Connect with us

DAKSHINA KANNADA

ರಾಜ್ಯದಲ್ಲಿ ಮತ್ತೆ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ..!

Published

on

ರಾಜ್ಯದಲ್ಲಿ ಮತ್ತೆ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ..!

ಬೆಂಗಳೂರು : ವಾತಾವರಣದಲ್ಲಿ ಸಾಕಷ್ಟು ಬದಲಾವಣೆ ಯಾಗಿದ್ದು ಮುಂಗಾರು ಮಳೆ ಚುರುಕಾಗಿದೆ. ಹಲವೆಡೆ ಈಗಾಗಲೇ ಮಳೆಯಾಗುತ್ತಿದ್ದು ಇನ್ನು ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ.

ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ರಾಮನಗರ, ಚಾಮರಾಜನಗರ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.

ಕೆಲವು ಕಡೆ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿದ್ದರೆ, ಕೆಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿರುವ ವರದಿಯಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವಲ್ಲದೆ, ಎರಡು-ಮೂರು ಮೇಲ್ಮೈ ಸುಳಿಗಾಳಿಗಳು ಉಂಟಾಗಿವೆ. ಈ ಹಿನ್ನೆಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ.

ಜೊತೆಗೆ ವಾಯುಭಾರ ಕುಸಿತ ತೀವ್ರ ಸ್ವರೂಪ ಪಡೆಯುವ ಸಾಧ್ಯತೆಗಳಿವೆ. ಹೀಗಾಗಿ ಅಕ್ಟೋಬರ್ 15ರ ನಂತರ ಮುಂಗಾರು ಮರಳುವಿಕೆ ಪ್ರಾರಂಭವಾಗುವುದು. ಇದರಿಂದ ಹಿಂಗಾರು ಮಳೆಯ ಆರಂಭವೂ ವಿಳಂಬವಾಗುವ ಸಾಧ್ಯತೆಗಳಿವೆ.

DAKSHINA KANNADA

ಕರಾವಳಿ ಉತ್ಸವ : ಸಂಗೀತ ರಸಮಂಜರಿ, ಮುಖ್ಯಮಂತ್ರಿ ಆಗಮನ

Published

on

ಮಂಗಳೂರು : ಕರಾವಳಿ ಉತ್ಸವ ವಸ್ತುಪ್ರದರ್ಶನ ವೇದಿಕೆಯಲ್ಲಿ ಇಂದು (ಜ.16) ಸಂಜೆ 6 ಗಂಟೆಯಿಂದ ಸ್ಟಾರ್ ಸಿಂಗರ್ಸ್,ಮಂಗಳೂರು ತುಳು ಚಲನಚಿತ್ರ ಕಲಾವಿದರಿಂದ ‘ಸಂಗೀತ ರಸಮಂಜರಿ’ ಕಾರ್ಯಕ್ರಮ ನೆರವೇರಲಿದೆ.

ಮುಖ್ಯಮಂತ್ರಿ ಪ್ರವಾಸ :

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ನಾಳೆ ಬೆಳಗ್ಗೆ 11:30 – ಮಂಗಳೂರು ವಿಮಾನ ನಿಲ್ದಾಣ ಆಗಂಇಸಲಿದ್ದಾರೆ. ನಂತರ ಮೇರಿಹಿಲ್ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮಂಗಳೂರು ಪ್ರಾದೇಶಿಕ ಕಚೇರಿ ಕಟ್ಟಡ ಶಿಲಾನ್ಯಾಸ ಭೇಟಿ ನೀಡಲಿದ್ದು, ಮಧ್ಯಾಹ್ನ 12:15 – ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ – ಕರ್ನಾಟಕ ಸುವರ್ಣ ಸಂಭ್ರಮ 50 ಉದ್ಘಾಟನೆ ಮಾಡಲಿದ್ದಾರೆ.

 

ಇದನ್ನೂ ಓದಿ : ನಾಗಾಸಾಧುಗಳ ಬಗ್ಗೆ ನಿಮಗೆ ಗೊತ್ತಿಲ್ಲದ ಸತ್ಯಾಂಶಗಳು : ಭಾಗ – 2

 

ಸಂಜೆ 5 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ 2025 ಉದ್ಘಾಟನೆ ಮಾಡಿ, ರಾತ್ರಿ 8 ಗಂಟೆಗೆ ವಿಮಾನದ ಮೂಲಕ ಮುಖ್ಯಮಂತ್ರಿಗಳು ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

Continue Reading

DAKSHINA KANNADA

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೆಚ್ಚು ಲಾಭ ಆಮಿಷ; ಇಬ್ಬರು ಆರೋಪಿಗಳ ಸೆರೆ

Published

on

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೆಚ್ಚು ಲಾಭ ಬರುತ್ತದೆ ಎಂಬ ಆಮಿಷ ಒಡ್ಡಿ ಸೈಬರ್ ಮೂಲಕ ವಂಚಿಸಿದ ಪ್ರಕರಣವೊಂದನ್ನು ಮಂಗಳೂರು ಸೆನ್‌ ಕ್ರೈಮ್‌ ಪೊಲೀಸರು ಬೇಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೇರಳದ ಕಣ್ಣೂರಿನ ಪತಾಯಕುನ್ನು ಉಮ್ಮರ್ ವಲಿಯ ಪರಂಬತ್ (41) ಮತ್ತು ರಿಯಾಝ್ ಎಂ.ವಿ. (45) ಬಂಧಿತ ಆರೋಪಿಗಳು ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಪಡೆಯ ಬಹುದು ಎಂಬ ವಾಟ್ಸ್‌ಆ್ಯಪ್ ಸಂದೇಶವನ್ನು ಗಮನಿಸಿದ ಮಂಗಳೂರಿನ ವ್ಯಕ್ತಿಯೊಬ್ಬರು ಹಂತ ಹಂತವಾಗಿ 77,96,322.08 ರೂ.ವನ್ನು ಪಾವತಿಸಿದ್ದರು.

ಆದರೆ ಆರೋಪಿಗಳು ಲಾಭಾಂಶ ನೀಡದೆ ವಂಚಿಸಿದ್ದರು. ಈ ಬಗ್ಗೆ ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು ಸೆನ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರಿಗೆ ಕಾರು ಢಿಕ್ಕಿ; ಸವಾರ ದುರ್ಮರಣ

ವ್ಯಕ್ತಿಯಿಂದ ಪಾವತಿಯಾಗಿದ್ದ ಹಣದ ವಿವರಕ್ಕೆ ಸಂಬಂಧಿಸಿ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಗೆ 26,27,114.4 ರೂಪಾಯಿ ವರ್ಗಾವಣೆಯಾಗಿರುವುದು ಹಾಗೂ ಬಳಿಕ ಈ ಖಾತೆಯಿಂದ ಉಮರ್ ವಲಿಯ ಪರಂಬತ್ ಎಂಬಾತನ ಬ್ಯಾಂಕ್ ಖಾತೆಗೆ 6 ಲಕ್ಷ ರೂ. ಪಾವತಿಯಾಗಿರುವುದು ಕಂಡು ಬಂತು.

ತನಿಖೆ ಕೈಗೊಂಡಾಗ ರಿಯಾಝ್ ಎಂ.ವಿ. ಎಂಬಾತನು ಹಣವನ್ನು ವರ್ಗಾವಣೆ ಮಾಡಿಸಿದ್ದ. ಹೀಗೆ ಈ ಪ್ರಕರಣದಲ್ಲಿ ಭಾಗಿಯಾದ ಕೇರಳ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸೆನ್ ಪೊಲೀಸ್‌ ಠಾಣಾಧಿಕಾರಿಯೂ ಆಗಿರುವ ಎಸಿಪಿ ರವೀಶ್ ನಾಯಕ್, ಇನ್ಸ್ ಪೆಕ್ಟರ್‌ ಸತೀಶ್ ಎಂ.ಪಿ., ಸಬ್ ಇನ್ಸ್ ಪೆಕ್ಟರ್‌ ಗುರಪ್ಪಕಾಂತಿ ನೇತೃತ್ವದ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು

Continue Reading

DAKSHINA KANNADA

ರಾಜ್ಯ ಮಟ್ಟದ ತ್ರೋಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದ ದರ್ಬೆ ಬೆಥನಿ ಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನ

Published

on

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿದಿನಾಂಕ 8/9ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ವನ್ನು ಪಡೆದ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ , ಸ್ನಿಗ್ಧ, ಆಯಿಷಾತ್ ಹಿಬಾ ಸಮನ್ವಿ, ಹಿತಾಶ್ರೀ, ಜೆರುಷ, ರೇಯ ಇವರಿಗೆ ಶಾಲಾ ಸಂಚಾಲಕಿ ಭಗಿಣಿ ಪ್ರಶಾಂತಿ ಬಿ ಎಸ್ ಇವರ ನೇತೃತ್ವ ದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರು ಗಳು, ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಗಳು ಹಾಗೂ ಎರಡು ವಿಭಾಗದ ಮುಖ್ಯಪಾಧ್ಯಾಯರು ಗಳು ಭಾಗವಹಿಸಿದ್ದರು. ಜೊತೆಗೆ ರಾಜ್ಯಮಟ್ಟದಲ್ಲಿ ಸಾಧನೆಗೈದ ಮಕ್ಕಳ ಪೋಷಕರು ಕೂಡ ಭಾಗವಹಿಸಿದ್ದರು…ಮಕ್ಕಳು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆಯನ್ನು ಮಾಡಲು ಕಾರಣಕರ್ತರದ ಸಂಸ್ಥೆಯ ದೈಹಿಕ ಶಿಕ್ಷಕರಾದ ಶ್ರೀಯುತ ನಿರಂಜನ್, ಅಕ್ಷಯ್ ಹಾಗೂ ಹರೀಶ್ ಇವರನ್ನು ಕೂಡ ಸನ್ಮಾನಿಸಲಾಯಿತು. ಶಿಕ್ಷಕಿ ಪವಿತ್ರ ಇವರು ಸ್ವಾಗತ ಮಾಡಿದರು, ಅನಿತಾ ರೋಡ್ರಿ ಗಸ್ ವಂದನಾರ್ಪಣೆ ಗೈದರು,ಶಿಕ್ಷಕಿ ಸೌಮ್ಯ ಇವರು ಕಾರ್ಯಕ್ರಮವನ್ನು ನಿರೂಪಿಸಿದರು

Continue Reading

LATEST NEWS

Trending

Exit mobile version