Connect with us

LATEST NEWS

ಸುಬ್ರಹ್ಮಣ್ಯದಲ್ಲಿ ನಾಳೆ ಮಧ್ಯಾಹ್ನದವರೆಗೆ ದೇವರ ದರ್ಶನ & ಸೇವೆಗೆ ಅವಕಾಶವಿಲ್ಲ

Published

on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ನ.20ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ಇರುವುದರಿಂದ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ.


ಮಧ್ಯಾಹ್ನ 2ಗಂಟೆ ಬಳಿಕ ಭಕ್ತರಿಗೆ ಶ್ರೀದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಚೌತಿಯ ದಿನವಾದ ನ.27ರಂದು ಮತ್ತು ಪಂಚಮಿ ದಿನವಾದ ನ.27ರಂದು ಮತ್ತು ಪಂಚಮಿಯ ದಿನವಾದ ನ.28ರಂದು ಭಕ್ತಾದಿಗಳ ಪ್ರಾರ್ಥನೆ ಸೇವೆ ರಾತ್ರಿ ಹೊತ್ತಿನಲ್ಲಿ ಇರುವುದಿಲ್ಲ.

ಷಷ್ಠಿ ದಿನವಾದ ನ.29ರಂದು ಮಧ್ಯಾಹ್ನ ಪ್ರಾರ್ಥನೆ ಸೇವೆ ಇರುವುದಿಲ್ಲ. ಅಲ್ಲದೆ ನ.29ರಂದು ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ಇರುವುದಿಲ್ಲ.

ನ.23ರ ಲಕ್ಷದೀಪೋತ್ಸವದಂದು ಮತ್ತು ಚೌತಿ, ಪಂಚಮಿ, ಷಷ್ಠಿ ದಿನದಲ್ಲಿ ಪಂಚಾಮೃತ ಮಹಾಭಿಷೇಕ ಸೇವೆ ಇರುವುದಿಲ್ಲ.

ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಪ್ರಯುಕ್ತ ನ.21ರಿಂದ ಡಿ.5ರವರೆಗೆ ಸಂಜೆ ವೇಳೆ ನಡೆಯುವ ಆಶ್ಲೇಷ ಬಲಿ ಸೇವೆ ಇರುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕು ಎಮದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

DAKSHINA KANNADA

ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!

Published

on

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಮಹೇಶ್ ಬಸ್ ಮಾಲೀಕ  ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.

ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.  ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

LATEST NEWS

Trending