Connect with us

ಮಹಾಮಾರಿ ಕೊರೊನಾದಿಂದ ಪಾರಾಗಿ ಬಂದ ಮೊದಲ ವ್ಯಕ್ತಿಯ ಸತ್ಯ ಕಥೆ ಇದು…!!

Published

on

ಮಹಾಮಾರಿ ಕೊರೊನಾದಿಂದ ಪಾರಾಗಿ ಬಂದ ಮೊದಲ ವ್ಯಕ್ತಿಯ ಸತ್ಯ ಕಥೆ ಇದು…!!

ಭಾರತದಲ್ಲಿ ಕೊರೊನಾ ವೈರಸ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ವೇಳೆ ಮೂರನೇ ಹಂತ ತಲುಪಿದರೆ ಜನಸಂಖ್ಯೆಯಲ್ಲಿ ವಿಶ್ವದಲ್ಲೇ 2 ನೇ ಅತೀ ಹೆಚ್ಚು ಜನಸಂಖ್ಯೆ ವಿರುವ ಭಾರತದಲ್ಲಿ ಇದು ಊಹಿಸಲೂ ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗುವ ಭಯ ಕಾಡುತ್ತಿದೆ. ಕೊರೋನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಆದರೆ ಗುಣಮುಖರಾಗುವವರು ಬೆರಳೆಣಿಕೆಯ ಮಂದಿ ಮಾತ್ರ. ಇದೇ ಕೊರೊನಾ ಮಾಹಾಮಾರಿಯ ದವಡೆಯಿಂದ ಪಾರಾಗಿ ಬಂದವವರು ಬೆಂಗಳೂರಿನ ಆರ್.ಆರ್.ನಗರದ ನಿವಾಸಿ ವೆಂಕಟ್ ರಾಘವ್. ಕೊರೊನಾ ಸೋಂಕು ತಮಗೆ ತಗುಲಿದ್ದು ಹೇಗೆ..? ಮತ್ತು ಚಿಕಿತ್ಸೆ ಹೇಗಿತ್ತು ಎಂಬುದರ ಬಗ್ಗೆ ಸವಿಸ್ತಾರವಾಗಿ ವಿವರಿಸಿದ್ದಾರೆ.

ಅವರ ಮಾತುಗಳಲ್ಲೇ ಅದರ ಅನುಭವ ಕೇಳೋಣ..

