Friday, August 19, 2022

ಸೌತಡ್ಕದಲ್ಲಿ ಕಳ್ಳಿ ವೃದ್ಧೆಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಮಂಗಳೂರು: ಬೆಳ್ತಂಗಡಿಯ ಸೌತಡ್ಕ ಕ್ಷೇತ್ರ ದರ್ಶನಕ್ಕೆ ಬಂದಿದ್ದ ಭಕ್ತರೋರ್ವರ ಆಭರಣ ಕಳ್ಳತನ ಮಾಡಿದ ಆರೋಪದಲ್ಲಿ ವೃದ್ಧ ಮಹಿಳೆಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.


ಭೀಮವ್ವ ಯಾನೆ ನಾಗಮ್ಮ (63) ಬಂಧಿತ ಆರೋಪಿ
ಘಟನೆ ವಿವರ
ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಶ್ರೀಕ್ಷೇತ್ರ ಸೌತಡ್ಕಕ್ಕೆ ದೇವರ ದರ್ಶನ ಪಡೆಯಲು ಬೆಳ್ತಂಗಡಿ ಮೂಲದ ಮುಂಬೈ ನಿವಾಸಿಯಾದ ಬಾಲಚಂದ್ರ ಡಿ ಎಂಬುವವರು ಸಂಸಾರ ಸಮೇತ ಬಂದಿದ್ದರು. ಈ ವೇಳೆ ದೇವರ ತೀರ್ಥ,

ಪ್ರಸಾದ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದಾಗ ಬಾಲಚಂದ್ರ ಅವರ ಪತ್ನಿಯ ಬ್ಯಾಗ್‌ಗೆ ಕೈಹಾಕಿ ಅದರಲ್ಲಿದ್ದ 1 ವಜ್ರದ ನೆಕ್ಲೇಸ್‌, 2 ಉಂಗುರ, 1 ಜುಮುಕಿ ಸೇರಿ 3.08 ಲಕ್ಷದ ಚಿನ್ನ ಕಳವಾಗಿತ್ತು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಗದಗ ಜಿಲ್ಲೆಯ ಭೀಮವ್ವ ಎಂಬುವವರನ್ನು ಬಂಧಿಸಲಾಗಿದೆ. ಈಕೆ ಈ ಹಿಂದೆ ಮುರುಡೇಶ್ವರ, ಭಟ್ಕಳ, ಸುಬ್ರಮಣ್ಯದಲ್ಲಿ ಕಳ್ಳತನ ನಡೆಸುತ್ತಿದ್ದಳು ಎಂದು ತಿಳಿದು ಬಂದಿದೆ.
ಸದ್ರಿ ಪತ್ತೆ ತಂಡದಲ್ಲಿ ಮಾನ್ಯ ಪೊಲೀಸ್‌ ಅಧೀಕ್ಷಕರು ಋಷೀಕೇಶ್‌ ಸೋನಾವಣೆ ಮತ್ತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು ಕುಮಾರ್‌ ಚಂದ್ರ ರವರ ಮಾರ್ಗದರ್ಶನದಲ್ಲಿ ಮಾನ್ಯ ಪೊಲೀಸ್‌ ಉಪಾಧೀಕ್ಷಕರು ಬಂಟ್ವಾಳ ಉಪವಿಭಾಗ ಮಾನ್ಯ ಶಿವಂಶು ರಜಪೂತ್‌ ಮತ್ತು ಪೊಲೀಸ್‌ ವೃತ್ತ ನಿರೀಕ್ಷಕರು ಬೆಳ್ತಂಗಡಿ ವೃತ್ತ ಶ್ರೀ ಶಿವಕುಮಾರ್‌ ರವರ ನೇತೃತ್ವದಲ್ಲಿ ಪಿಎಸ್ಐ ಕೃಷ್ಣಕಾಂತ ಅ ಪಾಟೀಲ್‌ ರವರ ವಿಶೇಷ ತಂಡದ ಸಿಬ್ಬಂದಿ ಹೆಚ್‌ ಸಿ ಬೆನ್ನಿಚ್ಚನ್‌, ಹೆಚ್ ಸಿ ಪ್ರಶಾಂತ್‌, ಹೆಚ್ ಸಿ ರಾಹುಲ್‌, ಹೆಚ್‌ ಸಿ ಸತೀಶನಾಯ್ಕ ಜಿ,

ಹೆಚ್‌ ಸಿ ಶೇಖರ್‌ ,ಹೆಚ್‌ ಸಿ ಕೃಷ್ಣಪ್ಪ, ಹೆಚ್‌ಸಿ ರವೀಂದ್ರ ಪಿ ಸಿ ಅನಿಲ್‌ ಕುಮಾರ್‌ ,ಚಾಲಕ ಎಪಿಸಿ ಲೋಕೇಶ್‌, ಮಪಿಸಿ ಸೌಭಾಗ್ಯ ಮತ್ತು ಜಿಲ್ಲಾ ಗಣಕ ಯಂತ್ರದ ವಿಭಾಗದ ಸಂಪತ್‌ ಮತ್ತು ದಿವಾಕರ ರವರು ಬಾಗವಹಿಸಿರುತ್ತಾರೆ.

ಪ್ರಕರಣ ದಾಖಲಾಗಿ ಶೀಘ್ರವಾಗಿ ಪ್ರಕರಣ ಭೇದಿಸಿದ ಪೊಲೀಸ್‌ ತಂಡಕ್ಕೆ ಜಿಲ್ಲಾ ಪೊಲೀಸ್‌ ಅಧಿಕ್ಷಕರು ಬಹುಮಾನ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದೇರಳಕಟ್ಟೆಯಲ್ಲೂ ಕಾಣಿಸಿಕೊಂಡ ಸಾವರ್ಕರ್‌ ಫ್ಲೆಕ್ಸ್

ಮಂಗಳೂರು: ಶಿವಮೊಗ್ಗದಲ್ಲಿ ಸಾರ್ವಕರ್‌ ಫ್ಲೆಕ್ಸ್‌ನಿಂದ ಗಲಭೆ ಉಂಟಾದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರೊಬ್ಬರು ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದಾರೆ. ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ.ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ...

ಫಾಝಿಲ್ ಕೊಲೆ ಪ್ರಕರಣ: ಆರೋಪಿ ಹರ್ಷಿತ್‌ಗೆ 14 ದಿನ ನ್ಯಾಯಾಂಗ ಬಂಧನ

ಮಂಗಳೂರು: ನಗರ ಹೊರವಲಯದ ಸುರತ್ಕಲ್‌ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬುಧವಾರ ಬಂಧಿಸಲಾಗಿದ್ದ ಆರೋಪಿ ಹರ್ಷಿತ್‌ಗೆ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ...

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳು NIA ವಶಕ್ಕೆ

ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ...