Connect with us

LATEST NEWS

ಅಬ್ಬಾ !! ಇಷ್ಟು ಚಿಕ್ಕ ಜಾಗದಲ್ಲಿ ಇನ್ನೋವಾ ಕಾರು ಪಾರ್ಕ್ ಮಾಡಿದ್ದೇಗೆ..?

Published

on

ಅಬ್ಬಾ !! ಇಷ್ಟು ಚಿಕ್ಕ ಜಾಗದಲ್ಲಿ ಇನ್ನೋವಾ ಕಾರು ಪಾರ್ಕ್ ಮಾಡಿದ್ದೇಗೆ..?

ಬೆಂಗಳೂರು : ಚಾಲನೆ ಎಂಬುದು ಅತ್ಯಂತ ಸೂಕ್ಷ್ಮ ಜವಾಬ್ದಾರಿ. ಚಾಲನೆ ಸಂದರ್ಭ ಮೈಯೆಲ್ಲ ಕಣ್ಣಾಗಿ ಎಚ್ಚರರಿಂದ ಚಾಲನೆ ಮಾಡಬೇಕು. ತಪ್ಪಿದರೂ ದೊಡ್ಡ ಅನಾಹುತವೇ ನಡೆದು ಹೋಗುವುದು ಗ್ಯಾರಂಟಿ.

ಕೆಲವರು ಚಾಲನಾ ಕ್ಷೇತ್ರದಲ್ಲಿ ಎಷ್ಟು ಪರಿಪಕ್ವತೆ ಹೊಂದಿರುತ್ತಾರೆ ಎಂದರೆ ಇವರ ಚಾಲನಾ ಕೌಶಲ್ಯವನ್ನು ನೋಡಿದಾಗ ನಿಜಕ್ಕೂ ಅಚ್ಚರಿಯೊಂದಿಗೆ ಮೈ ರೋಮಾಂಚನಗೊಳ್ಳುತ್ತದೆ. ಸದ್ಯ ಇಂತಹದ್ದೇ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

ಸಾಮಾನ್ಯವಾಗಿ ಹೊಸ ಚಾಲಕರಿಗೆ ವಾಹನ ರಿವರ್ಸ್ ತೆಗೆಯುವುದು ಮತ್ತು ಸರಿಯಾದ ರೀತಿಯಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದು ಆರಂಭದ ದಿನಗಳಲ್ಲಿ ಕಷ್ಟವಾಗುತ್ತದೆ. ಅತ್ಯಂತ ಸಣ್ಣ ಜಾಗದಲ್ಲಿ ವಾಹನವನ್ನು ಪಾರ್ಕ್ ಮಾಡುವುದೆಂದರೆ ಒಂದಷ್ಟು ಜನರಿಗೆ ಬಲು ಸವಾಲಿನ ಕೆಲಸ.

ಅದು ಕೂಡ ಉದ್ದ ವಾಹನ ಹಿಂದಿನ – ಮುಂದಿನ ಟಯರುಗಳ ಎದುರು ಎಷ್ಟು ಅಂತರವಿದೆ ಎಂಬುವುದು ಕೂಡ ಗಮನಿಸಲಾಗುತ್ತಿಲ್ಲ. ಆದರೆ ಇಲ್ಲೊಬ್ಬರು ಅತ್ಯಂತ ಕಡಿಮೆ ಜಾಗದಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಬಲು ಎಚ್ಚರಿಕೆಯಿಂದಲೇ ಚಲಾಯಿಸಿ ಮುಂದೆ ಸಾಗಿದ್ದಾರೆ.

ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ ವಾಹನ ಪಾರ್ಕಿಂಗ್‌ನದ್ದೇ ದೊಡ್ಡ ಸಮಸ್ಯೆ. ಆದರೆ, ಇಲ್ಲೊಬ್ಬ ಚಾಲಕ ಪಾದಚಾರಿ ಮಾರ್ಗದಲ್ಲಿದ್ದ ಕಿರಿದಾದ ಜಾಗದಲ್ಲಿ ತನ್ನ ಕಾರನ್ನು ನಿಲ್ಲಿಸಿದ್ದರು.

