ಆಂಧ್ರಪ್ರದೇಶ/ಮಂಗಳೂರು: ಸಮೋಸಾ ತಿಂದು ಮೂವರು ವಿದ್ಯಾರ್ಥಿಗಳು ಮೃ*ತಪಟ್ಟಿದ್ದು 24 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಕೈಲಾಸಪಟ್ಟಣದ ಅನಾಥಾಶ್ರಮದಲ್ಲಿ ಈ ಘಟನೆ ನಡೆದಿದೆ.
ಕೈಲಾಸಪಟ್ಟಣದ ಅನಾಥಾಶ್ರಮದಲ್ಲಿ ಎಂದಿನಂತೆ ಮಕ್ಕಳಿಗೆ ತಿಂಡಿಯನ್ನು ನೀಡಲಾಗಿದ್ದು, ತಿಂಡಿ ಜೊತೆ ಸಮೋಸಾಗಳನ್ನು ನೀಡಲಾಗಿದೆ. ಆದರೆ ಸಮೋಸಾ ತಿಂದ ವಿದ್ಯಾರ್ಥಿಗಳಲ್ಲಿ ಕೆಲವೇ ಗಂಟೆಗಳಲ್ಲಿ ಫುಡ್ ಪಾಯಿಸನ್ನಿಂದ ವಾಂತಿಯಾಗಲು ಪ್ರಾರಂಭಿಸಿ ತೀವ್ರ ಅಸ್ವಸ್ಥರಾಗಿದ್ದಾರೆ. ಒಟ್ಟು 27 ವಿದ್ಯಾರ್ಥಿಗಳು ಅಸ್ವಸ್ಥರಾದ ಕಾರಣ ತಕ್ಷಣ ಅವರನ್ನು ನರಸೀಪಟ್ಟಣಂ, ಅನಕಪಲ್ಲಿ ಹಾಗೂ ವಿಶಾಖಪಟ್ಟಣಂನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸಮೋಸಾ ವಿಷಕಾರಿಯಾಗಿದ್ದರಿಂದ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅನಕಪಲ್ಲಿ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಉಳಿದ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಇನ್ನು ಆಹಾರ ವಿಷವಾಗಲು ಕಾರಣವೇನು ಎಂಬುದನ್ನು ಸಂಪೂರ್ಣವಾಗಿ ತನಿಖೆ ನಡೆಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎನ್ನಲಾಗಿದೆ. ಮಕ್ಕಳು ಸಾವನ್ನಪ್ಪಿದ್ದಕ್ಕೆ ಗೃಹ ಸಚಿವೆ ಅನಿತಾ ಅವರು ತೀವ್ರ ದುಃಖಿತರಾಗಿದ್ದು ಉಳಿದ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.
ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.
ಮಂಗಳೂರು/ಬೆಂಗಳೂರು : ಅತ್ಯಾ*ಚಾರ, ಅಶ್ಲೀ*ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.
ಈ ಸಂದರ್ಭ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಅ*ತ್ಯಾಚಾರ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನವರಿ 13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡುವುದಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಜ್ವಲ್‌ಗೆ ಸ್ವಲ್ಪ ರಿಲೀಫ್ ಕೊಟ್ಟಿದೆ.
2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅಶ್ಲೀ*ಲ ವೀಡಿಯೋಗಳು ವೈರಲ್ ಆಗಿದ್ದವು. ಇದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.