ಬಂಟ್ವಾಳ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಸವಾರ ಇಂದು ಮೃತಪಟ್ಟಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನ ತಲಪಾಡಿಯಲ್ಲಿ ನಿನ್ನೆ ದುರ್ಘಟನೆ ಸಂಭವಿಸಿತ್ತು.
ಫರಂಗಿಪೇಟೆಯ ಅಮ್ಮೆಮಾರ್ ನಿವಾಸಿ ಹರ್ಷಾದ್ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಜೀಮ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆಯ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