BANTWAL
ಬಂಟ್ವಾಳ: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Published
1 month agoon
By
NEWS DESK2ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ಮಂಗಳವಾರ ತಡರಾತ್ರಿಗೆ (ನ.5 ರಂದು) ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ.
ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದುವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣವನ್ನು ಕಳ್ಳತನ ಮಾಡಲಾಗಿದೆ.ಇದರ ಜೊತೆಗೆ ಗೊದ್ರೇಜ್ , ಕ್ಯಾಸ್ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕೂಡ ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ.
ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿಆರ್ ನ್ನು ಕೂಡ ಬಿಡದೆ ಎಗರಿಸಿದ್ದಾರೆ. ಸೋಮವಾರ ಮುಂಜಾನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ದೇವಸ್ಥಾನವೊಂದರ ಕಳವು ನಡೆಯುವುದನ್ನು ಸ್ವತಃ ಅಲ್ಲಿನ ಅರ್ಚಕರು ಸಿ.ಸಿ.ಕ್ಯಾಮರಾದ ಮೂಲಕ ನೋಡಿದ್ದಾರೆ ಆದರೂ ಕಳ್ಳರ ಬಳಿ ಮಾರಕಾಸ್ತ್ರಗಳು ಇರುವುದು ಕಂಡು ಬಂದದ್ದರಿಂದ ತಡೆಯಲು ಅಸಾಧ್ಯವಾಗಿತ್ತು. ಮತ್ತು ಈ ಕಳ್ಳತನದ ವಿಡಿಯೋ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು ಸುದ್ದಿಯಾಗಿತ್ತು. ಅಂತಹ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕಳ್ಳರು ಯೋಚಿಸಿಯಾಗಿರಬೇಕು,ಇಲ್ಲಿನ ಸಿ.ಸಿ.ಕ್ಯಾಮರಾ ದ ಪೂಟೇಜ್ ಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಬೆಳಿಗ್ಗೆ (ನ.4ರಂದು) ದೇವಸ್ಥಾನದ ಸಿಬ್ಬಂದಿಯೊರ್ವರು 6.ಗಂಟೆಗೆ ಬಂದಾಗ ಮುಂಬಾಗಿಲು ಚಿಲಕ ಮುರಿದಿದ್ದು ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರಿಗೆ ತಿಳಿಸಿದ್ದಾರೆ.
ಇತ್ತೀಚೆಗೆ ಈ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆದಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.
ಬಂಟ್ವಾಳ: ಕಾರು ಮತ್ತು ರಿಕ್ಷಾ ನಡುವೆ ಭೀ*ಕರ ಅ*ಪಘಾತವಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾ*ವನ್ನಪ್ಪಿ, ಮಕ್ಕಳ ಸಹಿತ 8 ಮಂದಿಗೆ ಗಾ*ಯಗಳಾಗಿರುವ ಘಟನೆ ಬಂಟ್ವಾಳದ ವಗ್ಗ ಸಮೀಪ ಬಾಂಬಿಲದಲ್ಲಿ ಇಂದು (ಡಿ.5) ಸಂಭವಿಸಿದೆ.
ಪಂಜಿಕಲ್ಲು ಬಾಂದೊಟ್ಟು ರೆಚ್ಚಾಡಿ ಹರೀಶ್ ಎಂಬುವವರ ಪತ್ನಿ ತಿಲಕ (40) ಮೃ*ತ ಮಹಿಳೆ.
ಮಕ್ಕಳ ಸಹಿತ ರಿಕ್ಷಾದಲ್ಲಿದ್ದ ಎಂಟು ಮಂದಿಗೆ ಗಾ*ಯವಾಗಿದ್ದು, ಅವರನ್ನು ಯಶಸ್ವಿನಿ, ಗೀತಾ, ರೇವತಿ, ಸರಸ್ವತಿ, ವೇದಾವತಿ, ರಾಜೀವಿ ಮತ್ತು ಮಕ್ಕಳಾದ ದಿಗಂತ್, ದಿಶಾನಿ ಎಂದು ಗುರುತಿಸಲಾಗಿದೆ. ಗಾ*ಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮದ್ವದಲ್ಲಿ ಸಂಬಂಧಿಕರ ಮನೆಯಲ್ಲಿ ನಡೆದ ಸೀಮಂತ ಕಾರ್ಯಕ್ರಮಕ್ಕೆ ಹೋಗಿ ವಾಪಾಸು ಮನೆಗೆ ಬರುವ ಸಂದರ್ಭ ದು*ರ್ಘಟನೆ ನಡೆದಿದೆ. ಪಂಜಿಕಲ್ಲುವಿನಿಂದ ನಾರಾಯಣ ಪೂಜಾರಿಯ ರಿಕ್ಷಾವನ್ನು ಗಾಯಾಳುಗಳು ಬಾಡಿಗೆ ಮಾಡಿದ್ದು, ಕಾರ್ಯಕ್ರಮ ಮುಗಿಸಿ ಅದೇ ಗಾಡಿಯಲ್ಲಿ ಮಂಗಳೂರಿನಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ವೇಳೆ ರಿಟ್ಸ್ ಕಾರು ಮತ್ತು ಆಪೆ ರಿಕ್ಷಾ ನಡುವೆ ಅ*ಪಘಾತವಾಗಿದೆ.
ಇನ್ನು ಘಟನೆ ತಿಳಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ ಉಳಿಪ್ಪಾಡಿಗುತ್ತು ಗಾಯಾಳುಗಳು ದಾಖಲಾಗಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮೃತರಾದ ತಿಲಕ ಅವರ ಮೃತದೇಹ ಇರಿಸಲಾದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಘಟನೆಯ ಕುರಿತು ಪಾಣೆಮಂಗಳೂರು ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ಡಿ. 8ರಂದು ಯಕ್ಷಾವಾಸ್ಯಂ ಕಾರಿಂಜ ಚತುರ್ಥ ವಾರ್ಷಿಕೋತ್ಸವ
Published
16 hours agoon
05/12/2024By
NEWS DESK2ಬಂಟ್ವಾಳ: ಯಕ್ಷಾವಾಸ್ಯಂ ಕಾರಿಂಜ ಚತುರ್ಥ ವಾರ್ಷಿಕೋತ್ಸವ ಡಿಸೆಂಬರ್ 8ರಂದು ಕಾಡಬೆಟ್ಟಿನ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಅಪರಾಹ್ನ 2 ಗಂಟೆಗೆ ನಡೆಯಲಿದೆ ಎಂದು ಸಂಚಾಲಕಿ ಸಾಯಿಸುಮಾ ನಾವಡ ಹೇಳಿದ್ದಾರೆ.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 6:30ರ ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಯಕ್ಷಾವಾಸ್ಯಮ್ ಪ್ರಶಸ್ತಿಯನ್ನು ಹಿರಿಯ ಕಲಾವಿದರಾದ ಹರಿನಾರಾಯಣ ಬೈಪಡಿತ್ತಾಯ, ಲೀಲಾವತಿ ಬೈಪಡಿತ್ತಾಯ ದಂಪತಿಗೆ ನೀಡಿ ಗೌರವಿಸಲಾಗುವುದು. ಅಭಿನಂದನಾ ನುಡಿಗಳನ್ನು ಕಲಾವಿದ ಚಂದ್ರಶೇಖರ ಭಟ್ ಕೊಂಕಣಾಜೆ ಆಡಲಿದ್ದಾರೆ ಎಂದರು.
ಅಪರಾಹ್ನ 2 ಗಂಟೆಗೆ ಪಿ.ಜಿನರಾಜ ಆರಿಗ ದೀಪೋಜ್ವಲನ ಮಾಡಲಿದ್ದಾರೆ. ಬಳಿಕ ಯಕ್ಷಗಾನದ ಪೂರ್ವರಂಗವನ್ನು ಕೇಂದ್ರದ ವಿದ್ಯಾರ್ಥಿಗಳು ಶ್ರೀನಿವಾಸ ಬಳ್ಳಮಂಜ ನಿರ್ದೇಶನದಲ್ಲಿ ಮಾಡಲಿದ್ದಾರೆ. ಅದಾದ ನಂತರ, ಮಕ್ಕಳ ಯಕ್ಷಗಾನ ನರಕಾಸುರ, ಮೈಂದ ದ್ವಿವಿದ ಶ್ರೀನಿವಾಸ ಬಳ್ಳಮಂಜ ಮತ್ತು ಸಾಯಿಸುಮಾ ಎಂ. ನಾವಡ ಪ್ರಸ್ತುತಿಯಲ್ಲಿ ವಿದ್ಯಾರ್ಥಿಗಳು ಅಭಿನಯಿಸಲಿದ್ದಾರೆ. ಸಂಜೆ 6:30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಹಿಸಲಿದ್ದಾರೆ ಎಂದು ತಿಳಿಸಿದರು.
