Connect with us

LATEST NEWS

ಮಂಗಳೂರು: ಶಾರದಾ ವಿದ್ಯಾ ಸಂಸ್ಥೆಯಲ್ಲಿ ‘ತಿರಂಗಾ ಯಾತ್ರೆ’

Published

on

ಮಂಗಳೂರು: ‘ಅಜಾದಿ ಕಾ ಅಮೃತ ಮಹೋತ್ಸವ’ ಅಂಗವಾಗಿ ಆಯೋಜಿಸಿದ ತಿರಂಗಾ ಅಭಿಯಾನದಲ್ಲಿ ಮಂಗಳೂರಿನ ಕೊಡಿಯಾಲಬೈಲಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿ ‘ತಿರಂಗಾ ಯಾತ್ರೆ’ಯನ್ನು ವೈಶಿಷ್ಟ ಪೂರ್ಣವಾಗಿ ಆಚರಿಸಲಾಯಿತು.

ವಿದ್ಯಾ ಸಂಸ್ಥೆಯ ಎನ್.ಸಿ.ಸಿ ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ಜತೆಗೆ ವಿದ್ಯಾಲಯದ ಹತ್ತನೇ ತರಗತಿಯ ವಿದ್ಯಾರ್ಥಿಗಳು ಘೋಷ್ ವಾದ್ಯ ಸಹಿತ ಕೊಡಿಯಾಲಬೈಲ್, ಲೇಡಿಹಿಲ್, ಕುದ್ರೋಳಿ, ಕಾರ್‌ಸ್ಟಿçÃಟ್ಸ್, ಡೊಂಗರಕೇರಿಯ ಮುಖ್ಯ ರಸ್ತೆಗಳಲ್ಲಿ ಆಕರ್ಷಕ ಪಥಸಂಚಲನ ನಡೆಸಿದರು.
ಶಾರದಾ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ ಎಂ.ಬಿ.ಪುರಾಣಿಕ್‌ ಉದ್ಘಾಟಿಸಿ ಶುಭ ಹಾರೈಸಿದರು. ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಪ್ರದೀಪ ಕುಮಾರ ಕಲ್ಕೂರ, ಶಾರದಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್. ಮಹಾಬಲೇಶ್ವರ ಭಟ್, ವಿದ್ಯಾಲಯದ ಪ್ರಾಂಶುಪಾಲೆ ಸುನಿತಾ ವಿ ಮಡಿ, ಪದವಿಪೂರ್ವ ಕಾಲೇಜಿನ ಉಪ-ಪ್ರಾಂಶುಪಾಲ ಪ್ರಕಾಶ್ ನಾಯಕ್, ವಿದ್ಯಾಲಯದ ಉಪಪ್ರಾಂಶುಪಾಲರುಗಳಾದ ಲಕ್ಷ್ಮಿ ಉಡುಪ, ಲಕ್ಷ್ಮಿ ಕೆ. ಪೈ, ಶಿಕ್ಷಕಿಯರಾದ ಸ್ಮಿತಾ ನಾಯಕ್, ಸ್ಮಿತಾ ಸುರೇಶ್, ವಿನ್ಸಿ ಥೋಮಸ್, ಚಂದ್ರಿಕಾ, ವಿನಯಾ ವಸಂತ್ ಉಪಸ್ಥಿತರಿದ್ದರು.

ಉಪ-ಪ್ರಾಂಶುಪಾಲ ದಯಾನಂದ ಕಟೀಲ್ ತಿರಂಗ ಯಾತ್ರೆಗೆ ನಿರ್ದೇಶನಗೈದರು. ಎನ್.ಸಿ.ಸಿ. ಅಧಿಕಾರಿ ರತ್ನಾಕರ್, ಸ್ಕೌಟ್ಸ್-ಗೈಡ್ಸ್ ಅಧ್ಯಾಪಕ ದಿನೇಶ್, ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ ಶೆಟ್ಟಿ, ಚಿತ್ರಕಲಾ ಅಧ್ಯಾಪಕ ರೋಹಿತ್ ಕುಮಾರ್ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡು ನೇತೃತ್ವವನ್ನು ನೀಡಿದರು.

