Connect with us

    BANTWAL

    ಪಣೋಲಿಬೈಲು ಕ್ಷೇತ್ರದಲ್ಲಿ ಜ.9ರಿಂದ ಜ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

    Published

    on

    ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜ.09ರಿಂದ ಜ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.


    ಸಜೀಪ ಮಾಗಣೆ ಶ್ರೀ ಉಳ್ಳಾಲ್ತಿ ಅಮ್ಮನವರ ವಾರ್ಷಿಕ ಪುದ್ದಾರ್ ಮೆಚ್ಚಿ ಜಾತ್ರೆಯ ಪ್ರಯುಕ್ತವಾಗಿ ತಾ. 09-01-2023ರಿಂದ ತಾ. 16-01-2023 ರವರೆಗೆ ಶ್ರೀ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ “ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ.

    ಆದರೆ ತಾ.17 ರಿಂದ ಎಂದಿನಂತೆ ಅಗೇಲು ಸೇವೆ ಇರುತ್ತದೆ ಎಂದು ಖುದ್ದು ದೇಗುಲದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    BANTWAL

    ಬಂಟ್ವಾಳ: ಹಂಚಿಕಟ್ಟೆಯಲ್ಲಿ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸೋರಿಕೆ

    Published

    on

    ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪನಿಯ ಸಿಎನ್‌ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

    ಸಿಎನ್‌ಜಿ ಸೋರಿಕೆ ಗಮನಕ್ಕೆ ಬಂದ ತಕ್ಷಣ ಲಾರಿ ಚಾಲಕ ಹೆದ್ದಾರಿ ಬದಿಗೆ ನಿಲ್ಲಿಸಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ.

    ಅದಾಗಲೇ ಸೋರಿಕೆಯನ್ನು ಚಾಲಕ ಹಾಗೂ ಸ್ಥಳೀಯರು ಸೇರಿ ತಡೆದಿದ್ದಾರೆ.

    Continue Reading

    LATEST NEWS

    Trending