Connect with us

DAKSHINA KANNADA

ಈ ವಾರಂತ್ಯದಲ್ಲೂ ವೀಕೆಂಡ್ ಕರ್ಫ್ಯೂ ಇರಲಿದೆ: ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ

Published

on

ಮಂಗಳೂರು: ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ. ಈ ವಾರಂತ್ಯದಲ್ಲೂ ವೀಕೆಂಡ್ ಕರ್ಫ್ಯೂ ಇರಲಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಆದೇಶ ಹೊರಡಿಸಲಿದ್ದೇವೆ. ಪರೀಕ್ಷೆಗೆ ತೆರಳುವವರು ಇದ್ದರೆ ಹಾಲ್ ಟಿಕೆಟ್ ತೋರಿಸಿ ಪ್ರಯಾಣ ಮಾಡಬಹುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಕೋವಿಡ್ 3ನೆ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ತುಳುನಾಡಿನ ಪ್ರಮುಖ ಆಚರಣೆಯಾದ ನಾಗರ ಪಂಚಮಿಯ ದಿನದಂದೂ ದೇವಾಲಯಗಳಲ್ಲಿ ಭಕ್ತರಿಂದ ವಿಶೇಷ ಪೂಜೆ, ಸೇವೆಗಳಿಗೆ ಅವಕಾಶವಿರುವುದಿಲ್ಲ. ಸಾಂಪ್ರದಾಯಿಕವಾಗಿ ದೇವಸ್ಥಾನಗಳ ಅರ್ಚಕರಿಂದ ನಡೆಯುವ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಜಿಲ್ಲೆಯಲ್ಲಿ ನಾಗಬನ ಹಾಗೂ ಕುಟುಂಬದ ಮನೆಗಳಲ್ಲಿ ಆಚರಿಸಲಾಗುವ ಪೂಜೆಗಳನ್ನು ಕೂಡಾ ಕೋವಿಡ್ ಮಾರ್ಗಸೂಚಿಯೊಂದಿಗೆ ಯಾವುದೇ ರೀತಿಯಲ್ಲಿ ಜನ ಸಮೂಹವಾಗದಂತೆ ಜಾಗೃತಿಯೊಂದಿಗೆ ನೆರವೇರಿಸಲು ಸ್ಥಳೀಯ ಪಿಡಿಒಗಳ ಮೇಲ್ವಿಚಾರಣೆಯಲ್ಲಿ ನಡೆಸುವಂತೆ ಸೂಚಿಸಲಾಗಿದೆ. ಸ್ವಾತಂತ್ರ ದಿನಾಚರಣೆಯು ಕೂಡಾ ನಿಗದಿತ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಇಲ್ಲದೆ ನಡೆಸಲಾಗುತ್ತದೆ. ಕೃಷ್ಣ ಜನ್ಮಾಷ್ಠಮಿ, ಗಣೇಶ ಹಬ್ಬದ ಸಂದರ್ಭದಲ್ಲೂ ಸಾರ್ವಜನಿಕವಾಗಿ ಚಪ್ಪರ, ಶಾಮಿಯಾನ ಹಾಕಿಕೊಂಡು, ಮೆರವಣಿಗೆಯೊಂದಿಗೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶ ನೀಡದಿರಲು ಈಗಾಗಲೇ ಚಿಂತನೆ ಮಾಡಲಾಗಿದೆ ಎಂದು ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending