ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಬಕ ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕಬಕ ಗ್ರಾಪಂ ವತಿಯಿಂದ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಚಾಲನೆ ಕೊಡುವ ಸಂದರ್ಭದಲ್ಲಿ ರಥಯಾತ್ರೆಯಲ್ಲಿದ್ದ ದೇಶ ಭಕ್ತರ ಭಾವಚಿತ್ರದ ಜೊತೆಗೆ ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ಕೂಡ ಅಳವಡಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟಿಸಿದ್ದರು.
ಈ ವೇಳೆ ಮಾತಿನ ಚಕಮಕಿ ನಡೆದು ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿದ್ದರು. ಸ್ವಾತಂತ್ರ್ಯ ಸ್ವರಾಜ್ಯ ರಥ ಅಡ್ಡಿಪಡಿಸಿ ದೇಶದ್ರೋಹದ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಿ ಕಬಕ ಗ್ರಾಪಂ ದೂರು ನೀಡಿತ್ತು.
ಈ ಸಂಬಂಧ ಪೊಲೀಸರು ಮೂವರು ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ.