Connect with us

    LATEST NEWS

    ರಾಯರ ದರ್ಶನಕ್ಕೆ ಹೋದವರ ಮನೆಗೆ ಕನ್ನ; ಮಂಜುನಾಥನ ಸನ್ನಿಧಿಯಲ್ಲಿ ಅರೆಸ್ಟ್​

    Published

    on

    ಮಂಗಳೂರು/ಬೆಂಗಳೂರು : ಆ ಐನಾತಿ ಕಳ್ಳರು ಪ್ರವಾಸಕ್ಕೆ ತೆರಳುವ ಮಂದಿಯ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು.  ಆದರೆ, ಈ ಬಾರಿ ಕೆಲಸ ಕೈ ಕೊಟ್ಟಿದೆ. ರಾಯರ ದರ್ಶನಕ್ಕೆ ಹೋದವರ ಮನೆಯಲ್ಲಿ ಕದ್ದು ಮಂಜುನಾಥನ ದರ್ಶನಕ್ಕೆ ಹೋದವರು ತಗಲಾಕ್ಕೊಂಡಿದ್ದಾರೆ.

    ಆರೋಪಿ ಸನ್ಯಾಸಿಮಠ ನಂದೀಶ್ ಮತ್ತು ನಂದೀಶ್ ಪ್ರತಾಪ್ ಬಂಧಿತ ಆರೋಪಿಗಳು. ಹನುಮೇಗೌಡ ಎಂಬಾತ  ಪರಾರಿಯಾಗಿದ್ದಾನೆ. ಕಳ್ಳತನ ಮಾಡಿದ 12 ಗಂಟೆಯಲ್ಲೇ ಸುಬ್ರಮಣ್ಯ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ಸುಬ್ರಮಣ್ಯ ನಗರದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದವರಿಗೆ ಆರೋಪಿ ಸನ್ಯಾಸಿಮಠ ನಂದೀಶ್​​ ಸಂಬಂಧಿಕನಾಗಿದ್ದ. “ತಮ್ಮ ಮನೆಯ ಮಾಲೀಕರು ಮಂತ್ರಾಲಯಕ್ಕೆ ಹೋಗುತ್ತಿದ್ದಾರೆ” ಎಂದು ಮನೆ ಕೆಲಸದವರು ಮಾತನಾಡಿಕೊಳ್ಳುತ್ತಿದ್ದರು. ಇವರ ಮಾತನ್ನು ಪಕ್ಕದಲ್ಲೇ ನಿಂತು ಸನ್ಯಾಸಿಮಠ ನಂದೀಶ್​ ಕದ್ದು ಕೇಳಿಸಿಕೊಂಡಿದ್ದ. ಈ ವಿಚಾರವನ್ನ ಸನ್ಯಾಸಿಮಠ ನಂದೀಶ್​ ತನ್ನ ಸ್ನೇಹಿತರಿಗೆ ಹೇಳಿ, ಕನ್ನ ಹಾಕಲು ಯೋಜನೆ ರೂಪಿಸಿದ್ದರು.

    ಚಿನ್ನ ಎಗರಿಸಿ ಪರಾರಿ :

    ಮನೆಯವರು ಮಂತ್ರಾಲಯಕ್ಕೆ ಯಾವಾಗ ಹೋಗುತ್ತಾರೆ ಅಂತ ಮನೆ ಬಳಿ ನಿತ್ಯ ಪರೇಡ್​ ಮಾಡಿದ್ದಾನೆ. ಒಂದು ದಿನ ಮನೆಯವರು ಮಂತ್ರಾಲಯಕ್ಕೆ ಹೋಗಿದ್ದಾರೆ.  ಇತ್ತ ಖದೀಮರು ಮನೆಯ ಹಿಂಬದಿ ಕಿಟಕಿಯನ್ನು ಗ್ಯಾಸ್ ಕಟರ್​ನಿಂದ ಕಟ್ ಮಾಡಿ ಮನೆಯೊಳಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ 1 ಕೆಜಿ 800 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ. ಕದ್ದ ಎಲ್ಲ ಚಿನ್ನವನ್ನು ಸನ್ಯಾಸಿಮಠ ನಂದೀಶ್​ ತನ್ನ ರೂಂನಲ್ಲಿ ಇಟ್ಟಿದ್ದ. ಬಳಿಕ, ಚಿನ್ನ ಕದ್ದ ಖುಷಿಯಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಹೊರಟಿದ್ದಾನೆ.

    ಇದನ್ನೂ ಓದಿ : ದೇಗುಲ ಆಗಿರಲಿ, ದರ್ಗಾ ಆಗಿರಲಿ ಅಕ್ರಮವಾಗಿ ಕಟ್ಟಿದ್ದರೆ ತೆರವು : ಸುಪ್ರೀಂ ಕೋರ್ಟ್

    ಮನೆ ಮಾಲೀಕರು ಮಂತ್ರಾಲಯದಿಂದ ವಾಪಸು ಬಂದು ನೋಡಿದಾಗ, ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮನೆ ಮಾಲೀಕರು ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧಾರಿಸಿ ಪೊಲೀಸರು ಆರೋಪಿಗಳ ಬೆನ್ನು ಹತ್ತಿದ್ದಾರೆ. ಸನ್ಯಾಸಿಮಠ ನಂದೀಶ್​ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದು ಹೊರ ಬರುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ. ಬಳಿಕ, ಇನ್ನೋರ್ವ ಆರೋಪಿ ನಂದೀಶ್​ ಪ್ರತಾಪ್​ನನ್ನು ಬಂಧಿಸಿದ್ದಾರೆ. ಬಂಧಿತರಿಂದ ಪೊಲೀಸರು 1ಕೆಜಿ 800 ಗ್ರಾಂ ಚಿನ್ನ ಸೇರಿದಂತೆ 18 ಸಾವಿರ ರೂ. ನಗದು ವಶಕ್ಕೆ ಪಡೆದಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    SHOCKING NEWS : ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ

    Published

    on

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಹಾವಳಿ ಹೆಚ್ಚಾಗುತ್ತಿದ್ದು, ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಗುರುವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


    ಕೆಲವು ದಿನಗಳ ಹಿಂದೆ ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ನಾಲ್ವರನ್ನು ಬಂಧಿಸಿಲಾಗಿತ್ತು. ಇದೀಗ ಪೀಣ್ಯದಲ್ಲಿ ಗಂಡ, ಹೆಂಡತಿ ಮತ್ತು ಅವರ ಮಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಕೂಡಾ ಜಿಗಣಿಯಲ್ಲಿದ್ದಂತೆ ನಕಲಿ ಗುರುತಿನ ಚೀಟಿ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.
    ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಇತರರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    Continue Reading

    DAKSHINA KANNADA

    ಮಂಗಳೂರಿಗೆ ಬಂದ ಕರ್ನಾಟಕ ಸುವರ್ಣ ರಥ

    Published

    on

    ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಸುವರ್ಣ ಕರ್ನಾಟಕ ರಥ ಮಂಗಳೂರಿಗೆ ಆಗಮಿಸಿದೆ.

    ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಸಂಚರಿಸುವ ಈ ರಥವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸ್ವಾಗತಿಸುವ ಕಾರ್ಯಕ್ರಮ ಸರಳ ರೀತಿಯುಲ್ಲಿ ನಡೆಯಿತು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಆಧಿಕಾರಿಗಳು ರಥವನ್ನು ಸ್ವಾಗತಿಸಿದ್ದಾರೆ. ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ರಥಕ್ಕೆ ಸ್ವಾಗತ ಕೋರಲಾಗಿದ್ದು, ಅಧಿಕಾರಿಗಳಿಂದಲೇ ಸರಳ ಕಾರ್ಯಕ್ರಮ ಕೂಡಾ ಆಯೋಜಿಸಲಾಗಿದೆ.

    ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್‌ ಅವರ ನೇತೃತ್ವದಲ್ಲಿ ರಥವನ್ನು ಸ್ವಾಗತಿಸಲಾಗಿದ್ದು, ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಕಳೆದ ವರ್ಷ ನವೆಂಬರ್ 1 ರಿಂದ ಈ ರಥ ರಾಜ್ಯದಾದ್ಯಂತ ಸಂಚರಿಸಿ ಕರ್ನಾಟಕ ಸುವರ್ಣ ಸಂಭ್ರಮದ ಸಂದೇಶ ಸಾರುತ್ತಿದೆ.

    Continue Reading

    LATEST NEWS

    ಮನೆಯಲ್ಲಿ ಒಂದಕ್ಕಿಂತ ಹೆಚ್ಚು ವಾಶ್‌ ರೂಮ್ ಇದ್ರೆ ಹೆಚ್ಚುವರಿ ಶುಲ್ಕ..!

    Published

    on

    ಮಂಗಳೂರು : ಮನೆಯಲ್ಲಿ ಒಂದಕ್ಕಿಂತ ಹೆಚ್ಚು ವಾಶ್ ರೂಮ್ ಹೊಂದಿದವರಿಗೆ ತೆರಿಗೆ ರೂಪದಲ್ಲಿ ಹೆಚ್ಚುವರಿ ಶುಲ್ಕ ವಸೂಲಿಗೆ ಸರ್ಕಾರ ತೀರ್ಮಾನಿಸಿದೆ. ಈ ಕುರಿತಾಗಿ ಸರಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ನಗರ ಪ್ರದೇಶದಲ್ಲಿ ವಾಸವಾಗಿರುವವರು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ವಾಶ್ ರೂಮ್ ಹೊಂದಿದ್ದರೆ, ತಲಾ ರೂ.25 ರಂತೆ ತೆರಿಗೆ ನೀಡಬೇಕಾಗುತ್ತದೆ.

    ನಗರವಾಸಿಗಳು ಬಳಸುವ ನೀರಿನ ಬಿಲ್ಲಿನ ಶೇಖಡಾ 30 ರಷ್ಟು ಒಳಚರಂಡಿ ತೆರಿಗೆ ಹಾಗೂ ಪ್ರತಿ ಹೆಚ್ಚುವರಿ ವಾಶ್‌ರೂಮ್‌ಗೆ ರೂ.25 ತೆರಿಗೆ ನೀಡುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇಂತಹ ಒಂದು ವಾಶ್ ರೂಮ್ ಟ್ಯಾಕ್ಸ್ ಹಿಮಾಚಲ ಪ್ರದೇಶದ ಸರ್ಕಾರ ಜಾರಿಗೆ ತಂದಿದೆ.

    ಹಿಮಾಚಲ ಪ್ರದೇಶದ ಸರ್ಕಾರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಇಂತಹ ಒಂದು ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಆರ್ಥಿಕ ಸಂಕಷ್ಟದಿಂದ ಪಾರಾಗಲು ವಾಶ್‌ರೂಮ್ ಟ್ಯಾಕ್ಸ್‌ ಜಾರಿ ಮಾಡಿದ್ದಾರೆ. ಒಳಚರಂಡಿ ಬಿಲ್ ಜೊತೆಗೆ ಈ ಹೆಚ್ಚುವರಿ ಶುಲ್ಕವನ್ನು ಜಲಶಕ್ತಿ ಇಲಾಖೆ ಸಂಗ್ರಹಿಸಲಿದ್ದು ಇದು ಜಲಶಕ್ತಿ ಇಲಾಖೆಯ ಖಾತೆಗೆ ಜಮೆ ಆಗಲಿದೆ.
    ಇದರಿಂದ ಹಿಮಾಚಲ ಪ್ರದೇಶದ 5 ಮುನ್ಸಿಪಲ್ ಕಾರ್ಪೋರೇಶನ್‌, 29 ಪುರಸಭೆಗಳ ಮತ್ತು 17 ನಗರ ಪಂಚಾಯತ್ ನ ಸುಮಾರು 10 ಲಕ್ಷ ಜನರಿಗೆ ಹೊರೆಯಾಗಲಿದೆ.

    Continue Reading

    LATEST NEWS

    Trending