Saturday, June 3, 2023

ಈ ವರ್ಷವೂ ದೆಹಲಿಯಲ್ಲಿ ಪಟಾಕಿ ನಿಷೇಧ ಎಂದ ಕೇಜ್ರಿವಾಲ್‌

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟ್ಟರ್‌ನಲ್ಲಿ ಘೋಷಿಸಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್,

ಕಳೆದ ವರ್ಷದಂತೆಯೇ ಈ ವರ್ಷವೂ ಪಟಾಕಿಗಳ ಶೇಖರಣೆ, ಮಾರಾಟ ಹಾಗೂ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿರುವ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿತ್ತು ಎಂದು ಕೇಜ್ರಿವಾಲ್ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics