Tuesday, January 26, 2021

ಬಾರ್ ಗೆ ನುಗ್ಗಿ ನಗ,ನಗದು, ಮದ್ಯ ಬಾಟಲಿ ದೋಚಿ  ಪರಾರಿಯಾದ ಕಳ್ಳರು..!

ಬಾರ್ ಗೆ ನುಗ್ಗಿ ನಗ,ನಗದು, ಮದ್ಯ ಬಾಟಲಿ ದೋಚಿ  ಪರಾರಿಯಾದ ಕಳ್ಳರು..!

ಬಂಟ್ವಾಳ: ಬಾರ್ ವೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂ ನಗದು ಹಾಗೂ ಮದ್ಯ ಬಾಟಲಿಗಳನ್ನು ಕಳವು ಮಾಡಿದ ಘಟನೆ ಮೆಲ್ಕಾರ್ ಸಮೀಪದ ಕಂದೂರು ಎಂಬಲ್ಲಿ ನಡೆದಿದೆ. ಕಂದೂರುನಲ್ಲಿರುವ ಸುರಭಿ ಬಾರ್ ಗೆ ರಾತ್ರಿ ವೇಳೆ ಎದುರು ಭಾಗದ ಶಟರ್ ನ ಬೀಗ ಮುರಿದು ಒಳನುಗ್ಗಿದ ಕಳ್ಳರು ಕ್ಯಾಷ್ ಕೌಂಟರ್ ನಲ್ಲಿದ್ದ ಸುಮಾರು ಮೂರು ಲಕ್ಷ ರೂಪಾಯಿ ನಗದು ದೋಚಿದ್ದಾರೆ.

ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ , ನಗರ ಠಾಣಾ ಎಸ್.ಐ. ಅವಿನಾಶ್, ಅಪರಾಧ ವಿಭಾಗದ ಎಸ್.ಐ ಕಲೈಮಾರ್ , ಎಚ್.ಸಿ.ಸುರೇಶ್ ಪಡಾರ್ ,ಸಿಬ್ಬಂದಿ ಗಳಾದ ಶ್ರೀಕಾಂತ್, ಉಸ್ಮಾನ್ , ಪ್ರಶಾಂತ್ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೊತೆಗೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞ ರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.