ಉಡುಪಿ: ಹಲಾಲ್ ಚಿಕನ್ ಅನ್ನು ಹಿಂದೂಗಳು ಬಾಯ್ಕಾಟ ಮಾಡಿದ್ದು ತಪ್ಪಲ್ಲ. ಹಿಂದೂಗಳ ಈ ನಡೆಯಲ್ಲಿ ಯಾವುದೇ ತಪ್ಪಿಲ್ಲ. ಹಲಾಲ್ ಮಾಂಸ ತಿನ್ನಬೇಡಿ ಎಂಬ ಕರೆ ಸರಿಯಾಗಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಸಲ್ಮಾನ ಸಮಾಜ ನಡೆದುಕೊಂಡ ರೀತಿ, ಬಂದ್ ಕರೆ ಇದಕ್ಕೆ ಕಾರಣ. ಹಿಜಾಬ್ ವಿಚಾರದಲ್ಲಿ ನಮ್ಮ ಕಾಲೇಜಿನ ಆರು ವಿದ್ಯಾರ್ಥಿಗಳಿಗೆ ಸಾರಿ ಸಾರಿ ಹೇಳಿದರೂ ಅವರು ಕೇಳಲಿಲ್ಲ.
ಮುಸಲ್ಮಾನ ಸಮಾಜ ಹಿಜಾಬ್ ವಿಚಾರವನ್ನು ಮೊದಲು ಕ್ಲಿಯರ್ ಮಾಡಿಕೊಳ್ಳಬೇಕು. ಭಟ್ಕಳದಲ್ಲಿ ಹಿಂದೂಗಳ ಅಂಗಡಿಯನ್ನು ಜಬರ್ದಸ್ತ್ ಯಾಗಿ ಬಂದ್ ಮಾಡಿಸಲಾಯ್ತು. ಈ ಎಲ್ಲಾ ಘಟನೆಗಳು ಹಿಂದೂಗಳ ಭಾವನೆಯನ್ನು ಕೆರಳಿಸಿವೆ.
ನಾವೀಗ 21ನೇ ಶತಮಾನದಲ್ಲಿದ್ದೇವೆ ಈಗಲೂ ಧರ್ಮವೇ ಮುಖ್ಯ ಎಂದು ಪಟ್ಟು ಹಿಡಿದಿದ್ದಾರೆ. ಯಾವುದೇ ಹೊಂದಾಣಿಕೆ ಮಾಡಿಕೊಳ್ಳಲು ಆಗದಿದ್ದಾಗ ಹಿಂದೂಗಳು ಕೂಡ ತಮಗೆ ಧರ್ಮ ಮುಖ್ಯ ಎಂದು ಅಭಿಪ್ರಾಯಕ್ಕೆ ಬಂದಿದ್ದಾರೆ. ಹಲಾಲ್ ವಿಚಾರದಲ್ಲಿ ಹಿಂದೂ ಜನಜಾಗೃತಿ ಮೂಡಿಸುವುದು ತಪ್ಪಲ್ಲ ಸರಿಯಾಗಿಯೇ ಇದೆ ಎಂದು ಹೇಳಿದ್ದಾರೆ.