LATEST NEWS

ಮುಂದಿನ ಮೂರು ದಿನ ಈ ಭಾಗಗಳಲ್ಲಿ ಮಳೆಯಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ

Published

on

ಬೆಂಗಳೂರು : ಬಿಸಿಲಿನ ಬೇಗೆಯ ತಣಿಸಲು ಮಳೆರಾಯ ಆಗಮಿಸಿದ್ದಾನೆ. ರಾಜ್ಯದ ಹಲವೆಡೆ ಮಳೆಯಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.

ಗಾಳಿ, ಮಳೆ ಮುನ್ಸೂಚನೆ :

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿರುವ ಬಗ್ಗೆ ಹವಾಮಾನ ಇಲಾಖೆ ಶುಭ ಸುದ್ದಿ ಕೊಟ್ಟಿದೆ. ರಾಯಚೂರು, ವಿಜಯನಗರ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.

ಹವಾಮಾನ ಇಲಾಖೆಯ ಪ್ರಕಾರ ಗಂಟೆಗೆ 30ರಿಂದ 40 ಕಿಲೋ ಮೀಟರ್ ಗಾಳಿ ಬೀಸಲಿದ್ದು ಜನ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ತಂಪೆರೆದ ಮಳೆರಾಯ :

ಗುರುವಾರ ಧಾರವಾಡದಲ್ಲಿ ಆಲಿಕಲ್ ಸಮೇತ ಮಳೆ ಸುರಿದಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು ಅಲ್ಲಲ್ಲಿ ಮರಗಳು ಉರುಳಿವೆ. ಮಾತ್ರವಲ್ಲದೆ ವಿಜಯನಗರದ ಹೊಸಪೇಟೆಯಲ್ಲೂ ಭಾರೀ ಮಳೆಯಾಗಿದೆ. ತೀರ್ಥಹಳ್ಳಿಯಲ್ಲೂ ಭಾರೀ ಗಾಳಿ ಮಳೆಯಾಗಿದೆ.

ಇದನ್ನೂ ಓದಿ : ಮುಂದಿನ ಮೂರು ದಿನ ಈ ಭಾಗಗಳಲ್ಲಿ ಮಳೆಯಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ

ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಕೊಪ್ಪಳ, ವಿಜಯನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ವಿಜಯಪುರದಲ್ಲಿ ಗಾಳಿ, ಸಿಡಿಲು-ಗುಡುಗು ಸಹಿತ ಉತ್ತಮ ಮಳೆಯಾಗಿದೆ.

Continue Reading

LATEST NEWS

ಉಡುಪಿ : ಅಂಬಾಗಿಲಿನಲ್ಲಿ ಬೈಕ್ – ಟಿಪ್ಪರ್ ನಡುವೆ ಭೀಕರ ಅಪಘಾ*ತ; ಬೈಕ್ ಸವಾರ ಸಾ*ವು

Published

on

ಉಡುಪಿ : ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ಉಡುಪಿಯ ಅಂಬಾಗಿಲಿನಲ್ಲಿ ನಡೆದಿದೆ. ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಈ ದುರಂ*ತ ಸಂಭವಿಸಿದೆ.


ಬ್ರಹ್ಮಾವರ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಮೃ*ತ ದುರ್ದೈವಿ. ಪ್ರಭಾಕರ ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯರಸ್ತೆಗೆ ಬರುತ್ತಿದ್ದರು ಎನ್ನಲಾಗಿದೆ. ಅಪಘಾ*ತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಗುದ್ದಿದೆ.

