Tuesday, January 26, 2021

ಆನೆ ದಾಳಿಗೆ ಒಂದೇ ದಿನ ಮೂವರು ಬಲಿ..!

ಆನೆ ದಾಳಿಗೆ ಒಂದೇ ದಿನ ಮೂವರು ಬಲಿ..!

ಛತ್ತೀಸ್​ಗಢ:  ಜಶ್ಪುರ ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆನೆ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಪಾಥಲ್​ಗಾನ್​ ಅರಣ್ಯ ವಿಭಾಗದಲ್ಲಿ ಭಾನುವಾರ ಸಂಜೆ ಈ ಘಟನೆ ಸಂಭವಿಸಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸರಾಯ್​ತೋಲಾ ನಿವಾಸಿಯಾದ 50 ವರ್ಷದ ದಿಲ್​ಸಾಯ್​​ ರಾವ್​ ಚೌಹಾಣ್ ಡುಮರ್​ಬಹಾರ್​ ಗ್ರಾಮದಿಂದ ಕೆಲಸ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಆನೆ ದಾಳಿಗೆ ಬಲಿಯಾಗಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಈ ಮಾರ್ಗದಲ್ಲಿ ಸಂಚಾರ ಮಾಡದಂತೆ ಮೊದಲೇ ಸೂಚನೆ ನೀಡಿದ್ದರೂ ಸಹ ನಿಯಮ ಉಲ್ಲಂಘಿಸಿದ ಚೌಹಾಣ್​ ಆನೆ ದಾಳಿಗೆ ಗುರಿಯಾಗಿದ್ದಾರೆ.

ಇನ್ನು 62 ವರ್ಷದ ಜಗತ್​ ರಾಮ್​ ಹಾಗೂ 65 ವರ್ಷದ ಕಾರು ಎಂಬವರು ಜಿಮ್ಕಿ ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಆನೆ ದಾಳಿಗೆ ಬಲಿಯಾಗಿದ್ದಾರೆ.

ಮೃತರ ಕುಟುಂಬಸ್ಥರಿಗೆ ತಲಾ 25 ಸಾವಿರ ರೂಪಾಯಿ ತುರ್ತು ಪರಿಹಾರ ನೀಡಲಾಗಿದೆ. ಉಳಿದ 5.75 ಲಕ್ಷ ರೂಪಾಯಿ ಪರಿಹಾರವನ್ನ  ನೀಡಲಾಗುತ್ತೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.