Friday, May 27, 2022

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರದ ಗಡಿ ದಾಟಿದ ಸಾವಿನ ಸಂಖ್ಯೆ -ಕೊರೊನಾಕ್ಕೆ ಇಂದು ಮತ್ತೆ 11 ಬಲಿ..!

ಮಂಗಳೂರು : ನಾಡಿನಾದ್ಯಂತ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಾತ್ರ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ,

ಜಿಲ್ಲೆಯಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ ಸಾವಿರ ಗಡಿ ದಾಟಿದೆ. ಹಾಗೆಯೇ ಇಂದು ಕೊರೋನಾ ಮಹಾಮಾರಿಗೆ ಹನ್ನೊಂದು ಮಂದಿ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 1,009 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 679 ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಇಂದಿನ ಪಾಸಿಟಿವಿಟಿ ರೇಟ್ 7.17% ದಾಖಲಾಗಿದೆ ಜೊತೆಗೆ ಇಂದು 657 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 6,605 ಆಕ್ವೀವ್ ಕೇಸ್ ಗಳಿದ್ದು, ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 86,344 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

Hot Topics