ನಮಸ್ಕಾರ,.. ನಾನು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ಮೊದಲ ವ್ಯಕ್ತಿಯೂ ನಾನೆ..! ಮಾರ್ಚ್ ಮೊದಲ ವಾರ ನಾನು ಅಮೇರಿಕಕ್ಕೆ ಹೋಗಬೇಕಿತ್ತು. ಕೊರೊನಾ ಸೋಂಕಿನ ಎಫೆಕ್ಟ್‌ನಿಂದ ಅದಾಗಲೇ ವಿಶ್ವದ ಹಲವು ರಾಷ್ಟ್ರಗಳು ಲಾಕ್‍ಡೌನ್ ಆಗಿದ್ದುವು. ಇದರ ಪರಿಣಾಮ ಇಟಲಿ ಮತ್ತು ಚೀನಾದವರು ಯುಎಸ್ ಮಾರ್ಗವಾಗಿ ಪ್ರಯಾಣಿಸುತ್ತಿದ್ದರು. ಈ ವೇಳೆ ಸಾರ್ವಜನಿಕ ಶೌಚಾಲಯ, ಬಯೋಮೆಟ್ರಿಕ್ ಬಳಕೆ ಮಾಡಿದಾಗ ನನಗೆ ಕೊರೊನಾ ವೈರಸ್ ತಗುಲಿದಿದೆ ಎಂಬುವುದು ನನ್ನ ಅನಿಸಿಕೆ. ಪ್ರಯಾಣದ ವೇಳೆ ಸೋಂಕಿತರ ಸಂಪರ್ಕಕ್ಕೆ ಬಂದಾಗ ಕೊರೊನಾ ತಗುಲಿರಬಹುದು. ಇದೇ ಮಾರ್ಗದ ಮೂಲಕ ಕೊರೊನಾ ನನಗೆ ತಗುಲಿತ್ತು ಎಂಬುದರ ಬಗ್ಗೆ ಖಾತ್ರಿ ಇಲ್ಲ.ಭಾನುವಾರ ನಾನು ಯುಎಸ್ ನಲ್ಲಿ ತಲುಪಿದೆ. ಮಾರ್ಚ್ 6 ಗುರುವಾರ ನನಗೆ ಜ್ವರ ಕಾಣಿಸಿಕೊಂಡಿತು. ಪ್ರಯಾಣ ಮಾಡಿದ್ದರಿಂದ ಜ್ವರ ಎಂದು ತಿಳಿದು ಕೆಲ ಮಾತ್ರೆ ತೆಗೆದುಕೊಂಡು ಚೇತರಿಕೆ ಕಾಣಲಿಲ್ಲ. ಜ್ವರದ ಜೊತೆಯಲ್ಲಿ ಶೀತವು ಹೆಚ್ಚಾಗಿದ್ದರಿಂದ ನನ್ನ ಪ್ರವಾಸವನ್ನು ಮುಂದೂಡಿ ವಾಪಸ್ ಬಂದೆ. ನನ್ನ ಜ್ವರದ ಬಗ್ಗೆ ಅನುಮಾನಗಳಿದ್ದರಿಂದ ವಿಮಾನ ನಿಲ್ದಾಣದ ವೈದ್ಯರ ಬಳಿ ತೆರಳಿ ಆರೋಗ್ಯದಲ್ಲಾದ ಏರುಪೇರುಗಳ ಬಗ್ಗೆ ಮಾಹಿತಿ ನೀಡಿದೆ.ಕೊರೊನಾ ವೈರಸ್ ಸೋಂಕು ತಗುಲಿದೆಯಾ ಅಥವಾ ಇಲ್ವಾ ಎಂಬುದರ ಬಗ್ಗೆ ತಿಳಿದುಕೊಳ್ಳಬೇಕು. ಅನುಮಾನ ಮತ್ತು ಭಯದ ಜೊತೆ ಮನೆಗೆ ಹೋಗಲಾರೆ. ಒಂದು ವೇಳೆ ಸೋಂಕು ತಗುಲಿದ್ದರೂ, ಅದು ನನ್ನಿಂದ ಬೇರೆಯವರಿಗೆ ಹರಡೋದು ಬೇಡ ಎಂದು ವಿಮಾನ ನಿಲ್ದಾಣದ ವೈದ್ಯರಿಗೆ ಹೇಳಿದೆ. ಮಾರ್ಚ್ ಮೊದಲ ವಾರದಲ್ಲಿ ಏರ್ ಪೋರ್ಟ್ ವೈದ್ಯರ ಬಳಿ ಕೊರೊನಾ ವೈರಸ್ ಬಗ್ಗೆ ಪರೀಕ್ಷಿಸುವ ಯಾವುದೇ ವೈದ್ಯಕೀಯ ಉಪಕರಣಗಳು ಇರಲಿಲ್ಲ. ಹಾಗಾಗಿ ನನಗೆ ಕೊರೊನಾ ನೆಗಟಿವ್ ಎಂದು ರಿಪೋರ್ಟ್ ನೀಡಿದರು. ವಿಮಾನ ನಿಲ್ದಾಣದಿಂದ ಹೊರ ಬಂದ ನಾನು ಕಂಪನಿ ಕಳುಹಿಸಿದ ಕ್ಯಾಬ್ ನಲ್ಲಿ ಮನೆ ಸೇರಿದೆ.