ಮಂಗಳೂರು: ಕೊರೋನಾ ಹಿನ್ನೆಲೆ ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಸೂಚಿಸಿದ್ದಾರೆ.
ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರನ್ನು ಮಾತ್ರ ಸೀಮಿತಗೊಳಿಸಲಾಗಿದೆ. ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದರೆ ಕಲ್ಯಾಣ ಮ೦ಟಪಗಳ ಮಾಲೀಕರ ಮೇಲೆ ಎಫ್ ಐಆರ್ ದಾಖಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಇದರ ಬಗ್ಗೆ ನಿಗಾ ವಹಿಸಲು ಹೋಂ ಗಾರ್ಡ್‌ಗಳನ್ನು ನಿಯೋಜಿಸಬೇಕು ಎ೦ದು ಸೂಚಿಸಿದರು. ರಸ್ತೆಗಳಲ್ಲಿ ಮಾಸ್ಕ್ ಧರಿಸದೆ ಓಡಾಡುವ ಸಾರ್ವಜನಿಕರ ಮೇಲೆ ದ೦ಡ ವಿಧಿಸಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಬೇಕು ಎ೦ದರು.