Connect with us

DAKSHINA KANNADA

ತಲಪಾಡಿಯಲ್ಲಿ ಹಲವು ಅಂಗಡಿಗಳಲ್ಲಿ ಕೈಚಳಕ ತೋರಿಸಿದ ಕಳ್ಳರು-ದುಬಾರಿ ಸೊತ್ತು ಕಳವು

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ತಲಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನಿನ್ನೆ ತಡ ರಾತ್ರಿ ಕಳ್ಳರು ನುಗ್ಗಿ ಸಾವಿರಾರು ರೂಪಾಯಿ ಬೆಲೆಬಾಳುವ ಸೊತ್ತುಗಳನ್ನು ಕಳವು ಮಾಡಿದ್ದು, ಶನಿವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.

ಅಶ್ರಫ್ , ಕುಲದೀಪ್, ಶ್ರೀಧರ್, ಮಹಮ್ಮದ್ ಮತ್ತು ಶಂಕರ್ ಎಂಬವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂಪಾಯಿ ಬೆಲೆಬಾಳುವ ಸಿಗರೇಟ್ ಹಾಗೂ ಡ್ರಾಯರ್‌ ನಲ್ಲಿದ್ದ ನಗದು ಕಳವಾಗಿದೆ.


ರಾತ್ರಿ ವೇಳೆ ಎಲ್ಲಾ ಅಂಗಡಿಗಳ ಬೀಗ ಮುರಿದಿರುವ ಕಳ್ಳರು ಕೈಚಳಕ ತೋರಿಸಿದ್ದಾರೆ. ಕೇರಳದ ಮಂಜೇಶ್ವರ ಹಾಗೂ ಕುಂಜತ್ತೂರು ಭಾಗದಲ್ಲಿಯೂ ಇದೇ ರೀತಿಯ ಕಳವು ಕೃತ್ಯ ಕೆಲವು ದಿನಗಳ ಹಿಂದೆ ನಡೆದಿತ್ತು.

ಇದೀಗ ತಲಪಾಡಿಗೂ ವ್ಯಾಪಿಸಿದೆ. ಗಡಿಭಾಗ ತಲಪಾಡಿ ಗಾಂಜಾ ವ್ಯಸನಿಗಳ ಅಡ್ಡೆಯಾಗಿದ್ದು , ಮದ್ಯವ್ಯಸನಿಗಳೇ ಕಳವು ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆಯಿದೆ.

ನಿನ್ನೆ ತಡ ರಾತ್ರಿ ವೇಳೆ ಮಾರುತಿ 800 ಕಾರೊಂದು ಶಂಕಾಸ್ಪದ ರೀತಿಯಲ್ಲಿ ತಿರುಗಾಡುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದು, ತಂಡವೊಂದು ಈ ಕಾರಿನಲ್ಲಿ ಬಂದು ಕೃತ್ಯವೆಸಗಿರುವ ಸಾಧ್ಯತೆ ಇದೆ ಅನುಮಾನ ವ್ಯಕ್ತಪಡಿಸಲಾಗಿದೆ.

ಗಡಿಭಾಗ ತಲಪಾಡಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತು, ಗಸ್ತು ಕಾರ್ಯಾಚರಣೆ ಮತ್ತು ಪೊಲೀಸ್‌ ವಾಹನಗಳ ಓಡಾಟ ನಿರಂತರವಾಗಿ ಇರುತ್ತದೆ. ಆದರೂ ಕಳ್ಳರು ಕೃತ್ಯ ಎಸಗಿರುವುದು ಅಚ್ಚರಿಗೆ ಕಾರಣವಾಗಿದೆ.

DAKSHINA KANNADA

ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ

Published

on

ಉಳ್ಳಾಲ : ಇತ್ತೀಚೆಗಿನ ದಿನಗಳಲ್ಲಿ ಹೃದಯಾಘಾ*ತ ಪ್ರಕರಣಗಳು ಹೆಚ್ಚುತ್ತಿವೆ. ಹೃದಯಾಘಾ*ತ ಸಂಭವಿಸಲು ವಯಸ್ಸಿನ ಇತಿ ಮಿತಿ ಎಂಬುದಿಲ್ಲದಂತಾಗಿದೆ. ಇದೀಗ ಕೊಲ್ಯ ಕನೀರುತೋಟ ನಿವಾಸಿ 28 ರ ಹರೆಯದ ವಿವಾಹಿತರೊಬ್ಬರು ಮಲಗಿದ್ದಲ್ಲೇ ಹೃದಯಾಘಾ*ತಕ್ಕೀಡಾಗಿ ಸಾ*ವನ್ನಪ್ಪಿರುವ ಘಟನೆ ಮಂಗಳವಾರ ಸಂಭವಿಸಿದೆ.


ಕನೀರುತೋಟ ನಿವಾಸಿ ಜಿತೇಶ್ (28) ಸಾ*ವನ್ನಪ್ಪಿದವರು. ಜಿತೇಶ್ ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದರು. ಯಾವತ್ತೂ ಬೇಗ ಏಳುತ್ತಿದ್ದ ಜಿತೇಶ್ ಇನ್ನೂ ಯಾಕೆ ಎದ್ದಿಲ್ಲ ಎಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಕಬಕ-ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶ*ವ ಪತ್ತೆ

ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ವಿವಾಹವಾಗಿದ್ದರು. ಮೃ*ತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Continue Reading

DAKSHINA KANNADA

ಕಬಕ-ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶ*ವ ಪತ್ತೆ

Published

on

ಪುತ್ತೂರು: ಇಲ್ಲಿನ ಮುರ ಎಂಬಲ್ಲಿ ಕಬಕ-ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿಯಲ್ಲಿ ವ್ಯಕ್ತಿಯೊಬ್ಬರ ಮೃ*ತದೇಹ ಪತ್ತೆಯಾಗಿರುವ ಘಟನೆ ಎ.23ರಂದು ಬೆಳಗಿನ ಜಾವ ಬೆಳಕಿಗೆ ಬಂದಿದೆ.

death

ಮೃತಪಟ್ಟ ವ್ಯಕ್ತಿಯ ದೇಹ ಹಳಿಯಿಂದ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟಿದ್ದು ಕಾಲು ತುಂಡಾದ ಸ್ಥಿತಿಯಲ್ಲಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಇದು ಆತ್ಮಹ*ತ್ಯೆಯೋ? ಅಥವಾ ರೈಲು ಡಿಕ್ಕಿಯಾಗಿ ಸಂಭವಿಸಿದ ಘಟನೆಯೋ ಅನ್ನುವುದು ತನಿಖೆ ವೇಳೆ ಬೆಳಕಿಗೆ ಬರಲಿದೆ.

ಮುಂದೆ ಓದಿ..; ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

death

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending