Connect with us

    DAKSHINA KANNADA

    ಮಂಗಳೂರು: ಮೊಬೈಲ್‌ ಟವರ್‌, ಉಪಕರಣಗಳ ಕಳವು

    Published

    on

    ಮಂಗಳೂರು: ಮೊಬೈಲ್‌ ಟವರ್‌ ಅನ್ನು ಉಪಕರಣಗಳ ಸಹಿತ ಕಳವು ಮಾಡಿರುವ ಘಟನೆ ಮಂಗಳೂರು ತಾಲೂಕು ತಿರುವೈಲು ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

    ಮುಂಬಯಿಯ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಜಿ.ಟಿ.ಎಲ್‌. ಇನ್‌ಫ್ರಾಸ್ಟ್ರಕ್ಚರ್‌ ಕಂಪೆನಿ ಲಿ.ನವರು ಮೊಬೈಲ್‌ ಟವರ್‌ ನಿರ್ಮಾಣ ಮಾಡಿದ್ದರು.

    ಇತ್ತೀಚೆಗೆ ಟವರ್‌ನ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನೀಷಿಯನ್‌ ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್‌ ಟವರ್‌ ಮತ್ತು ಟವರ್‌ನ ಉಪಕರಣಗಳು ಸೇರಿದಂತೆ ಒಟ್ಟು ಸುಮಾರು 19 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ತನಿಖೆ ನಡೆಯುತ್ತಿದೆ.

    DAKSHINA KANNADA

    ಕಂಬಳ ಯಜಮಾನ ಇ*ನ್ನಿಲ್ಲ; ಸುಧಾಕರ್ ಆಳ್ವ ವಿ*ಧಿವಶ !

    Published

    on

    ಮಂಗಳೂರು: ಯುವ ಉದ್ಯಮಿ, ಮೋರ್ಲ ಕಂಬಳ ಕೋಣದ ಯಜಮಾನ ಸುಧಾಕರ ಆಳ್ವ ಮೋರ್ಲ ಕಂಬಳಕೋಡಿ (45) ಅವರು ಆಕಸ್ಮಿಕವಾಗಿ ತಮ್ಮ ಮನೆಯ ತೋಟದ ಕೆರೆಗೆ ಕಾಲು ಜಾರಿ ಬಿದ್ದು ಮೃ*ತಪಟ್ಟಿದ್ದಾರೆ.

    ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಸುಧಾಕರ ಆಳ್ವ ಅವರು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ನಾ*ಪತ್ತೆಯಾಗಿದ್ದು ಮನೆ ಮಂದಿ ಹಾಗೂ ಸ್ಥಳೀಯರು ಸುತ್ತ ಮುತ್ತ ಹುಡುಕಾಟ ನಡೆಸಿದ್ದು ಮನೆಯ ಪಕ್ಕದ ಕೆರೆಯ ಬದಿಯಲ್ಲಿ ಮೃ*ತದೇಹ ಕಂಡು ಬಂದಿದೆ.

    ಪಂಪ್ ಸ್ವಿಚ್ ಹಾಕಲು ಬಂದಾಗ ಕಾಲು ಜಾರಿ ಬಿದ್ದು ಮೃ*ತಪಟ್ಟಿರುವುದಾಗಿ ತಿಳಿದು ಬಂದಿದೆ.

    ಬೇಕರಿ ತಿಂಡಿ-ತಿನಿಸುಗಳ ತಯಾರಕರಾಗಿ, ಯುವ ಉದ್ಯಮಿಯಾಗಿ ಜನಾನುರಾಗಿಯಾಗಿದ್ದ ಸುಧಾಕರ ಆಳ್ವರು ಮಂಗಳವಾರ ತೋಟಕ್ಕೆ ನೀರು ಹಾಯಿಸಲು ಹಾಕಿದ್ದ ಮೋಟಾರ್‌ ಪಂಪ್‌ ಅನ್ನು ಬಂದ್‌ ಮಾಡಲು ಕೆರೆ ಬಳಿ ತೆರಳಿದ್ದರು. ಮನೆಮಂದಿ ಚಹಾ ಕುಡಿಯಲು ಅವರನ್ನು ಕರೆಯಲು ಕೆರೆ ಬಳಿ ತೆರಳಿದಾಗ ಅವರ ಕೈಯಲ್ಲಿದ್ದ ಕೃಷಿಗೆ ಸಂಬಂಧಿ ಪರಿಕರಗಳು ಕೆರೆ ಪಕ್ಕದಲ್ಲಿ ಬಿದ್ದಿದ್ದು, ಚಪ್ಪಲಿ ನೀರಿನಲ್ಲಿ ತೇಲುತ್ತಿದ್ದುದು ಕಂಡುಬಂದಿದೆ. ಅಕ್ಕ-ಪಕ್ಕ ಹುಡುಕಾಟ ನಡೆಸಿದರೂ, ಅವರ ಪ*ತ್ತೆಯಾಗಿರಲಿಲ್ಲ.

    ಕೊನೆಗೆ ಕೆರೆಗೆ ಬಿದ್ದಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೆರೆಯಲ್ಲಿ ಶೋಧನೆ ನಡೆಸಿದಾಗ ಮೃ*ತದೇಹ ಪ*ತ್ತೆಯಾಗಿದೆ.

    Continue Reading

    DAKSHINA KANNADA

     ಮಂಗಳೂರು: ಹ*ಲ್ಲೆ, ಲೈಂ*ಗಿಕ ಕಿರುಕುಳ ಪ್ರಕರಣ; ಆರೋಪಿಗಳ ಪಾಸ್‌ಪೋರ್ಟ್‌ ಕ್ಯಾನ್ಸಲ್

    Published

    on

     ಮಂಗಳೂರು: ಹ*ಲ್ಲೆ, ಲೈಂಗಿಕ ಕಿರುಕುಳ ಪ್ರಕರಣದ ಆರೋಪಿಗಳಿಗೆ ಪೊಲೀಸರು ಕ್ಲಿಯರೆನ್ಸ್‌ ನೀಡಿರುವ ವಿಚಾರದ ಕುರಿತು ವರದಿಯಾಗಿದೆ.

    ಕುಲಶೇಖರದ ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಮಹಿಳೆ ಮತ್ತು ಆಕೆಯ ಸಂಬಂಧಿಕರೊಬ್ಬರಿಗೆ ಅ*ವಾಚ್ಯವಾಗಿ ನಿಂ*ದನೆ ಮಾಡಿ, ಕೆ*ನ್ನೆಗೆ ಹೊಡೆದು, ತಲೆಯ ಜುಟ್ಟನ್ನು ಎಳೆದು, ಬುರ್ಖಾ ಹರಿದು ಹಾಕಿ ಹ*ಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾವೂದ್‌ ಹಾಗೂ ಇತರ ನಾಲ್ವರ ವಿರುದ್ಧ 2023 ರ ಮೇ 13 ರಲ್ಲಿ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.

    ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯದಲ್ಲಿ ಎವಿಡೆನ್ಸ್‌ ಹಂತದಲ್ಲಿ ಇರುವಾಗಲೇ ಸಿದ್ದಿಕ್‌ ಮತ್ತು ಇನ್ನೋರ್ವ ಆರೋಪಿ ಪಾಸ್‌ಪೋರ್ಟ್‌ಗೆಂದು ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ ಪೊಲೀಸ್‌ ಪರಿಶೀಲನೆಗೆಂದು ಬಂದಾಗ ಅರ್ಜಿದಾರರ ಮೇಲೆ ಯಾವುದೇ ಪ್ರಕರಣಗಳು ಇಲ್ಲ ಎಂದು ಕ್ಲಿಯರೆನ್ಸ್‌ ನೀಡಿದ್ದರು. ನಂತರ ಅವರಿಗೆ ಪಾಸ್‌ಪೋರ್ಟ್‌ ಕಚೇರಿಯಿಂದ ಪಾಸ್‌ಪೋರ್ಟ್‌ ನೀಡಲಾಗಿತ್ತು. ಈ ಕುರಿತು ಆಕ್ಷೇಪ ವ್ಯಕ್ತವಾದ ನಂತರ, ಪೊಲೀಸರು ಪಾಸ್‌ಪೋರ್ಟ್‌ ಸೇವಾ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.

    ಅರ್ಜಿದಾರರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾದ ಮಾಹಿತಿ ಕುರಿತು ಅಪ್‌ಡೇಟ್‌ ಆಗಿರಲಿಲ್ಲ. ಹಾಗಾಗಿ ನಿರಕ್ಷೇಪಣ ಪತ್ರ ನೀಡುವಾಗ ಕ್ರಿಮಿನಲ್‌ ಕೇಸ್‌ನ ಮಾಹಿತಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದು, ನಂತರ ಕ್ರಿಮಿನಲ್‌ ಪ್ರಕರಣ ಇರುವ ಕುರಿತು ಮಾಹಿತಿ ಲಭ್ಯವಾಗಿದೆ, ಈ ಕುರಿತು ಪಾಸ್‌ಪೋರ್ಟ್‌ ಸೇವಾ ಕೇಂದ್ರಕ್ಕೆ ದಾಖಲೆ ಸಹಿತ ಮಾಹಿತಿ ನೀಡಲಾಗಿರುವ ಕುರಿತು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

    Continue Reading

    DAKSHINA KANNADA

    ನೆಲ್ಯಾಡಿ: ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಸಂಚಾರಕ್ಕೆ ಅಡ್ಡಿ

    Published

    on

    ನೆಲ್ಯಾಡಿ: ಗ್ಯಾಸ್‌ ಟ್ಯಾಂಕರ್‌ವೊಂದು ರಸ್ತೆಗೆ ಅಡ್ಡವಾಗಿ ಪಲ್ಟಿಯಾದ  ಘಟನೆ ಅ.29ರಂದು ರಾತ್ರಿ 9.30ರ ವೇಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ.

     

    ಈ ಭೀಕದ ದರಂತದಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

     

    ಇದನ್ನೂ ಓದಿ : ಮಗ ಸಾ*ವನ್ನಪ್ಪಿದ್ದು ಗೊತ್ತಾಗದೇ 4 ದಿನಗಳ ಕಾಲ ಶವದೊಂದಿಗೆ ಕಳೆದ ಅಂಧ ದಂಪತಿ

     

    ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ನೀರಕಟ್ಟೆಯಲ್ಲಿ ಪಲ್ಟಿಯಾಗಿ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದೆ ಎಂದು ವರದಿಯಾಗಿದೆ.

    Continue Reading

    LATEST NEWS

    Trending