ಇದನ್ನೂ ಓದಿ : ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

ಸಹಸವಾರ ಗಂಭೀ*ರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Continue Reading

bengaluru

ಹರ್ಷಿಕಾ ಪೂಣಚ್ಚ – ಭುವನ್ ಗೌಡ ದಂಪತಿ ಮೇಲೆ ಹ*ಲ್ಲೆ; ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ? ಏಂದು ಕೇಳಿದ ನಟಿ

Published

on

ಬೆಂಗಳೂರು : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ಭುವನ್ ಪೊನ್ನಣ್ಣ ದಂಪತಿ ಮೇಲೆ ಹ*ಲ್ಲೆ ನಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಿಣಾಮ ಭುವನ್ ಗೆ ಗಾ*ಯವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹರ್ಷಿಕಾ ಪೂಣಚ್ಚ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಗೆಳೆಯರೇ, ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ? ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಗ*ಲಾಟೆಯ ವೀಡಿಯೋವನ್ನೂ ಹರ್ಷಿಕಾ ಹಂಚಿಕೊಂಡಿದ್ದಾರೆ. ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಭ*ಯಾನಕ ಅನುಭವ ಆಗಿದೆ ಎಂದು ಅವರು ಹೇಳಿದ್ದಾರೆ.

ಹರ್ಷಿಕಾ ಬರೆದ ಪೋಸ್ಟ್ ನಲ್ಲಿ ಏನಿದೆ?

ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ? ನಮಸ್ಕಾರ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ.
ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯ ವಾಗ ಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ.

ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ “ಕರಾಮಾ” ಎಂಬ ರೆಸ್ಟೊರೆಂಟ್‌ನಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಭೋಜನವನ್ನು ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್‌ನಿಂದ ನಮ್ಮ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು, ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು.

ನನ್ನ ಪತಿಯ ಚಿನ್ನದ ಸರ ಕಸಿಯಲು ಯತ್ನ : 

ನನ್ನ ಪತಿ “ಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ” ಎಂದು ಹೇಳಿದರು. ಏಕೆಂದರೆ ಅವರು ಸಂಭವನೀಯ ಘಟನೆ ಬಗ್ಗೆ ಮಾತನಾಡುತ್ತಿದ್ದು ಅದರಲ್ಲಿ ಅರ್ಥವಿರಲಿಲ್ಲ. ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದೆವು, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು, ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು.

ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ನನಗೆ ಆಶ್ಚರ್ಯವಾಯಿತು. ಏಕೆಂದರೆ ಅವರು ಸಾಮಾನ್ಯವಾಗಿ ತುಂಬಾ ಸಿಟ್ಟು ಸ್ವಭಾವದವರು. 2 – 3 ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ 20 – 30 ಸದಸ್ಯರ ಗುಂಪು ಜಮಾಯಿಸಿತು ಮತ್ತು ಅವರಲ್ಲಿ 2 ಜನರು ನನ್ನ ಗಂಡನ ಚಿನ್ನದ ಸರವನ್ನು ಕಿತ್ತು, ಅದನ್ನು ಬಹಳ ಕೌಶಲ್ಯದಿಂದ ತಮ್ಮ ಕಡೆಗೆ ಎಳೆಯಲು ಪ್ರಯತ್ನಿಸಿದರು. ನನ್ನ ಪತಿ ಇದನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರು. ಅದನ್ನು ಹಿಡಿದಿಟ್ಟುಕೊಂಡು ನನಗೆ ಕೊಟ್ಟರು.