ಬಳಿಕ ಇದೇ ಇನ್ನೋವಾ ವಾಹನವನ್ನು ಅತ್ಯಂತ ನಾಜೂಕಾಗಿ ಇಲ್ಲಿಂದ ಚಲಾಯಿಸಿಕೊಂಡು ಈತ ಸಾಗಿದ್ದು, ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಈಗ ಎಲ್ಲರ ಗಮನ ಸೆಳೆದಿದೆ.

https://twitter.com/faizal_peraje/status/1302645898808238085?s=20

LATEST NEWS

ಹೊಸ ಅಪ್​ಡೇಟ್ ನೊಂದಿಗೆ ಬರುತ್ತಿದೆ ವಾಟ್ಸ್ಆ್ಯಪ್; ಏನದು ಗೊತ್ತಾ!?

Published

on

ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ಮತ್ತೊಂದು ಹೊಸ ಫೀಚರ್ ಪರಿಚಯಿಸುತ್ತಿದೆ.


ಏನಿದು ಫೀಚರ್ ?

ವಾಟ್ಸ್ ಆ್ಯಪ್ ಗೆ ಅತ್ಯಂತ ಹೆಚ್ಚಿನ ಬಳಕೆದಾರರಿದ್ದಾರೆ. ಈಗಾಗಲೇ ನೂತನ ಫೀಚರ್ ಗಳನ್ನು ವಾಟ್ಸ್ ಆ್ಯಪ್ ಪರಿಚಯಿಸುತ್ತಿರುತ್ತದೆ. ಇದೀಗ ಹೊಸ ಫೀಚರ್​ವೊಂದನ್ನು ಪರಿಶೀಲಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವೀಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದಾಗಿದೆ. ಬೀಟಾ ಆವೃತ್ತಿಯಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ನಿಯರ್ ​ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಜನಪ್ರಿಯ. ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ.

Continue Reading

LATEST NEWS

123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

Published

on

ದೆಹಲಿ: ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ಹವಾಮಾನ ಮುನ್ಸೂಚನೆ ಬಿಡುಗಡೆ ಮಾಡಿದ್ದು ಇದೀಗ ಅಚ್ಚರಿ ಮೂಡಿಸಿದೆ. 1901ರ ನಂತರ ಏಪ್ರಿಲ್‌ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

havamana

ಎಲ್ಲಾ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಎಪ್ರಿಲ್‌ ತಿಂಗಳಿನಲ್ಲಿ ಹೆಚ್ಚು ತಾಪಮಾನ ದಾಖಲಾಗಿದೆ. ದೇಶದಲ್ಲಿ 1901ರ ನಂತರ ಇದೇ ಮೊದಲ ಬಾರಿಗೆ ಹೆಚ್ಚು ತಾಪಮಾನ ಏರಿಕೆಯಾಗಿರುವುದು. ಎಪ್ರಿಲ್ ತಿಂಗಳಿನಲ್ಲಿ ಕೆಲವು ಕಡೆ ಆಲಿಕಲ್ಲು ಸಹಿತೆ ಮಳೆ ಬಂದಿದ್ದು, ಮೇ ತಿಂಗಳಿನಲ್ಲಿ ಹೆಚ್ಚಿನ ಉರಿಬಿಸಿಲು, ಶಾಖ ಮತ್ತು ಆಲಿಕಲ್ಲು ಮುಂದವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಇನ್ನು ಮೇ ತಿಂಗಳಿನಲ್ಲಿ ಬಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದ್ದು, ಇನ್ನು 11 ದಿನಗಳ ಕಾಲ ಬಿಸಿಗಾಳಿ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮುಂದೆ ಓದಿ..; ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಏಪ್ರಿಲ್ 5 ರಿಂದ 7 ರವರೆಗೆ, ನಂತರ 15 ರಿಂದ 30 ರವರೆಗೆ ಹೆಚ್ಚಿನ ತಾಪಮಾನ ಮತ್ತು ಆಲಿಕಲ್ಲು ಮಳೆಯಾಗಿದೆ. ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಏಪ್ರಿಲ್ ತಿಂಗಳಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ಕನಿಷ್ಠ ತಾಪಮಾನ 28.12 ಡಿಗ್ರಿ ಸೆಲ್ಸಿಯಸ್ ಎಂದು ಮೊಹಾಪಾತ್ರ ಹೇಳಿದ್ದಾರೆ. ದಕ್ಷಿಣ ಪರ್ಯಾಯ ದ್ವೀಪದ ಭಾರತದಲ್ಲಿ 1980 ರ ದಶಕದಿಂದಲೂ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ ಎಂದು ಅವರು ವರದಿ ಮಾಡಿದ್ದಾರೆ.

