ಬೆಂಗಳೂರು : ಸೆಪ್ಟೆಂಬರ್ ಆರಂಭದಿಂದಲೇ ಕರ್ನಾಟಕದಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ರಾಮನಗರದಲ್ಲಿ ಸೆಪ್ಟೆಂಬರ್ 3 ರಿಂದ ಮುಂದಿನ ಎರಡು ದಿನ ಹಾಗೂ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್ 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು ಮತ್ತು ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆ. 3ರಿಂದ 5ರವರೆಗೂ ಮಳೆಯ ಅಬ್ಬರ ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ.
ಇಂದಿನಿಂದ ಸೆಪ್ಟೆಂಬರ್ 2ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.