ಅಭ್ಯಾಗತರಾಗಿ ಮಾಜಿ ಸಚಿವ ಬಿ.ರಮಾನಾಥ ರೈ, ಕಾರಿಂಜೇಶ್ವರ ದೇವಸ್ಥಾನ ವ್ಯವಸ್ಥಾಪಕ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಕರ್ನಾಟಕ ಪಬ್ಲಿಕ್ ಸ್ಕೂಲ್ ಉಪಪ್ರಾಂಶುಪಾಲರಾದ ಉದಯ ಕುಮಾರ್ ಜೈನ್, ಜೇಸಿ ಮಡಂತ್ಯಾರು ನಿಕಟಪೂರ್ವ ಅಧ್ಯಕ್ಷ ಅಶೋಕ್ ಗುಂಡಿಯಲ್ಕೆ, ಆಲಂಪುರಿಗುತ್ತು ಶ್ರುತಾಂಜನ್ ಜೈನ್, ಶಾರದಾಂಬಾ ಭಜನಾ ಮಂದಿರ ಕಾಡಬೆಟ್ಟು ಗೌರವಾಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾವಳಪಡೂರು ಗ್ರಾಪಂ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾವಳಮುಡೂರು ಗ್ರಾಪಂ ಅಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ, ಕಾವಳಪಡೂರು ಗ್ರಾಪಂ ಸದಸ್ಯ ವೀರೇಂದ್ರ ವಗ್ಗ ಭಾಗವಹಿಸುವರು. ವಿದ್ಯಾರ್ಥಿ ಪುರಸ್ಕಾರ, ಬಳಿಕ ಕಿತ್ತೂರು ರಾಣಿ ಚೆನ್ನಪ್ಪ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ನಿರ್ದೇಶನದಲ್ಲಿ ವೀರಮಣಿ ಕಾಳಗ ನಡೆಯಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಯಕ್ಷಕೂಟ ಮಧ್ವ ಸಂಚಾಲಕ ಭಾಸ್ಕರ ಶೆಟ್ಟಿ ಮಧ್ವ, ಯಕ್ಷಾವಾಸ್ಯಂ ಸದಸ್ಯರಾದ ಸುಮನಾ ಯಳಚಿತ್ತಾಯ, ಪೋಷಕರಾದ ರತ್ನಾ ತುಕಾರಾಮ ಗೌಡ ಉಪಸ್ಥಿತರಿದ್ದರು.
ವಿಟ್ಲ: ಬಾಡಿಗೆಗೆಂದು ಹೋದ ಆಟೋ ಚಾಲಕ ನಾಪತ್ತೆಯಾದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಧನರಾಜ್ ನಾಪತ್ತೆಯಾದವರು. ಆತನ ಆಟೋ ರಿಕ್ಷಾ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿದೆ. ನವೆಂಬರ್ 28 ರಂದು ಅವರು ಬಾಯಿಲದ ತನ್ನ ಮನೆಯಿಂದ ಅಟೋ ರಿಕ್ಷಾವನ್ನು ತೆಗೆದುಕೊಂಡು ಬೆಳಗ್ಗೆ ಹೊರಟಿದ್ದು, ವಾರ ಕಳೆದರೂ ಮನೆಗೆ ವಾಪಸ್ ಬಂದಿಲ್ಲ.
ಈ ಬಗ್ಗೆ ಸಂಬಂದಿಕರಲ್ಲಿ ,ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಹುಡುಕಾಡಿದಾಗ ಧನರಾಜ್‌ನ ರಿಕ್ಷಾ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದು ಆತನ ಮೊಬೈಲ್ ಸ್ವೀಚ್ ಆಫ್ ಬರುತ್ತಿದೆ. ಹಾಗಾಗಿ ಆತನನ್ನು ಪತ್ತೆ ಹಚ್ಚಿ ಕೊಡುವಂತೆ ಮನೆಯವರು ಠಾಣೆಗೆ ನೀಡಿದ ದೂರಿನಲ್ಲಿ ಕೋರಿದ್ದಾರೆ.