Home ಕರ್ನಾಟಕ ವಾರ್ತೆ ಬಳ್ಳಾರಿಯಲ್ಲಿ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ ಮೂವರು ಸ್ಥಳದಲ್ಲೇ ಧಾರುಣ ಸಾವು

ಬಳ್ಳಾರಿಯಲ್ಲಿ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ ಮೂವರು ಸ್ಥಳದಲ್ಲೇ ಧಾರುಣ ಸಾವು

ಬಳ್ಳಾರಿ :ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಕೂಡ್ಮಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕಾರು ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರು ಚಾಲಕ ಹಾಗೂ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ವಗ್ರಾಮವಾದ ಕೊಪ್ಪಳ ಜಿಲ್ಲೆಯ ಕುಷ್ಟಗಿಗೆ ತೆರಳುತ್ತಿದ್ದ ವೇಳೆ ಅಪಘಾತವಾಗಿದೆ. ಅದೃಷ್ಟವಶಾತ್‌ 2 ವರ್ಷದ ಬಾಲಕಿ ಅಪಘಾತದಿಂದ ಪಾರಾಗಿದ್ದಾಳೆ. ಸ್ಥಳಕ್ಕೆ ಕೂಡ್ಲಿಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿಯ ಮೂರ್ನಾಡುನಲ್ಲಿ ವಸಂತ ಕುಮಾರ್ ಶಿಕ್ಷಕರರಾಗಿ ಸೇವೆ ಸಲ್ಲಿಸುತ್ತಿದ್ದು, ಇಳಕಲ್ಲಿನ ವಸಂತಕುಮಾರ್ ತನ್ನ ತಂದೆಯ ಶವಸಂಸ್ಕಾರಕ್ಕೆ ತೆರಳುವಾಗ ಘಟನೆ ನಡೆದಿದೆ. ವಸಂತ ಕುಮಾರ , ಪತ್ನಿ ವಿನುತ ಸೇರಿ ಒಟ್ಟು ಮೂವರು ಮೃತಪಟ್ಟಿದ್ದು ಎರಡು ವರ್ಷದ ಬಾಲಕಿ ರುತ್ವಿಕಾ ಈಗ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ವಿಡೀಯೋಗಾಗಿ

- Advertisment -

RECENT NEWS

ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ ಜೂ 13 ರಿಂದ ಪ್ರಾರ್ಥನೆಗೆ ಅವಕಾಶ

ಚರ್ಚ್ ಗಳಲ್ಲಿ ನಡೆಯುತ್ತಿದೆ ಭರದ ಸಿದ್ದತೆ ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚ್ ಗಳಲ್ಲಿ ಪ್ರಾರ್ಥನೆಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ. ಈ ಕುರಿತು...

ಜೂನ್ 8 ರಿಂದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ….!!

 ಶೀತ, ಕೆಮ್ಮು ಇದ್ದವರಿಗೆ ನಮಾಝ್ ಗೆ ಪ್ರವೇಶ ನಿರಾಕರಣೆ ಮಂಗಳೂರು : ರಾಜ್ಯ ಸರಕಾರ ಜೂನ್‌ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿರುವ ಹಿನ್ನಲೆ ಜೂನ್ 8 ರಿಂದ ಮಸೀದಿಗಳಲ್ಲಿ...

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...