Connect with us

    LATEST NEWS

    ಬ್ರಹ್ಮಾವರ : ಮೀನು ಹಿಡಿಯಲು ಹೋಗಿ ನೀರು ಪಾಲಾದ ಯುವಕರು

    Published

    on

    ಉಡುಪಿ: ಮೀನು ಹಿಡಿಯಲು ನದಿಗೆ ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ ಯುವಕರು ಇದೇ ಗ್ರಾಮದ ಶ್ರೀಶ(21) ಹಾಗೂ ಪ್ರಶಾಂತ್ ಪೂಜಾರಿ(30) ಎಂದು ಗುರುತಿಸಲಾಗಿದೆ.

    brahmavara

    ಮೀನಿಗೆ  ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಇಬ್ಬರೂ ನೀರು ಪಾಲಗಿದ್ದರು. ಮಾ.26 ರಂದು ಈ ಘಟನೆ ನಡೆದಿದ್ದು ಮಾ. 27 ರಂದು ಬೆಳಕಿಗೆ ಬಂದಿದೆ. ಈ  ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    Baindooru

    WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ

    Published

    on

    ಉಡುಪಿ : ಚಾಲಕನ ನಿಯಂತ್ರಣ ತಪ್ಪಿ  ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಉಡುಪಿಯ  ಅಂಬಾಗಿಲು – ಪೆರಂಪಳ್ಳಿ ಕ್ರಾಸ್ ನಲ್ಲಿ ಸಂಭವಿಸಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ.

    ಘಟನೆಯ ಸಂದರ್ಭ ಸ್ಥಳದಲ್ಲಿ ಯಾವುದೇ ವಾಹನ ಇರದೇ ಇದ್ದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಸಿಮೆಂಟ್ ರೆಡಿಮಿಕ್ಸ್ ಲಾರಿ ಅಂಬಾಗಿಲಿನಿಂದ ಮಣಿಪಾಲದ ಕಡೆಗೆ ತೆರಳುತ್ತಿತ್ತು.

    ಇದನ್ನೂ ಓದಿ : ಶೀಘ್ರದಲ್ಲೇ ಉಬರ್‌ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?

    ಪೆರಂಪಳ್ಳಿಗೆ ತೆರಳುವ ಕ್ರಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    Continue Reading

    Baindooru

    ಶೀಘ್ರದಲ್ಲೇ ಉಬರ್‌ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?

    Published

    on

    ಬೆಂಗಳೂರು: ಇನ್ಮುಂದೆ ಟ್ರಾಫಿಕ್​​ ಸಮಸ್ಯೆಗೆ ಮುಕ್ತಿ! ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಉಬರ್‌ನಿಂದ ಹೊಸ ಯೋಜನೆ. ಹೌದು, ಬೆಂಗಳೂರು ಎಂದಾಕ್ಷಣ ತಟ್ಟನೆ ನೆನಪಾಗುವುದು ಟ್ರಾಫಿಕ್ ಜಾಮ್‌.. ಇದನ್ನು ಗಮನದಲ್ಲಿಟ್ಟುಕೊಂಡು ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸಲು ಉಬರ್ ಹೊಸ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಶೀಘ್ರವೇ ಬೆಂಗಳೂರಿನಲ್ಲಿ ಉಬರ್ ಶಟಲ್ ಬಸ್ ಸೇವೆಯನ್ನು ಪರಿಚಯಿಸುತ್ತಿದೆ. ಈ ಬಗ್ಗೆ ಈಗಾಗಲೇ ಘೋಷಣೆ ಕೂಡ ಮಾಡಲಾಗಿದೆ. ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ. ದೆಹಲಿ, ಕೋಲ್ಕತ್ತಾ ಬಳಿಕ ಬೆಂಗಳೂರಿನಲ್ಲಿ ಈ ಉಬರ್ ಶಟಲ್ ಬಸ್ ಸೇವೆ ಜಾರಿಗೆ ಬರುತ್ತಿದೆ.

    ಈ ಬಗ್ಗೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಜಾಗತಿಕ ರೈಡ್-ಹೇಲಿಂಗ್ ಸಂಸ್ಥೆಯ ಭಾರತದಲ್ಲಿನ ಹೊಸ ಕೊಡುಗೆಯಾದ ಉಬರ್ ಷಟಲ್ ಅನ್ನು ಅವರು ಪರಿಶೀಲಿಸಿದರು.ಈಗಲೇ ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಉಬರ್ ಷಟಲ್ ಅನ್ನು ಪ್ರಾರಂಭಿಸಲಾಗಿದೆ, ಹೆಚ್ಚಿನ ಜನರು ತಮ್ಮ ಪ್ರಯಾಣಗಾಗಿ ದೊಡ್ಡ ವಾಹನಗಳಲ್ಲಿ ಕಾಯ್ದಿರಿಸಲು ಸಹಾಯ ಮಾಡುತ್ತದೆ. ಇದು ನಿಗದಿತ ಮಾರ್ಗಗಳಲ್ಲಿ ಚಲಿಸುತ್ತದೆ ಮತ್ತು ಮುಂಚಿತವಾಗಿ ಬುಕ್ ಮಾಡಿದ ಸೀಟುಗಳನ್ನು ನೀಡುತ್ತದೆ.

    ಉಬರ್ ಶಟಲ್ ಬಸ್ ಸೇವೆಯಿಂದ ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸಲು ಮತ್ತು ಬೆಂಗಳೂರಿನಂತಹ ನಗರಗಳಿಗೆ ಇದು ಉತ್ತಮವಾಗಿದೆ. ಹೆಚ್ಚು ಪರಿಣಾಮಕಾರಿ ಸಾರಿಗೆ ವ್ಯವಸ್ಥೆಯನ್ನು ರಚಿಸಲು ತಂತ್ರಜ್ಞಾನ ಆಧಾರಿತ ಪರಿಹಾರಗಳ ಅಗತ್ಯವನ್ನು ಖರ್ಗೆ ಪ್ರತಿಪಾದಿಸಿದ್ದಾರೆ ಎಂದು ಉಬರ್ ಹೇಳಿಕೆಯಲ್ಲಿ ತಿಳಿಸಿದೆ.

    ಉಬರ್ ಇಂಡಿಯಾದ ಅಧ್ಯಕ್ಷ ಪ್ರಭಜೀತ್ ಸಿಂಗ್ ಅವರು ಈ ಹಿಂದೆ ಕಂಪನಿಯು “ಬೆಂಗಳೂರಿನಲ್ಲಿ ಬಸ್ ಸೇವೆಯನ್ನು ಪ್ರಾರಂಭಿಸಲು ಬಹು ಮಧ್ಯಸ್ಥಗಾರರೊಂದಿಗೆ ಸಕ್ರಿಯ ಮಾತುಕತೆ ನಡೆಸುತ್ತಿದೆ” ಎಂದು ಹೇಳಿದ್ದರು. “ಈ ರೀತಿಯ ಸೇವೆಯನ್ನು ಪ್ರಾರಂಭಿಸಲು ನಮಗೆ ನಿಯಂತ್ರಣದ ಅಗತ್ಯವಿದೆ ಮತ್ತು ಅದನ್ನು ಸ್ವೀಕರಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು. “ನಿಯಂತ್ರಕರು ನಮಗೆ ಅವಕಾಶ ಮಾಡಿಕೊಡುತ್ತಾರೆ ಎಂದು ಭಾವಿಸಿ ನಾವು ಉಬರ್ ಬಸ್ ಅನ್ನು ಬೆಂಗಳೂರಿಗೆ ತರಲು ಸಾಧ್ಯವಾಗುತ್ತದೆ ಎಂದು ಖಚಿತಪಡಿಸಿಕೊಳ್ಳುವುದು ನನ್ನ ಉತ್ಸಾಹದ ಯೋಜನೆಯಾಗಿದೆ, ಆದರೆ ಇದು ಗ್ರಾಹಕರು ಬಯಸಿದ ರೀತಿಯಲ್ಲಿ ನಾವು ತಿರುಗುತ್ತಿರುವ ಸ್ಥಳೀಕರಣದ ಪ್ರಯಾಣವನ್ನು ತೋರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಸಿಂಗ್ ಪ್ರಕಾರ, ಶಟಲ್ ಸೇವೆಯು ಹೆಬ್ಬಾಳದಿಂದ ಮತ್ತು ಹೊರವರ್ತುಲ ರಸ್ತೆಯಲ್ಲಿರುವ ಟೆಕ್ ಹಬ್‌ನವರೆಗೆ ಚಲಿಸಬಹುದು.

