BANTWAL
Bantwal : ಬಿಸಿ ರೋಡಿನ ಹೆದ್ದಾರಿ ಗುಂಡಿಗೆ ಥರ್ಮಕೋಲ್ ಪ್ರೊಟೆಸ್ಟ್..!
ಬಂಟ್ವಾಳ : ರಸ್ತೆ ಗುಂಡಿ ಇದೆ ಎಚ್ಚರಿಕೆಯಿಂದ ಚಲಿಸಿ ಎಂಬುದಕ್ಕೆ ಥರ್ಮೋಕೋಲ್ ರಸ್ತೆಯ ಗುಂಡಿಯಲ್ಲಿ ಅಚ್ಚುಕಟ್ಟಾಗಿ ಇರಿಸಿ ಚಾಲಕರಿಗೆ ಸೂಚನ ಫಲಕವಾಗಿಸಿದ ಘಟನೆಯೊಂದು ದಕ್ಷಿಣ ಕನ್ನಡದ ಬಿಸಿರೋಡಿನಲ್ಲಿ ಇಂದು ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಬೆಂಗಳೂರು ಮಂಗಳೂರಿನ ಬಿಸಿರೋಡಿನ ರಸ್ತೆಯ ಗುಂಡಿಯನ್ನು ಥರ್ಮೋಕೋಲ್ ನಿಂದ ಮುಚ್ಚಿ ಸದ್ಯ ಮೂಲಕ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಎಚ್ಚರಿಕೆ ನೀಡಿದಂತಾಗಿದೆ.
ಬಿಸಿರೋಡಿನ ಸರ್ಕಲ್ ನಿಂದ ಮುಂದೆ ರೈಲ್ವೆ ಮೇಲ್ಸತುವೆ ದಾಟಿ ಮುಂದೆ ಮಂಗಳೂರು ಹಾಗೂ ಬಿಸಿರೋಡು ಪೇಟೆಗೆ ಸರ್ವೀಸ್ ರಸ್ತೆಯನ್ನು ಪ್ರವೇಶ ಮಾಡಬೇಕಾದರೆ ಪ್ರಾಣ ಹಿಂಡುವ ಬೃಹತ್ ಗುಂಡಿಗೆ ಬಿದ್ದು ಎದ್ದು ಹೋಗಬೇಕು.
ಈ ಗುಂಡಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಅನೇಕ ತಿಂಗಳಿನಿಂದ ಇದ್ದು ಅನೇಕ ಬಾರಿ ಮಾಧ್ಯಮ ಗಳು ಹೆದ್ದಾರಿ ಇಲಾಖೆ ಯ ಗಮನಕ್ಕೆ ತಂದಿದೆಯಾದರೂ ಇಲಾಖೆ ಎಚ್ಚೆತ್ತುಕೊಂಡಿಲ್ಲ.
ಈ ಗುಂಡಿಯ ಅವಾಂತರದಿಂದಾಗಿ ಇಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗುತ್ತಿರುವುದು ಒಂದು ಕಡೆಯಾದ್ರೆ ವಾಹನ ಗುಂಡಿಗೆ ಬಿದ್ದ ಪರಿಣಾಮ ಚಲಾಯಿಸುವವರು – ಪ್ರಯಾಣಿಸುವ ಪ್ರಯಾಣಿಕರಿಗೆ ಗಾಯಗಳಾಗಿ ಆಸ್ಪತ್ರೆ ಸೇರಿದ ಅನೇಕ ಉದಾಹರಣೆಗಳಿವೆ.
ಈ ಎಲ್ಲಾ ಕಾರಣಗಳಿಂದ ಬೇಸತ್ತ ಬಿಸಿರೋಡಿನ ಜನತೆ ಕೊನಗೂ ಬೇರೆ ವಿಧಿಯಿಲ್ಲದೆ ಥರ್ಮೋಕೋಲ್ ಗಳನ್ನು ಸಾಲಾಗಿ ರಸ್ತೆಯ ಗುಂಡಿಯಲ್ಲಿರಿಸಿ ಇಲಾಖೆಗೆ ಮತ್ತೊಮ್ಮೆ ನೆನಪಿಸುವ ಕೆಲಸ ಮಾಡಿದೆ.
ಇನ್ನಾದರೂ ಇಲಾಖೆ ಎಚ್ಚೆತ್ತುಕೊಳ್ಳುತ್ತಾ ಅಥವಾ ಹಳೇ ಚಾಳಿ ಮುಂದುವರೆಸುತ್ತಾ ? ಕಾದು ನೋಡಬೇಕಿದೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
BANTWAL
ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು
ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.
ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.