ಮುಂದಿನ 11 ದಿನದ ಶಾಖದ ಅಲೆ, ಆಲಿಕಲ್ಲು ಮಳೆ:

ದಕ್ಷಿಣ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ ಮತ್ತು ಗುಜರಾತ್‌ನಲ್ಲಿ ಮೇ ತಿಂಗಳಲ್ಲಿ 8-11 ದಿನಗಳವರೆಗೆ ಶಾಖದ ಅಲೆಗಳು ಇರಬಹುದೆಂದು ಮಹಾಪಾತ್ರ ಹೇಳಿದ್ದಾರೆ. ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಛತ್ತೀಸ್‌ಗಢ, ಆಂತರಿಕ ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಒಳಭಾಗ ಕರ್ನಾಟಕ, ತೆಲಂಗಾಣದಲ್ಲಿ 5-5 ವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಉತ್ತರ ಭಾರತ, ಮಧ್ಯ ಭಾರತ ಮತ್ತು ಪೆನಿನ್ಸುಲಾರ್ ಭಾರತದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ಮೂರು ದಿನಗಳ ಕಾಲ ಆಲಿಕಲ್ಲು ಮಳೆಯಾಗುತ್ತದೆ ಎಂದು ಹೇಳಿದ್ದಾರೆ.

Continue Reading

LATEST NEWS

ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

Published

on

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಪ್ರಕರಣದ ಆರೋಪ ಎದುರಿಸುತ್ತಿರೋ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿದ್ದಾರೆ ಎನ್ನಲಾಗಿದೆ. ಇದೀಗ ಎಸ್ಐಟಿ ಅಧಿಕಾರಿಗಳು ಲುಕ್‌ ಔಟ್ ನೋಟಿಸ್ ಹೊರಡಿಸಿದ್ದಾರೆ.


ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ಲೈಂ*ಗಿಕ ದೌರ್ಜ*ನ್ಯ ಆರೋಪ ಕೇಳಿಬಂದಿದೆ. ಈ ಬಗ್ಗೆ ವೀಡಿಯೋ ಹಾಸನ ಜಿಲ್ಲೆಯಾದ್ಯಂತ ಸದ್ದು ಮಾಡಿದೆ. ಈ ಬಗ್ಗೆ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರನ್ನೂ ದಾಖಲಿಸಿದ್ದಾರೆ. ಪ್ರಕರಣದ ಕುರಿತು ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ಎಸ್ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಅದಕ್ಕೂ ಮೊದಲೇ ಪ್ರಜ್ವಲ್‌ ದೇಶದಿಂದ‌ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪ್ರಕರಣ ; ವೀಡಿಯೋ ಹರಿಬಿಟ್ಟ ಕಾರ್ತಿಕ್ ನಾಪತ್ತೆ! ಮಲೇಷ್ಯಾಕ್ಕೆ ಹೋಗಿರುವ ಶಂಕೆ

ಸಮಯಾವಕಾಶ ಕೇಳಿದ್ದ ಪ್ರಜ್ವಲ್ :

ಸದ್ಯಕ್ಕೆ ಜರ್ಮನಿಯವಲ್ಲಿರುವ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಹಾಗಾಗಿ, ತಮಗೆ ಏಳು ದಿನಗಳ ಕಾಲಾವಕಾಶ ಬೇಕು ಎಂದು ತಮ್ಮ ವಕೀಲರ ಮೂಲಕ ಮನವಿ ಸಲ್ಲಿಸಿದ್ದರು. ಆದರೆ, ಆ ಮನವಿಯ ಹೊರತಾಗಿಯೂ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದೆ.

Continue Reading

LATEST NEWS

Trending