Connect with us

    LATEST NEWS

    ಓವರ್‌ಟೇಕ್‌ ಭರದಲ್ಲಿ ಕಾರುಗಳ ಮಧ್ಯೆ ಭೀ*ಕರ ಅಫಘಾ*ತ; 6 ಮಂದಿ ದುರ್ಮರ*ಣ

    Published

    on

    ತುಮಕೂರು/ಮಂಗಳೂರು: ಮಧುಗಿರಿ ತಾಲೂಕಿನ ಕಾಟಗಾನಹಟ್ಟಿ ಹಾಗೂ ಕೆರೆಗಳಪಾಳ್ಯ ನಡುವೆ ಎರಡು ಕಾರುಗಳ ಮಧ್ಯೆ ಭೀ*ಕರ ಅಫಘಾ*ತ ಸಂಭವಿಸಿ ಐದು ಜನ ಮೃ*ತಪಟ್ಟಿದ್ದರು.

    ಜನಾರ್ಧನ ರೆಡ್ಡಿ (60 ವ), ಇವರ ಮಗಳು ಸಿಂಧೂಜಾ (32 ವ), ಸಿಂಧೂಜಾ ಪುತ್ರ ವೇದಾಸ್ ರೆಡ್ಡಿ (8 ವ), ಕಾರೇನಹಳ್ಳಿ ಗ್ರಾಮದ ನಾಗರಾಜು (30 ವ) ಹಾಗೂ ಸಿದ್ದಗಂಗಾ (27 ವ) ಸಾವನ್ನಪ್ಪಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಆನಂದ್ (30 ವ) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಘಟನೆ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಾರುಗಳ ಅಪಘಾತದಲ್ಲಿ 6 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಮಾತನಾಡಿ, ಕೊರಟಗೆರೆ ಹಾಗೂ ಮಧುಗಿರಿ ಮಧ್ಯದಲ್ಲಿ ಟೋಲ್ ಗೇಟ್ ಹತ್ತಿರ ಈ ಭೀಕರ ಅಪಘಾತ ಸಂಭವಿಸಿದೆ. ಕೊರಟಗೆರೆ ಕಡೆಗೆ ಮಾರುತಿ ಸಿಯಾಜ್ ಕಾರು ಹೋಗುತ್ತಿತ್ತು. ಮಧುಗಿರಿ ಕಡೆಗೆ ಟಾಟಾ ಟಿಯಾಗೋ ತೆರಳುತ್ತಿತ್ತು. ಓವರ್ ಟೇಕ್ ಮಾಡುವಾಗ ಸಿಯಾಜ್ ಕಾರು ಬಲಬದಿ ಲೇನ್​ಗೆ ಬಂದು ಅಪಘಾತ ಸಂಭವಿಸಿದೆ.

    ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್‌ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್

    ಸಿಯಾಜ್ ಕಾರಿನಲ್ಲಿ ಚಾಲಕ ಸಮೇತ ಒಟ್ಟು ಏಳು ಪ್ರಯಾಣಿಕರಿದ್ದರು.  ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಎದುರುಗಡೆಯಿಂದ ಬರುತ್ತಿದ್ದ ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಇವರು ಮಧುಗಿರಿ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ಕೆಲಸ ಮುಗಿಸಿಕೊಂಡು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣ ಮಧುಗಿರಿ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ನಂತರ ಜಿಲ್ಲಾಸ್ಪತ್ರೆಯಲ್ಲಿರುವ ಟ್ರಾಮಾ ಸೆಂಟರ್​ಗೆ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಮೃತದೇಹಗಳನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ ಎಂದು ಹೇಳಲಾಗಿದೆ.

    Click to comment

    Leave a Reply

    Your email address will not be published. Required fields are marked *

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’

    Published

    on

    ಮೂಡುಬಿದಿರೆ: 2024 ರ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಗೆ ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಆಯ್ಕೆಯಾಗಿದ್ದಾರೆ.

    ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು, ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

    ಅಶೋಕ್ ನಾಯ್ಕರವರು ನಮ್ಮ ಕುಡ್ಲ ವಾಹಿನಿಯ ನೃತ್ಯ ಭಜನೆ ಸೀಸನ್ 1 ಹಾಗು ಸೀಸನ್ 2 ರಲ್ಲಿ ಹಲವು ತಂಡಗಳೊಂದಿಗೆ ಭಾಗವಹಿಸಿದ್ದಾರೆ. ಇವರಿಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಲಭಿಸಿದ ಈ ಸಂಧರ್ಭದಲ್ಲಿ ನಮ್ಮ ಕುಡ್ಲ ವಾಹಿನಿಯು ಶುಭಾಶಯ ಕೋರುತ್ತಿದೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    LATEST NEWS

    Trending