Monday, January 24, 2022

ಉಡುಪಿ: ಈಜಲು ಹೋದ ಮೂವರು PUC ವಿದ್ಯಾರ್ಥಿಗಳು ನೀರುಪಾಲು

ಉಡುಪಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.


ಮೃತರನ್ನು ಸುದರ್ಶನ್(16), ಸೋನಿತ್ (17) ಹಾಗೂ ಕಿರಣ್ (16) ಎಂದು ಗುರುತಿಸಲಾಗಿದೆ.
ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಮೇಲೆ ಎತ್ತಲಾಗಿದೆ.

ಸ್ಥಳಕ್ಕೆ ಹೆಬ್ರಿ ತಹಸೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಹಿತೇಶ್, ಪಿಎಸ್ಐ ಮಹೇಶ್, ಮುಖಂಡರಾದ ಸುರೇಶ್ ಶೆಟ್ಟಿ ಶಿವಪುರ, ರಮೇಶ್ ಪೂಜಾರಿ ಪರಿಶೀಲನೆ ನಡೆಸಿದರು.

Hot Topics

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...