ಮಂಗಳೂರು/ಉಡುಪಿ : ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳು ಕೊಂಚ ಇಳಿಮುಖ ಕಂಡಿವೆಯಾದರೂ ಕೊರೊನಾ ಸಾವಿನ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ.
ಇಂದು ಗುರುವಾರ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇಂದು 498 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಧೃಡ ಪಟ್ಟಿದೆ. ಜಿಲ್ಲೆಯಲ್ಲಿ ಇಂದಿನ ಪಾಸಿಟಿವಿಟಿ ರೇಟ್ ಶೇಕಡ 5.59 ದಾಖಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 1108 ಕೊರೊನಾ ಸಾವುಗಳು ಸಂಭವಿಸಿವೆ. ಇದೇ ಸಂದರ್ಭ ಇಂದು 702 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 90659 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಪ್ರಸ್ತುತ ಜಿಲ್ಲೆಯಲ್ಲಿ 6591 ಸಕ್ರೀಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಅತ್ತ ಉಡುಪಿಯಲ್ಲಿಂದು 123 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದರೆ 7 ಮಂದಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಇದೇ ಸಂದರ್ಭ 209 ಮಂದಿ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.