Home ಕರ್ನಾಟಕ ವಾರ್ತೆ ಮೋದಿ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್​ಗೆ ಆದ ಗತಿಯೇ ಆಗುತ್ತದೆ: ಸಿದ್ಧಲಿಂಗ ಸ್ವಾಮೀಜಿ ಹೇಳಿಕೆ

ಮೋದಿ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್​ಗೆ ಆದ ಗತಿಯೇ ಆಗುತ್ತದೆ: ಸಿದ್ಧಲಿಂಗ ಸ್ವಾಮೀಜಿ ಹೇಳಿಕೆ

ಮೋದಿ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್​ಗೆ ಆದ ಗತಿಯೇ ಆಗುತ್ತದೆ: ಸಿದ್ಧಲಿಂಗ ಸ್ವಾಮೀಜಿ ಹೇಳಿಕೆ

ರಾಯಚೂರು: ವಿವಾದಾತ್ಮಕ ಹೇಳಿಕೆಗಳಿಂದ ಭಾರೀ ಟೀಕೆಗೊಳಗಾಗಿದ್ದ ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಮತ್ತೊಮ್ಮೆ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಎಡಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್​ ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್​ಗೆ ಆದ ಗತಿಯೇ ಆಗುತ್ತದೆ ಎಂದು ಸಿದ್ಧಲಿಂಗ ಸ್ವಾಮೀಜಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ರಾಯಚೂರಿನ ಶಕ್ತಿನಗರದಲ್ಲಿ ಫೆ. 2ರಂದು ನಡೆದ ಧರ್ಮ ಸಮ್ಮೇಳನದಲ್ಲಿ ಮಾತನಾಡಿರುವ ಆಂದೋಲ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿಕೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಚೋದನಕಾರಿ ಭಾಷಣ ಮಾಡಿರುವ ಸ್ವಾಮೀಜಿ ವಿರುದ್ಧ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶ್ರೀರಾಮ ಸೇನೆಯ ಕಾರ್ಯಾಧ್ಯಕ್ಷರೂ ಆಗಿರುವ ಸಿದ್ಧಲಿಂಗ ಸ್ವಾಮೀಜಿ ಭಾಷಣದ ತುಣುಕು ಈಗ ವೈರಲ್ ಆಗಿದೆ. ಇವರು ರಾಯಚೂರಿನಲ್ಲಿ ಈ ಭಾಷಣ ಮಾಡುವಾಗ ಶ್ರೀರಾಮಸೇನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಕೂಡ ವೇದಿಕೆಯ ಮೇಲಿದ್ದರು. ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ದ ಮಾತನಾಡುವವರಿಗೆ ಗೌರಿ ಲಂಕೇಶ್​ಗೆ ಆದ ಗತಿಯೇ ಆಗುತ್ತದೆ. ಇನ್ನೂ 14-15 ವಯಸ್ಸು ದಾಟದವರು ಕೂಡ ಮೋದಿ, ಅಮಿತ್ ಶಾ ಬಗ್ಗೆ ಮಾತನಾಡುತ್ತಿದ್ದಾರೆ.

ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶ್​ಗೆ ಆದ ಗತಿಯಾಗುವುದರಲ್ಲಿ ಅನುಮಾನವಿಲ್ಲ ಎಂದು ಸಿದ್ಧಲಿಂಗ ಸ್ವಾಮೀಜಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಈ ಹಿಂದೆ ಕೂಡ ಇದೇ ರೀತಿಯ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಈ ಅಂದೋಲ ಮಠದ ಸ್ವಾಮೀಜಿ ಸುದ್ದಿಯಾಗಿದ್ದರು. ಕಳೆದ ವರ್ಷ ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡುವಾಗ, ‘ರಾಮ ಸುಳ್ಳು ಅಂದೋರೆಲ್ಲ ಗೋರಿ ಸೇರಿದ್ದಾರೆ.

ರಾಮ ಸುಳ್ಳು ಎಂದಿದ್ದ ಕರುಣಾನಿಧಿ, ಯು.ಆರ್. ಅನಂತಮೂರ್ತಿ ಗೋರಿ ಸೇರಿದ್ದಾರೆ. ಹಿಂದೂಗಳ ವಿರುದ್ಧ ಮಾತನಾಡುತ್ತಿದ್ದ ಗೌರಿ ಲಂಕೇಶ್ ಕೂಡ ಗೋರಿ ಸೇರಿದ್ದಾಳೆ. ಇನ್ನು ಮೈಸೂರಿನ ಸೈತಾನ್ ಒಬ್ಬ ಉಳಿದಿದ್ದಾನೆ. ಅವನೂ ಶೀಘ್ರದಲ್ಲೇ ಗೋರಿ ಸೇರಲಿದ್ದಾನೆ’ ಎಂದು ಪರೋಕ್ಷವಾಗಿ ಚಿಂತಕ ಭಗವಾನ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...