Home ಪ್ರಮುಖ ಸುದ್ದಿ ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ ಕಳ್ಳರು ನಾಲ್ಕು ಹುಂಡಿಗಳನ್ನು ದೋಚಿರುವ ಘಟನೆ ನಡೆದಿದೆ.

ಬಂಟ್ವಾಳದ ಮೊಗರ್ನಾಡು ಎಂಬ ಪ್ರದೇಶದಲ್ಲಿರುವ ಅಮ್ಟೂರು ದೇವ ಮಾತಾ ಚರ್ಚ್ ನಲ್ಲಿ ಈ ಘಟನೆ ನಡೆದಿದೆ.

ಕಳ್ಳರು ಚರ್ಚ್ ಎದುರುಗಡೆ ಇರುವ ಹುಂಡಿಯ ಹಣ ಕಳವು ಮಾಡಿದ್ದಲ್ಲದೆ ಚರ್ಚ್ ಒಳಗೆ ನುಗ್ಗಿ ಹಾಲ್ ನ ಒಳಗೆ ಇದ್ದ ಮೂರು ಹುಂಡಿಗಳನ್ನು ಒಡೆದು ಅದರೊಳಗೆ ಇದ್ದ ಹಣವನ್ನು ದೋಚಿದ್ದಾರೆ.

ಅಮ್ಟೂರು ದೇವ ಮಾತ ಚರ್ಚ್ ನ ಧರ್ಮಗುರು ಡಾ! ಮಾರ್ಕ್ ಕ್ರಾಸ್ಟಲಿನೊ ಅವರು ನಗರ ಪೋಲೀಸ್ ಸ್ಟೇಷನ್ ಗೆ ಈ ಬಗ್ಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...