ಕನ್ನಡ ಮಾತನಾಡಿದ್ದಕ್ಕೆ ನಿಂದನೆ :

ಅಷ್ಟೊತ್ತಿಗಾಗಲೇ ಇಡೀ ತಂಡವು ಚಿನ್ನದ ಸರ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೈಗೆ ಸಿಗದೆ ರೊಚ್ಚಿಗೆದ್ದು ವಾಹನಕ್ಕೆ ಹಾನಿ ಮಾಡಿ ನಮಗೆ ಅಥವಾ ಯಾರಿಗೂ ಅರ್ಥವಾಗದ ವಿಷಯಗಳನ್ನು ಹೇಳಿ ನಮ್ಮನ್ನು ದೈಹಿಕವಾಗಿ ನಿಂದಿಸಲು ಪ್ರಯತ್ನಿಸಿದರು. ನಮ್ಮ ವಾಹನದಲ್ಲಿ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರಿಯಿಸಲಿಲ್ಲ.

ಅಲ್ಲದೆ, ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ಅವರು ನೀವು ನಮ್ಮ ಪ್ರದೇಶಕ್ಕೆ ಬಂದು ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ. “ಯೇ ಲೋಕಲ್ ಕನ್ನಡ್ ವಾಲಾ ಹೇ” (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಅದು ಅವರನ್ನು ಹೆಚ್ಚು ಕೆರಳಿಸಿತು.

ನಿಮ್ಮ “ಕನ್ನಡ ಸ್ಟೈಲ್”ಯನ್ನು ನೀವೇ ಇಟ್ಟುಕೊಳ್ಳಿ ಎಂದರು. ಆ ಗುಂಪಿನಲ್ಲಿ ಹೆಚ್ಚಿನವರು ಹಿಂದಿ, ಉರ್ದು ಮತ್ತು ಕೆಲವರು ಮುರಿದ ಕನ್ನಡದಲ್ಲಿ ಮಾತನಾಡುತ್ತಿದ್ದರು.

ಪೊಲೀಸರೂ ಸಹಾಯ ಮಾಡಲಿಲ್ಲ : 

ನಾನು ನಮಗೆ ಪರಿಚಯವಿದ್ದ ಒಬ್ಬರು ಇನ್ಸ್‌ಪೆಕ್ಟರ್‌ಗೆ ತುರ್ತು ಕರೆ ಮಾಡಿದಾಗ ಅವರೆಲ್ಲರೂ ಏನೂ ಆಗಿಲ್ಲ ಎಂಬಂತೆ ಕೆಲವೇ ಸೆಕೆಂಡುಗಳಲ್ಲಿ ಚದುರಿ ಹೋದರು. ನಾವು ಅವರನ್ನು ಹುಡುಕಲು ಪ್ರಯತ್ನಿಸಿದೆವು. ಆದರೆ ಅವರು ಮಾಯವಾಗಿದ್ದರು. ನಾವು ಸಮೀಪದಲ್ಲಿ ಹತ್ತಿರದ ಪೊಲೀಸ್ ಠಾಣೆಯ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ASI ಶ್ರೀ ಉಮೇಶ್ ಅವರಿಗೆ ವಿವರಿಸಿದೆವು.

ಅವರು ನಮಗೆ ಸಹಾಯ ಮಾಡಲು ಹೆಚ್ಚು ಆಸಕ್ತಿ ತೋರಲಿಲ್ಲ. ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದ ಅವರು, ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವನ್ನು ತೋರಲಿಲ್ಲ. ಕೇವಲ 2 ಕಟ್ಟಡಗಳ ಮುಂದಿರುವ ರೆಸ್ಟೊರೆಂಟ್‌ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್ ನಲ್ಲಿ ಕುಳಿತಿದ್ದರು.

ಈ ಘಟನೆಯ ನಂತರ ನಾನು ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಇನ್ನೂ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು. ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬಗಳು ಬೆಂಗಳೂರಿನಲ್ಲಿ ಇಂತಹ ಕೆಟ್ಟ ಅನುಭವಕ್ಕೆ ಒಳಗಾಗಬಾರದು ಎಂದು ನಾನು ಇದನ್ನು ಪೋಸ್ಟ್ ಮಾಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ನಾವು ಪಾಕಿಸ್ತಾನದಲ್ಲಿದ್ದೇವಾ? 

