Wednesday, September 28, 2022

ಉಳ್ಳಾಲ: ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವು-ಮೂವರ ಬಂಧನ

ಉಳ್ಳಾಲ: ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಉಳ್ಳಾಲದ ಮಾಡೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ ಹೈದರಾಲಿ(24), ಬಂಟ್ವಾಳ ಸಿದ್ದಕಟ್ಟೆಯ ಸಂಗಬೆಟ್ಟುವಿನ ಮುಹಮ್ಮದ್ ಆರೀಫ್(30) ಬಂಧಿತರು.


ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಮಾಡೂರು ಸೈಟ್‌ನಲ್ಲಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿ ಜಾನುವಾರು ಕಳ್ಳತನ ಮಾಡಿದ ಘಟನೆಗೆ ಸಂಬಂಧಿಸಿದಂತೆ ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ಬಂಧಿಸಿದೆ.

ಮಾಡೂರು ಸೈಟ್ ನಿವಾಸಿ ಸತೀಶ್ ಎಂಬವರಿಗೆ ಸೇರಿದ ರೂ. 30,000 ಬೆಲೆಬಾಳುವ 4 ವರ್ಷ ಪ್ರಾಯದ ಹೋರಿ ಎತ್ತನ್ನು ಆರೋಪಿಗಳು ಕಳವು ನಡೆಸಿದ್ದರು.

ಆ.22. ರಂದು ಮಾಡೂರು ವನದುರ್ಗ ಅಯ್ಯಪ್ಪ ಮಂದಿರದ ಅಶ್ವತ್ಥಕಟ್ಟೆಯ ಬಳಿ ಕಟ್ಟಿ ಹಾಕಲಾಗಿದ್ದ ಹೋರಿಯನ್ನು ನಸುಕಿನ ಜಾವ 4.25 ಕ್ಕೆ ಇಬ್ಬರು ಆರೋಪಿಗಳು ಬಲಾತ್ಕಾರವಾಗಿ ಹಿಂಸಾತ್ಮಕವಾಗಿ ಎಳೆದೊಯ್ಯುವಾಗ ಜೋರಾಗಿ ಕೂಗುವುದನ್ನು ಗಮನಿಸಿ ಮಾಲೀಕ ಸತೀಶ್ ಅವರು ಓಡಿಬಂದಿದ್ದರು.

ಈ ವೇಳೆ ತಲವಾರು ಮತ್ತು ದೊಣ್ಣೆ ತೋರಿಸಿದ ದುಷ್ಕರ್ಮಿಗಳು, ಅಡ್ಡಿಪಡಿಸಿದರೆ ಕೊಲ್ಲುವುದಾಗಿ ಜೀವಬೆದರಿಕೆಯೊಡ್ಡಿ ಜಾನುವಾರನ್ನು ಕಾರಿನೊಳಗಡೆ ತುಂಬಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ‌.

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ತನಿಖೆ ನಡೆಸಿದ ಎಸಿಪಿ ನೇತೃತ್ವದ ಉಳ್ಳಾಲ ಪೊಲೀಸ್ ತಂಡ ಮೂವರನ್ನು ಬಂಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯ ಬಂಧನ ಇನ್ನಷ್ಟೇ ಆಗಬೇಕಿದ್ದು, ಆತ ಪರಾರಿಯಾಗಿದ್ದಾನೆ.

LEAVE A REPLY

Please enter your comment!
Please enter your name here

Hot Topics

ಅಪರಿಚಿತರಿಂದ ಕಾಲಿವುಡ್‌ ‘ಆ್ಯಕ್ಷನ್‌ ಸ್ಟಾರ್’ ವಿಶಾಲ್ ಮನೆಗೆ ಕಲ್ಲು ತೂರಾಟ

ಚೆನ್ನೈ: ಕಾಲಿವುಡ್‌ನ 'ಆ್ಯಕ್ಷನ್‌ ಸ್ಟಾರ್' ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್‌ಮ್ಯಾನ್‌ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ...

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು...

ಕೇರಳದಲ್ಲಿ ಸಿನಿಮಾ ಪ್ರಚಾರಕ್ಕೆ ತೆರಳಿದ ನಟಿಯರ ಮೇಲೆ ಅಭಿಮಾನಿಯಿಂದ ಲೈಂಗಿಕ ದೌರ್ಜನ್ಯ : ನಟಿಯಿಂದ ಅಭಿಮಾನಿಗೆ ದಂಡಂ ದಶಗುಣಂ..!

ಅಭಿಮಾನಿಯೋರ್ವ ನಟಿಯನ್ನು ಎಳೆದುಕೊಂಡು ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಮುಟ್ಟಬಾರದ ಜಾಗಗಳಿಗೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಯಿಕ್ಕೋಡ್ : ಸಿನಿಮಾ ಪ್ರಚಾರಕ್ಕೆ ತೆರಳಿದ ಮಲಯಾಳಂ ನಟಿಯರ...