    Continue Reading

    Baindooru

    ಉತ್ತರ ಕನ್ನಡದಲ್ಲಿ ಮಂಗನಬಾವು ಸೋಂಕು 125 ಕ್ಕೆ ಏರಿಕೆ

    Published

    on

    ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡು ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು, ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ.

    ಇಂದಿರಗಾಂಧಿ ವಸತಿ ನಿಲಯದಲ್ಲಿ ಒಟ್ಟು 210 ಮಕ್ಕಳಿದ್ದಾರೆ. ನ.16 ರಂದು ಐದು ವಿದ್ಯಾರ್ಥಿಗಳಲ್ಲಿ ಮಾತ್ರ ಸೋಂಕು ಕಾಣಿಸಿತ್ತು. ಅದಾದ ಮೂರು ದಿನದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಸೋಂಕು ಕಾಣಿಸಿಕೊಂಡಿತ್ತು. ಇದೀಗ 125 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.

    ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದ್ದಂತೆ ವೈದ್ಯಕೀಯ ತಂಡವೊಂದನ್ನು ಮುಂಡಗೋಡು ವಸತಿ ನಿಲಯಕ್ಕೆ ನಿಯೋಜನೆ ಮಾಡಲಾಗಿದ್ದು, ರಕ್ತ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ.

    ಮಂಗನಬಾವು ಹರಡುವುದು ಹೇಗೆ?

    ಮಂಗನಬಾವು ರೋಗವು ನೀರು ಮತ್ತು ಸೋಂಕಿತರ ಸಂಪರ್ಕದಿಂದ ಹರಡುತ್ತದೆ. ಹೀಗಾಗಿ ಮತ್ತಷ್ಟು ವಿದ್ಯಾರ್ಥಿಗಳು ಸೋಂಕಿತರಾಗುವ ಆತಂಕ ಉಂಟಾಗಿದೆ.

    ಮಂಗನಬಾವು ಲಕ್ಷಣಗಳೇನು?

    ಆರಂಭದಲ್ಲಿ ಶೀತ, ಜ್ವರ, ಕೆಮ್ಮು ಕಾಣಿಸಿಕೊಂಡು ಬಳಿಕ ಮುಖದ ಮೇಲೆ ಬಾವು ಕಾಣಿಸುತ್ತದೆ. ಸದ್ಯ ಮಕ್ಕಳಿಗೂ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    ಮಕ್ಕಳಲ್ಲಿ ಕಾಣಿಸಿಕೊಂಡ ಮಂಗಬಾವು ಇದೀಗ ಮತ್ತಷ್ಟು ಗಂಭೀರವಾಗತೊಡಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಿ ರೋಗಕ್ಕೆ ಸೂಕ್ತ ಚಿಕಿತ್ಸೆ ಕೊಡಿಸುವುದರ ಜತೆಗೆ, ರೋಗ ಮತ್ತಷ್ಟು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ.

    Continue Reading

    LATEST NEWS

    Trending