ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿಟ್ ಶೇ.2ಕ್ಕಿಂತ ಕಡಿಮೆ ಇದ್ದರೂ, ಸರ್ಕಾರದ ಆದೇಶದಂತೆ ಈ ವಾರವೂ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಈ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತವೆ. ಈ ಅವಧಿಯಲ್ಲಿ ಪಬ್ ಗಳನ್ನು ತೆರೆಯುವಂತಿಲ್ಲ.
ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಇತರ ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ. ಮದುವೆ ಇತ್ಯಾದಿ ಶುಭ ಸಮಾರಂಭಗಳಿಗೆ ಸಭಾಂಗಣದ ಸಾಮರ್ಥ್ಯದ ಶೇ. 50 ರಷ್ಟು ಮತ್ತು ಗರಿಷ್ಠ 400 ಜನರಿಗೆ ಮೀರದಂತೆ ನಡೆಸಬಹುದಾಗಿದೆ.
ಅಂತ್ಯ ಸಂಸ್ಕಾರದಲ್ಲಿ 20 ಮಂದಿಗಿಂತ ಹೆಚ್ಚು ಜನರು ಸೇರುವಂತಿಲ್ಲ. ತರಬೇತಿಗೆ ಮಾತ್ರ ಈಜುಕೊಳಗಳನ್ನು, ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸೇಡಿಯಂಗಳನ್ನು ತೆರೆಯಬಹುದಾಗಿದೆ.
ಪ್ರೇಕ್ಷಕರಿಗೆ ಅನುಮತಿ ಇಲ್ಲ, ಉಳಿದ ಎಲ್ಲಾ ವ್ಯವಹಾರಗಳನ್ನು ಕೋಡ್ ನಿಯಮಾವಳಿ ಪಾಲನೆಯೊಂದಿಗೆ ನಡೆಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