Thursday, February 9, 2023

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಯ ಸಹೋದರನಿಂದ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಜೀವ ಬೇದರಿಕೆ ಕರೆ…!!

ಬೆಳ್ಳಾರೆ ಸೆಪ್ಟೆಂಬರ್ 10: ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿಯ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಜಮಾಯಿಸಿದ ಘಟನೆ ನಡೆದಿದೆ.


ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸಫ್ರಿದ್ ಎಂಬಾತ ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ ನ ಮ್ಯಾನೇಜರ್ ಪ್ರಶಾಂತ್ ರೈವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.


ಇಂದು ಸಂಜೆ ಪ್ರಶಾಂತ್ ರೈಯವರಿಗೆ ಕರೆ ಮಾಡಿರುವ ಸಫ್ರಿದ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದಾಗಿಯೂ , ಕೊಲ್ಲುವುದಾಗಿ ಬೆದರಿಸಿರುವುದಾಗಿಯೂ ಆರೋಪಿಸಲಾಗಿದೆ. ಈ ಬಗೆಗಿನ ಆಡಿಯೋ ರೆಕಾರ್ಡ್ ಪ್ರಶಾಂತ್ ಬಳಿ ಇದೆ ಎನ್ನಲಾಗುತ್ತಿದೆ. ಪ್ರಶಾಂತ್ ಅವರು ದೂರು ನೀಡಲು ಠಾಣೆಗೆ ಆಗಮಿಸಿದ್ದಾರೆ. ಈ ಸಂದರ್ಭ ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ನೂರಾರು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿದ್ದಾರೆ. ಸಫ್ರೀದ್ ನನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸಿದ್ದಾರೆ.

1 COMMENT

LEAVE A REPLY

Please enter your comment!
Please enter your name here

Hot Topics

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...