Connect with us

    DAKSHINA KANNADA

    ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್‌ಬ್ಯಾಗ್‌ ಕಳವು…!

    Published

    on

    ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್‌ಬ್ಯಾಗ್‌ ಕಳವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
    ಮಹಿಳೆಯೋರ್ವರು ನಗರದ ಬ್ಯಾಂಕ್‌ನ ಲಾಕರ್‌ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮನೆಗೆ ತಂದು ಹ್ಯಾಂಡ್‌ಬ್ಯಾಗ್‌ನಲ್ಲಿ ಹಾಕಿ ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಐರಾವತ ಬಸ್‌ನಲ್ಲಿ ಇತರ ಲಗೇಜ್‌ ಜತೆ ತೆಗೆದುಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು ಎನ್ನಲಾಗಿದೆ.
    ಹಾಸನ ತಲುಪಿದಾಗ ಅವರ ಹ್ಯಾಂಡ್‌ಬ್ಯಾಗ್‌ ಪರಿಶೀಲಿಸಿದಾಗ ಚಿನ್ನಾಭರಣಗಳು ಕಳವಾಗಿದ್ದವು. ಮಂಗಳೂರು – ಹಾಸನ ನಡುವೆ ಅವರ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ನಡು ವಯಸ್ಸಿನ ಮಹಿಳೆ ಕಳವು ಮಾಡಿರಬಹುದೆಂದು ಉರ್ವ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

    DAKSHINA KANNADA

    ಮಂಗಳೂರು: ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಮನಪಾ ಆದೇಶ

    Published

    on

    ಮಂಗಳೂರು: ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ.

    ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಅಳವಡಿಸಿಕೊಂಡು ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದೆ.

    ಅವೈಜ್ಞಾನಿಕವಾಗಿ ಭೂಮಿಯನ್ನು ಅಗೆದು ಹಾಕದಂತೆ ಸೂಚನೆ ನೀಡಿದೆ. ಆದೇಶ ಉಲ್ಲಂಘನೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಿ ಮನಾಪ ಆಯುಕ್ತರು ಕಟ್ಟುನಿಟ್ಟಾಗಿ ಆದೇಶಿಸಿದ್ದಾರೆ.

    Continue Reading

    DAKSHINA KANNADA

    ಕರಾವಳಿ ಭಾಗದಲ್ಲಿ ಇಂದಿನಿಂದ ಮೂರು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ

    Published

    on

    ರಾಜ್ಯದಲ್ಲಿ‌ ಮುಂದಿನ 3 ದಿನ ಕಾಲ ಮಳೆರಾಯ ಅಬ್ಬರಿಸಲಿದ್ದಾನೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಮೂರು ದಿನ ಭರ್ಜರಿ ಮಳೆಯಾಗುವ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿಯ ಭಾಗದಲ್ಲಿ ಎಚ್ಚರಿಕೆ ವಹಿಸಲಾಗಿದೆ.

    ಈಗಾಗಲೇ ಕಳೆದ ಹಲವು ದಿನಗಳಿಂದಲೂ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಮತ್ತೆ ಮಳೆ ಅಬ್ಬರಿಸುತ್ತಿದೆ. ಹಾಗೇ ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಮಳೆ ಆರ್ಭಟಿಸುವ ಮುನ್ಸೂಚನೆಯು ಸಿಗುತ್ತಿದೆ.

    ಚಿಕ್ಕಮಗಳೂರು ಜಿಲ್ಲೆಗೆ ಜುಲೈ 7ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ ಜುಲೈ 7ರವರೆಗೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.

    Continue Reading

    BELTHANGADY

    ಮಳೆ ಅಬ್ಬರ: ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ

    Published

    on

    ಮಂಗಳೂರು: ಕರಾವಳಿ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

    ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.

    ಬೆಳ್ತಂಗಡಿ ತಾಲೂಕಿನ ಜಮಲಾಬಾದ್ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್​ಎಫ್​​ಒಗೆ ಕುದುರೆಮುಖ ಸಿಎಫ್ ಆದೇಶ ಹೊರಡಿಸಿದ್ದಾರೆ.

    Continue Reading

    LATEST NEWS

    Trending