ನನಗೆ ಅನುಮಾನವಿತ್ತು: ಮನೆಗೆ ಬಂದ ನಂತರವೂ ನಾನು ಆರೋಗ್ಯವಾಗಿದ್ದೇನೆ ಎಂಬುದರ ಬಗ್ಗೆ ಅನುಮಾನವಿತ್ತು. ಪತ್ನಿಗೆ ವಿಷಯ ತಿಳಿಸಿ ಕುಟುಂಬದವರಿಂದ ಅಂತರ ಕಾಯ್ದುಕೊಂಡು ಪ್ರತ್ಯೇಕ ಕೋಣೆಯಲ್ಲಿ ಉಳಿದುಕೊಂಡೆ. ಆರ್.ಆರ್.ನಗರದಲ್ಲಿಯ ಕ್ಲಿನಿಕ್ ಗೆ ತೆರಳಿದಾಗ ಅಲ್ಲಿಯ ಡಾಕ್ಟರ್ ಸಹ ಕೊರೊನಾ ಬಗ್ಗೆ ಭಯಗೊಂಡಿದ್ದರು. ತಮ್ಮ ಹತ್ರ ಕೊರೊನಾಗೆ ಚಿಕಿತ್ಸೆ ನೀಡುವ ಸೌಲಭ್ಯಗಳಿಲ್ಲ. ಅವರ ಸಲಹೆಯ ಮೇರೆಗೆ ರಾಜೀವ್ ಗಾಂಧಿ ಆಸ್ಪತ್ರೆಗೆ ತೆರಳಿದೆ.ರಾಜೀವ್ ಗಾಂಧಿ ಆಸ್ಪತ್ರೆಯ ಸಿಬ್ಬಂದಿ ಅತ್ಯಂತ ಕಾಳಜಿಯಿಂದ ನನಗೆ ಚಿಕಿತ್ಸೆ ನೀಡಿದರು. ನನ್ನ ಟ್ರಾವೆಲ್ ಹಿಸ್ಟರಿ, ನನ್ನ ಜೊತೆಗೆ ನೇರ ಸಂಪರ್ಕದಲ್ಲಿದ್ದವರು ಎಲ್ಲ ಮಾಹಿತಿ ಪಡೆದು ಕೆಲವು ಮಾತ್ರೆ ನೀಡಿ ವರದಿ ಬರುವರೆಗೂ ಪ್ರತ್ಯೇಕವಾಗಿರುವಂತೆ ತಿಳಿಸಿ ಕಳುಹಿಸಿದರು.ಮರುದಿನ ಮಧ್ಯಾಹ್ನ ರಾಜೀವ್ ಗಾಂಧಿ ಆಸ್ಪತ್ರೆಯ ವೈದ್ಯ ಡಾ.ಪದ್ಮಾ ಕರೆ ಮಾಡಿ, ನಿಮ್ಮಲ್ಲಿ ಕೊರೊನಾ ವೈರಸ್ ಹೆಚ್ಚಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಾಗುವಂತೆ ತಿಳಿಸಿದರು. ಕೂಡಲೇ ಬಟ್ಟೆ ಪ್ಯಾಕ್ ಮಾಡಿಕೊಂಡು ಆಸ್ಪತ್ರೆ ಕಳುಹಿಸಿದ ಆಂಬುಲೆನ್ಸ್ ನಲ್ಲಿ ತೆರಲಿ ಐಸೋಲೇಶನ್ ವಾರ್ಡಿನಲ್ಲಿ ದಾಖಲಾದೆ.ವೈದ್ಯರ ಸೂಚನೆ ಪಾಲಿಸಿ: ಕೊರೊನಾ ವೈರಸ್ ತಗುಲಿದ ಸೋಂಕಿತನಾಗಿದ್ದರಿಂದ ಆಸ್ಪತ್ರೆ ಸಿಬ್ಬಂದಿ ಸಹಜವಾಗಿ ಆತಂಕಕ್ಕೊಳಗಾಗಿದ್ದರು. ಜ್ವರ ಪದೇ ಪದೇ ಏರುಪೇರಾಗಿತ್ತು. ಐಸೋಲೇಶನ್ ವಾರ್ಡಿನಲ್ಲಿ ಎಲ್ಲ ವ್ಯವಸ್ಥೆ ಕಲ್ಪಿಸಲಾಗಿತ್ತು. ಗುಣಮಟ್ಟದ ಆಹಾರವನ್ನು ನೀಡುತ್ತಿದ್ದರು. ಒಮ್ಮೆ ನಾನು ದಕ್ಷಿಣ ಭಾರತದ ಶೈಲಿಯ ತಿಂಡಿ ಬೇಕೆಂದಾಗ ಡಾ.