BANTWAL
ಬಂಟ್ವಾಳದಲ್ಲಿ ಇಬ್ಬರು ಯುವಕರ ಪಾಲಿಗೆ ಯಮನ ರೂಪದಲ್ಲಿ ಬಂದ ಟಿಪ್ಪರ್..!
ಬಂಟ್ವಾಳ: ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳದ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ.
ನಿತಿನ್ ಹಾಗೂ ಶಶಿರಾಜ್ ಮೃತ ದುರ್ದೈವಿಗಳು.
ಸಿದ್ದಕಟ್ಟೆಯಿಂದ ಬಿ.ಸಿರೋಡು ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಸಿದ್ದಕಟ್ಟೆ ಸಮೀಪದ ಸೋರ್ನಾಡು ಬಳಿ ಎದುರಿನಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ನೇರವಾಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಬೈಕಿನಲ್ಲಿದ್ದ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಡಿದ್ದಾರೆ. ಬೈಕ್ ಸಂಪೂರ್ಣ ಜಖಂಗೊಂಡಿದೆ.
ಟಿಪ್ಪರ್ ಜತೆ ಪರಾರಿಯಾಗಲು ಯತ್ನಿಸಿದ ಡ್ರೈವರ್
ಅಪಘಾತ ನಡೆಸಿದ ತಕ್ಷಣ ಟಿಪ್ಪರ್ ಚಾಲಕ ಲಾರಿ ನಿಲ್ಲಿಸದೆ ಓಡಿ ಹೋಗಲು ಪ್ರಯತ್ನ ಮಾಡಿದ್ದಾನೆ. ತಕ್ಷಣ ಎಚ್ಚೆತ್ತ ಸ್ಥಳೀಯರು ಟಿಪ್ಪರ್ ಬೆನ್ನಿಟ್ಟಿ ಸಿದ್ದಕಟ್ಟೆ ಸಮೀಪದ ಕುದ್ಕೋಳಿ ಎಂಬಲ್ಲಿ ಟಿಪ್ಪರ್ ಲಾರಿಗೆ ಅಡ್ಡ ಇಟ್ಟು ಲಾರಿ ನಿಲ್ಲಿಸಿ ಚಾಲಕನ ವಿರುದ್ಧ ಹರಿಹಾಯಿದ್ದಿದ್ದಾರೆ.
ಅಜಾಗರೂಕತೆಯಿಂದ ಹಾಗೂ ಅತೀ ವೇಗವಾಗಿ ಚಾಲನೆ ಮಾಡುತ್ತಿದ್ದ ಟಿಪ್ಪರ್ ಲಾರಿ ಚಾಲಕನೇ ಅಪಘಾತಕ್ಕೆ ಕಾರಣವಾಗಿದ್ದು, ಇಬ್ಬರ ಸಾವಿಗೆ ಈತನೇ ನೇರ ಹೊಣೆಯಾಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
BANTWAL
Bantwala: ಅಕ್ಕಪಕ್ಕ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ..!
ಬಂಟ್ವಾಳ: ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಆಯಿಷತ್ ರಸ್ಮಾ (18) ಮತ್ತು ಮಹಮ್ಮದ್ ಸಿನಾನ್ (23) ನಾಪತ್ತೆಯಾದವರು. ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಾರೆ. ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಸಿನಾನ್ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
BANTWAL
Bantwala: ಅಕ್ರಮ ಮರ ಸಾಗಾಟ-ಇಬ್ಬರು ಆರೋಪಿಗಳು ವಶ..!
ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ಕೋಟೆಕಣಿಯಲ್ಲಿ ನಡೆದಿದೆ.
ಮರ ಹಾಗೂ ವಿವಿಧ ಜಾತಿಯ ದಿಮ್ಮಿಗಳನ್ನು ಪಿಕಪ್ ಮೂಲಕ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 2 ಪಿಕಪ್ ವಾಹನ,6 ಲಕ್ಷ ರೂ ಮೌಲ್ಯದ ದಿಮ್ಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಲು ಪಾಲ್ಗೊಂಡಿದ್ದರು. ವಲಯ ಅರಣ್ಯ ಅಧಿಕಾರಿ ಪ್ರಪುಲ್ ಶೆಟ್ಟಿ ಪಿ.ಅವರು ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.
BANTWAL
ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳದ ಧನೇಶ್ ಶೆಟ್ಟಿ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕ ಇಂಡೋನೇಶ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕುಕ್ಕಿಪ್ಪಾಡಿ ಹುಣಸೆಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಶ್ಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಶ್ಯಾದಲ್ಲಿ ನೆಲೆಸಿದ್ದು, ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ನಲ್ಲಿ ಆಸಕ್ತಿ ಹೊಂದಿದ್ದ ಇವರು ಇದೀಗ ಇಂಡೋನೇಸ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
- FILM7 days ago
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ನೋಡಿ ‘ಕತ್ತೆ’ ಎಂದ ಕಿಚ್ಚ ಸುದೀಪ
- bengaluru6 days ago
ಇನ್ಸ್ಟಾಗ್ರಾಂನಲ್ಲಿ 11 ಸಾವಿರ ಫಾಲೋವರ್ಸ್ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ ಸಂಗೀತಾ
- bengaluru6 days ago
ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ-ಉಪ್ಪಿನಂಗಡಿಯಿಂದ ಬೆಂಗಳೂರಿಗೆ ಕೋಣಗಳ ಪ್ರಯಾಣ
- DAKSHINA KANNADA6 days ago
Breaking news :ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ-ಒಳಗಿದ್ದ ವ್ಯಕ್ತಿ ಸಾವು