*ಟ; 9 ಅಯ್ಯಪ್ಪ ಮಾಲಾಧಾರಿಗಳ ಸ್ಥಿತಿ ಗಂ*ಭೀರ

    Published

    on

    ಮಂಗಳೂರು/ಹುಬ್ಬಳಿ: ಏಕಾಏಕಿ ಗ್ಯಾ*ಸ್ ಸಿಲಿಂಡರ್ ಸ್ಫೋ*ಟಗೊಂಡ ಪರಿಣಾಮ 9 ಅಯ್ಯಪ್ಪ ಮಾಲಾಧಾರಿಗಳು ಗಂ*ಭೀರ ಗಾ*ಯಗೊಂಡಿರುವ ಘಟನೆ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ನಡೆದಿದೆ.

    ಘಟನೆಯಲ್ಲಿ ಗಾಯಗೊಂಡ 9 ಮಾಲಾಧಾರಿಗಳ ಸ್ಥಿತಿ ಚಿಂ*ತಾಜನಕವಾಗಿದೆ. ನಿನ್ನೆ (ಡಿ.22) ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿಗಳು ಮಲಗಿದ್ದ ವೇಳೆ ಸಿಲಿಂಡರ್ ಸ್ಫೋ*ಟಗೊಂಡಿದೆ. ಗ್ಯಾ*ಸ್ ಲೀ*ಕ್ ಆಗಿ ದೀಪದ ಬೆಂ*ಕಿ ತಗುಲಿ ಬ್ಲಾ*ಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ.

     

    ಇದನ್ನು ಓದಿ : ಗ್ಯಾಸ್ ಸ್ಪೋಟ; ತಾಯಿ, ಮೂವರು ಮಕ್ಕಳಿಗೆ ಗಂಭೀರ ಗಾಯ !

     

    ಈ ಅ*ವಘಡದಲ್ಲಿ ರಾಜು ಹರ್ಲಾಪುರ, ಬಾಲಕ ವಿನಾಯಕ ಬಾರಕೇರ, ಪ್ರಕಾಶ ಬಾರಕೇರ, ಶಂಕರ ರಾಯನಗುಂಡಿ, ಮಂಜು ತೋರದ, ಸಂಜಯ ಸವದತ್ತಿ, ಅಂಜು ಸ್ವಾಮಿ, ಪ್ರವೀಣ, ತೇಜಸ್ ರೆಡ್ಡಿ ಗಾ*ಯಾಳುಗಳು ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಗಾ*ಯಾಳುಗಳನ್ನು ದಾಖಲಿಸಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ -ಧಾರವಾಡ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Continue Reading

    LATEST NEWS

    ಫ್ಲೋರಿಡಾ ಕ್ರಿಸ್ಮಸ್ ಶೋನಲ್ಲಿ ಜನಸಂದಣಿಗೆ ಡ್ರೋನ್ ಡಿಕ್ಕಿ: ಹಲವರಿಗೆ ಗಾಯ

    Published

    on

    ಫ್ಲೋರಿಡಾ: ಕ್ರಿಸ್ಮಸ್ ಪ್ರದರ್ಶನದಲ್ಲಿ ಡ್ರೋನ್ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದ ನಂತರ ಮತ್ತು ಹೆಚ್ಚಿನ ವೇಗದಲ್ಲಿ ಕೆಳಗಿರುವ ಜನಸಮೂಹಕ್ಕೆ ಡಿಕ್ಕಿ ಹೊಡೆದ ನಂತರ ಎವೆರಾಲ್ ಜನರು ಗಾಯಗೊಂಡಿದ್ದಾರೆ.

    ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಒರ್ಲ್ಯಾಂಡೊ ಅಗ್ನಿಶಾಮಕ ಇಲಾಖೆ ನ್ಯೂಸ್ 6 ಗೆ ತಿಳಿಸಿದೆ. ಆದಾಗ್ಯೂ, ಇಬ್ಬರು ತಾಯಂದಿರು ತಮ್ಮ ಮಗ ರಾಕ್ಷಸ ಡ್ರೋನ್ನಿಂದ ಎದೆಗೆ ಹೊಡೆದ ನಂತರ “ಇಆರ್ನಲ್ಲಿ ತನ್ನ ಜೀವನಕ್ಕಾಗಿ ಹೋರಾಡುತ್ತಿದ್ದಾನೆ” ಎಂದು ಹೇಳಿದ್ದಾರೆ.

    ಘಟನೆಯ ವೀಡಿಯೊವು ಅಪಘಾತವನ್ನು ತೋರಿಸುತ್ತದೆ, ಪ್ರೇಕ್ಷಕರು ಉಸಿರುಗಟ್ಟುತ್ತಾರೆ ಮತ್ತು ಭಯಭೀತರಾದ ಮಕ್ಕಳು ಕಿರುಚುತ್ತಾರೆ. ಒರ್ಲ್ಯಾಂಡೊ ನಗರದ ಸಹಭಾಗಿತ್ವದಲ್ಲಿ ಸ್ಕೈ ಎಲಿಮೆಂಟ್ಸ್ ಡ್ರೋನ್ಗಳು ನಡೆಸುತ್ತಿರುವ ಸಂಜೆ 6:30 ರ ಪ್ರದರ್ಶನದ ಸಮಯದಲ್ಲಿ ನೂರಾರು ಕೆಂಪು ಮತ್ತು ಹಸಿರು ಡ್ರೋನ್ಗಳು ರಾತ್ರಿ ಆಕಾಶವನ್ನು ಬೆಳಗಿಸಿದವು. ಆದಾಗ್ಯೂ, ಮಾನವರಹಿತ ವಿಮಾನಗಳ ಸಮೂಹಗಳು ಇದ್ದಕ್ಕಿದ್ದಂತೆ ಶ್ರೇಣಿಗಳನ್ನು ಮುರಿಯಲು ಪ್ರಾರಂಭಿಸಿದವು, ಯಾವುದೇ ಮುನ್ಸೂಚನೆಯಿಲ್ಲದೆ ಭೂಮಿಗೆ ಇಳಿಯಲು ಪ್ರಾರಂಭಿಸಿದವು.

    ಟಿಕ್ಟಾಕ್ನಲ್ಲಿ ಪೋಸ್ಟ್ ಮಾಡಲಾದ ಒಂದು ವೀಡಿಯೊದಲ್ಲಿ ಡ್ರೋನ್ಗಳು ನೆಲದ ಕಡೆಗೆ ಚಲಿಸುತ್ತಿರುವುದನ್ನು ತೋರಿಸುತ್ತದೆ, ಏಕೆಂದರೆ ನೆಲದಿಂದ “ಓಹ್” ಎಂಬ ಕೋರಸ್ ಕೇಳಬಹುದು. “ಏನಾಗುತ್ತಿದೆ?” ಎಂದು ಮಗು ಕೇಳುತ್ತಿರುವುದು ಕೇಳಿಸುತ್ತದೆ.

    ಅಪಘಾತದ ಹೊರತಾಗಿಯೂ ಪ್ರದರ್ಶನವು ಮುಂದುವರಿಯಿತು ಎಂದು ವರದಿಯಾಗಿದೆ. ಆದಾಗ್ಯೂ, ರಾತ್ರಿ 8 ಗಂಟೆಯ ಪ್ರದರ್ಶನವನ್ನು ರದ್ದುಪಡಿಸಲಾಗಿದೆ ಎಂದು ಒರ್ಲ್ಯಾಂಡೊ ನಗರವು ಎಕ್ಸ್ ನಲ್ಲಿ ಪ್ರಕಟಣೆಯಲ್ಲಿ ತಿಳಿಸಿದೆ.

    Continue Reading

    LATEST NEWS

    ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ಮನೆ ಬಿಟ್ಟು ತೆರಳಿದ ಕುಟುಂಬ

    Published

    on

    ಮಂಗಳೂರು/ಹೈದರಾಬಾದ್: ನಿನ್ನೆ ಹೈದರಾಬಾದ್ ನಲ್ಲಿರುವ ನಟ ಅಲ್ಲು ಅರ್ಜುನ್ ಅವರ ಜೂಬಿಲಿ ಹಿಲ್ಸ್ ನಿವಾಸದ ಮೇಲೆ ಉಸ್ಮಾನಿಯಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ.

    ‘ಪುಷ್ಪ 2’ ಸಿನಿಮಾ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಿಂದ ಮೃತರಾದ ಮಹಿಳಾ ಅಭಿಮಾನಿಯ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆ ವೇಳೆ ನಟನ ಮನೆಯ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಈ ವಿವಾದ ಮತ್ತೆ ಹೊಸ ಸ್ವರೂಪ ಪಡೆದುಕೊಂಡಿದೆ.