ದೀಪಕ್ ಎಂಬವರು ತಾವೇ ಹೋಟೆಲಿಗೆ ತೆರಳಿ ತಂದುಕೊಟ್ಟರು. ಐಸೋಲೆಶನ್ ವಾರ್ಡಿನಲ್ಲಿ ಹೆಚ್ಚು ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದರು. ವೈದ್ಯರ ನಿರಂತರ ಚಿಕಿತ್ಸೆಯಿಂದ ಜ್ವರ ಕಡಿಮೆಯಾಗುತ್ತಾ ಬಂತು. ಎರಡು ವಾರಗಳ ನಂತರ ನನ್ನಲ್ಲಿ ಚೇತರಿಕೆ ಕಾಣಿಸ್ತು. ನಾನು ಸಹ ಭಯಪಡದೇ ವೈದ್ಯರು ಹೇಳಿದಂತೆ ಆರೋಗ್ಯ ಕಾಪಾಡಿಕೊಂಡಿದ್ದರಿಂದ ಇಂದು ಗುಣಮುಖವಾಗಿದ್ದೇನೆ. ಕೈಗಳನ್ನು ತೊಳೆಯುತ್ತೀರಿ, ಹೊರಗಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ನನಗೆ ಕೊರೊನಾಗೆ ಬಂದಿದ್ದರಿಂದ ನೆರೆಹೊರೆಯವರು ತುಂಬಾ ಪ್ಯಾನಿಕ್ ಆಗಿದ್ದರು. ಆದ್ರೆ ನಮ್ಮ ಪಕ್ಕದ್ಮನೆಯ ಮಂಜುಳಾ ಎಂಬವರು ಪ್ರತಿನಿತ್ಯ ಊಟ ಕಳುಹಿಸುತ್ತಿದ್ದರು. ಮಗಳಿಗೆ ಪಿಯುಸಿ ಪರೀಕ್ಷೆ ಇತ್ತು. ಕಾಲೇಜಿನವರು ಪರೀಕ್ಷೆಗೆ ಅನುಮತಿ ನೀಡದಿದ್ದಾಗ ಸರ್ಕಾರವೇ ಆಕೆಗೆ ಒಂದು ಪರೀಕ್ಷಾ ಕೇಂದ್ರವನ್ನು ತೆರೆಯ್ತು. ಆರೋಗ್ಯ ಇಲಾಖೆ ಸಿಬ್ಬಂದಿ ಮನೆಗೆ ಬಂದು ಪತ್ನಿಗೆ ಧೈರ್ಯ ತುಂಬಿದ್ರು. ಯಾವ ಖಾಸಗಿ ಆಸ್ಪತ್ರೆ ನಮ್ಮ ಸಹಾಯಕ್ಕೆ ಬರಲಿಲ್ಲ. ಸರ್ಕಾರವೇ ನಮ್ಮ ಸಹಾಯಕ್ಕೆ ಬಂತು. ಆರೋಗ್ಯ ಸಚಿವರಾದ ಶ್ರೀರಾಮುಲು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ರಾಜೀವ್ ಗಾಂಧಿ ಆಸ್ಪತ್ರೆಯಿಂದ ಹೊರ ಬಂದರೂ ಏಪ್ರಿಲ್ 6ರವರೆಗೆ ಹೋಮ್ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಿದ್ದಾರೆ. ಹಾಗಾಗಿ ಕುಟುಂಬಸ್ಥರಿಂದ ಅಂತರ ಕಾಯ್ದುಕೊಂಡಿದ್ದೇನೆ. ಪ್ರತ್ಯೇಕ ತಟ್ಟೆಯನ್ನು ಬಳಸುತ್ತಿದ್ದೇನೆ. ನನ್ನ ಬಟ್ಟೆಗಳನ್ನು ಪ್ರತ್ಯೇಕವಾಗಿ ಇರಿಸಲಾಗುತ್ತಿದೆ. ವೈದ್ಯರು ಸೂಚನೆಯನ್ನು ಪಾಲಿಸಿದ್ರೆ ಕೊರೊನಾದಿಂದ ಉಳಿಯಬಹುದು..

ವಂದನೆಗಳು
ವೆಂಕಟ್ ರಾಘವ್.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

Trending