Wednesday, October 5, 2022

ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು ದೇವರ ಮೂರ್ತಿಯನ್ನೇ ಕದ್ದೋಯ್ದರು..!

ಯಾದಗಿರಿ: ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು ದೇವರ ಮೂರ್ತಿಯನ್ನೇ ಕದ್ದೊಯ್ದ ಘಟನೆ ಯಾದಗಿರಿಯ ವಡಗೇರಾ ತಾಲೂಕಿನ ಸಂಗಮ ಗ್ರಾಮದ ಸಂಗಮೇಶ್ವರ ದೇವಸ್ಥಾನದಲ್ಲಿ ನಡೆದಿದೆ.

 

ಯಾದಗಿರಿ ಜಿಲ್ಲೆಯ ಸಂಗಮ ಗ್ರಾಮದ ಕೃಷ್ಣಾ ಮತ್ತು ಭೀಮಾ ಸಂಗಮ ನದಿ ದಡದಲ್ಲಿರುವ ಸಂಗಮೇಶ್ವರ ದೇವಸ್ಥಾನದ ಮೂರ್ತಿಯನ್ನು ಕಳ್ಳತನ ಮಾಡಲಾಗಿದೆ.

ತಡರಾತ್ರಿ ದೇವಸ್ಥಾನದ ಬೀಗ ಮುರಿದು ಗರ್ಭಗುಡಿಗೆ ನುಗ್ಗಿದ ಕಳ್ಳರು, ಎರಡೂವರೆ ಕೆಜಿಯ ಬೆಳ್ಳಿಯ ಮೂರ್ತಿಯನ್ನು ಕದ್ದು ಪರಾರಿ ಆಗಿದ್ದಾರೆ. ಬೆಳಗ್ಗೆ ಅರ್ಚಕರು ಪೂಜೆಗೆಂದು ದೇವಾಳಕ್ಕೆ ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು  ಮೂರ್ತಿ ಕದ್ದ ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಕೃಷ್ಣ ಮತ್ತು ಭೀಮಾ ನದಿ ಸಂಗಮದ ಸ್ಥಳದಲ್ಲಿರುವ ಸಂಗಮೇಶ್ವರ ದೇವಸ್ಥಾನ ಭಾರಿ ಪ್ರಸಿದ್ಧಿ ಪಡೆದಿದೆ.

 

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...