    ಡಿಸೆಂಬರ್ 22ರಂದು ಓಯು ಜೆಎಸಿ (Joint Action Committee) ಸಂಘಟನೆಯ ಸದಸ್ಯರು ಜ್ಯುಬಿಲಿ ಹಿಲ್ಸ್ ನಲ್ಲಿರುವ ಅಲ್ಲು ಅರ್ಜುನ್ ನಿವಾಸದ ಎದುರು ಪ್ರತಿಭಟನೆ ಮಾಡಲು ಬಂದಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಇದರಿಂದ ಇನ್ನಷ್ಟು ರೊಚ್ಚಿಗೆದ್ದ ಪ್ರತಿಭಟನಾಕಾರರು ಅಲ್ಲು ಅರ್ಜುನ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಮನೆಯ ಭದ್ರತಾ ಸಿಬ್ಬಂದಿ ಮೇಲೂ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

    ಈ ಸಂಬಂಧ ಹೈದರಾಬಾದ್ ಪೊಲೀಸರು ಉಸ್ಮಾನಿಯಾ ಯೂನಿವರ್ಸಿಟಿ ಜೆಎಸಿ ಅನ್ನುವ ಸಂಘಟನೆಗೆ ಸೇರಿದ 8 ಮಂದಿ ವಿದ್ಯಾರ್ಥಿ ಹೋರಾಟಗಾರರನ್ನು ಬಂಧಿಸಿದ್ದಾರೆ.

    ಇದನ್ನೂ ಓದಿ: ಅಧ್ಯಕ್ಷರಾಗುವ ಮನ್ನವೇ ಯೂರೋಪಿಯನ್ ಒಕ್ಕೂಟಕ್ಕೆ ಎಚ್ಚರಿಕೆ ನೀಡಿದ ಟ್ರಂಪ್

    ಮನೆ ಬಿಟ್ಟು ತೆರಳಿದ ಅಲ್ಲು ಅರ್ಜುನ್ ಕುಟುಂಬ
    ಉಸ್ಮಾನಿಯಾ ಯೂನಿವರ್ಸಿಟಿ ಜೆಎಸಿ ಅನ್ನುವ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳ ಪ್ರತಿಭಟನೆಯ ಪರಿಣಾಮವಾಗಿ ಅಲ್ಲು ಅರ್ಜುನ್ ಮಕ್ಕಳು ಕುಟುಂಬದೊಂದಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ.
    ಈ ದಾಳಿಯ ಬಳಿಕ ಅಲ್ಲು ಅರ್ಜುನ್ ಭಯಗೊಂಡಿದ್ದಾರೆ. ಅಲ್ಲು ಅರ್ಜುನ್ ಮಕ್ಕಳಾದ ಅಲ್ಲು ಅರ್ಹಾ, ಅಲ್ಲು ಅಯಾನ್ ಕಾರು ಹತ್ತಿ ವೇಗವಾಗಿ ಹೊರಟಿದ್ದಾರೆ. ಅವರು ಕೂಡ ಬೇರೆ ಕಡೆ ಹೋಗಿ ಉಳಿದುಕೊಂಡಿದ್ದಾರೆ.

    ವಿಧಾಸಭೆಯಲ್ಲೂ ಪ್ರತಿಧ್ವನಿಸಿದ ಪುಷ್ಪ 2 ಪ್ರಕರಣ
    ತೆಲಂಗಾಣ ವಿಧಾನಸಭೆಯಲ್ಲೂ ಪುಷ್ಪ 2 ಪ್ರಕರಣ ಪ್ರತಿಧ್ವನಿಸಿದೆ. ಸಿಎಂ ರೇವಂತ್ ರೆಡ್ಡಿ ಅವರೇ ಅಲ್ಲು ಅರ್ಜುನ್ ವಿರುದ್ದ ಹೇಳಿಕೆ ನೀಡಿದ್ದರು. ಸಿಎಂ ಹೇಳಿಕೆ ಬಳಿಕ ಅಲ್ಲು ಅರ್ಜುನ್ ಜುಬ್ಲಿ ಹಿಲ್ಸ್ ನಲ್ಲಿರುವ ತಮ್ಮ ನಿವಾಸದಲ್ಲಿ ಸುದಿಗೋಷ್ಠಿ ನಡೆಸಿ ಕೌಂಟರ್ ಕೊಟ್ಟಿದ್ದರು.

    ಪುಷ್ಪ 2 ಭರ್ಜರಿ ಗಳಿಕೆ
    ಒಂದೆಡೆ ‘ಪುಷ್ಪ 2’ ಸಿನಿಮಾ ಸೂಪರ್ ಹಿಟ್ ಆಗಿ, 1500 ಕೋಟಿ ರೂಪಾಯಿಗೂ ಆಧಿಕ ಕಲೆಕ್ಷನ್ ಮಾಡಿದೆ. ಆದರೆ ಈ ಖುಷಿಯನ್ನು ಅಲ್ಲು ಅರ್ಜುನ್ ಅವರಿಗೆ ಸಂಭ್ರಮಿಸಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅಭಿಮಾನಿಯ ಸಾವಿನಿಂದ ಉಂಟಾದ ವಿವಾದ ದಿನೇ ದಿನೇ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.

    Continue Reading

    LATEST NEWS

    Trending