ಬೆಂಗಳೂರಿನಲ್ಲಿ ಶಾಂತಿಯುತವಾಗಿ ಜೀವನ ನಡೆಸುತ್ತಿರುವ ಜನರೊಂದಿಗೆ ಇಂತಹ ಗ*ಲಾಟೆ ಸೃಷ್ಟಿಸುವ ಹಕ್ಕು ಯಾರಿಗೂ ಇಲ್ಲ! ಇದನ್ನು ಕಣ್ಣೆದುರು ನೋಡುತ್ತಿರುವಾಗ ನನ್ನ ಮನಸ್ಸಿನಲ್ಲಿ ಒಂದೆರಡು ಪ್ರಶ್ನೆಗಳು ಮೂಡಿದವು.

1. ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ?
2. ಹಾಗಿದ್ದರೆ ನಾವು ನಮ್ಮ ಊರಿನಲ್ಲಿ ಕನ್ನಡ ಮಾತನಾಡುವುದೇ ತಪ್ಪಾ?
3. ನಮ್ಮ ಸ್ವಂತ ನಗರದಲ್ಲಿ ನಾವು ಎಷ್ಟು ಸುರಕ್ಷಿತವಾಗಿರುತ್ತೇವೆ?
4. ನಮ್ಮ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದು, ಇಂತಹ ದೀರ್ಘಾವಧಿಯ ಮಾನಸಿಕ ಆಘಾತಕ್ಕೆ ಕಾರಣವಾಗುವ ಇಂತಹ ಘಟನೆಗಳನ್ನು ಮುಚ್ಚಿ ಹಾಕಬೇಕೆ ?

‘ಕರ್ನಾಟಕದ ಮಾನ್ಯ ಮುಖ್ಯ ಮಂತ್ರಿಗಳು ಹಾಗು ಕರ್ನಾಟಕದ ರಾಜ್ಯ ಪೊಲೀಸ್ ಇಲಾಖೆಯವರು ಈ ಬಗ್ಗೆ ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ. ಇಂತಿ , ಹರ್ಷಿಕಾ ಪೂಣಚ್ಚ [ಚಿತ್ರನಟಿ]ಬೆಂಗಳೂರು. (ಈ ಇಡೀ ಘಟನೆಯ ನಡುವೆ ನನ್ನ ಕುಟುಂಬದ ಸದಸ್ಯರು ಚಿತ್ರೀಕರಿಸಿದ ವೀಡಿಯೊವನ್ನು ಪೋಸ್ಟ್ ಮಾಡುತ್ತಿದ್ದೇನೆ. ಅಷ್ಟು ಸ್ಪಷ್ಟವಾಗಿಲ್ಲ ಹಾಗು ಘಟನೆಯ ಮದ್ಯದಿಂದ ಅವರಿಗೆ ತಿಳಿದಷ್ಟು ಚಿತ್ರೀಕರಿಸಿದ್ದಾರೆ) ಎಂದು ಹರ್ಷಿಕಾ ಪೋಸ್ಟ್ ಮಾಡಿದ್ದಾರೆ.

 

ಇನ್ನು ಈ ಪೋಸ್ಟ್ ಗೆ ಹಲವರು ಕಮೆಂಟ್ಸ್ ಮಾಡಿದ್ದು, ಕಮಿಷನರ್ ಗೆ ಈ ಪೋಸ್ಟ್ ಟ್ಯಾಗ್ ಮಾಡಿ ಎಂದಿದ್ದಾರೆ. ಇನ್ನು ಕೆಲವರು, ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದಾರೆ. ಇಂತಹ ಹೋಟೆಲ್ ಹಾಗೂ ಸ್ಥಳಗಳಿಗೆ ಭೇಟಿ ನೀಡಬೇಡಿ ಎಂದು ಸಲಹೆ ನೀಡಿದ್ದಾರೆ.

Continue Reading

LATEST NEWS

Trending